ರಷ್ಯಾ-ಉಕ್ರೇನ್ ಯುದ್ಧ ನಿಲ್ಲಿಸಲು ಟ್ರಂಪ್-ಪುಟಿನ್ ಮಾತುಕತೆ

ವಾಷಿಂಗ್ಟನ್, ಫೆಬ್ರವರಿ 13: ರಷ್ಯಾ ಮತ್ತು ಉಕ್ರೇನ್‌ ನಡುವಿನ ಯುದ್ಧವನ್ನು ನಿಲ್ಲಿಸಲು ಅಮೆರಿಕ ಮಧ್ಯಸ್ಥಿಕೆ ವಹಿಸಲಿದೆ. ಈ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿದ್ದಾರೆ. 2022ರ ಬಳಿಕ ಅಮೆರಿಕ ಮತ್ತು ರಷ್ಯಾ ಅಧ್ಯಕ್ಷರು ನೇರವಾಗಿ ಮಾತಾಡಿದ್ದು, ಅದನ್ನು ಡೊನಾಲ್ಡ್‌ ಟ್ರಂಪ್‌ ಬಹಿರಂಗವಾಗಿ ಹೇಳಿಕೊಂಡಿದ್ದಾರೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಬುಧವಾರ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಜೊತೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ. ರಷ್ಯಾ ಮತ್ತು ಉಕ್ರೇನ್‌ ನಡುವಿನ ಯುದ್ಧ ನಿಲ್ಲಿಸಲು ಮಾತುಕತೆ ಆರಂಭಿಸಲು ಪುಟಿನ್ ಒಪ್ಪಿಗೆ ನೀಡಿದ್ದಾರೆ ಎಂದು ಟ್ರಂಪ್ ಹೇಳಿದ್ದಾರೆ.

Ending Russia Ukraine War Donald Trump Vladimir Putin Agree To Begin Negotiations

"ನಾವು ಈ ಬಿಕ್ಕಟ್ಟು ಬಗೆಹರಿಸಲು ಒಟ್ಟಾಗಿ ಕೆಲಸ ಮಾಡಲಿದ್ದೇವೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿದ್ದಾರೆ. ಅಮೆರಿಕ ಅಧ್ಯಕ್ಷರಾಗಿ 2ನೇ ಬಾರಿಗೆ ಅಧಿಕಾರವಹಿಸಿಕೊಂಡಿರುವ ಡೊನಾಲ್ಡ್‌ ಟ್ರಂಪ್‌ ರಷ್ಯಾ-ಉಕ್ರೇನ್ ಯುದ್ಧ ನಿಲ್ಲಿಸುವತ್ತ ಗಮನಹರಿಸಿದ್ದಾರೆ.

ಭರವಸೆ ನೀಡಿದ್ದರು: ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ರಷ್ಯಾ-ಉಕ್ರೇನ್ ಯುದ್ಧವನ್ನು ಕೊನೆಗೊಳಿಸುವ ಭರವಸೆ ನೀಡಿದ್ದಾರೆ ಎಂದು ನ್ಯೂಯಾರ್ಕ್ ಪೋಸ್ಟ್‌ ವರದಿ ಮಾಡಿತ್ತು. ಏರ್‌ಪೋರ್ಸ್‌ ಒನ್ ವಿಮಾನದಲ್ಲಿ ನ್ಯೂಯಾರ್ಕ್ ಪೋಸ್ಟ್‌ಗೆ ಟ್ರಂಪ್ ಸಂದರ್ಶನ ನೀಡಿದಾಗ ಈ ಕುರಿತು ಮಾತನಾಡಿದ್ದರು.

"ಜನರು ಸಾಯುವುದನ್ನು ನಾನು ನೋಡಲು ಬಯಸುವುದಿಲ್ಲ" ಎಂದು ಟ್ರಂಪ್ ಸಂದರ್ಶನದಲ್ಲಿ ಹೇಳಿದ್ದಾರೆ ಎಂದು ನ್ಯೂಯಾರ್ಕ್ ಪೋಸ್ಟ್‌ ವರದಿ ಮಾಡಿತ್ತು. ಆದರೆ ಈ ವರದಿಯನ್ನು ರಷ್ಯಾದ ವಕ್ತಾರ ಡಿಮಿಟ್ರಿ ಪೆಸ್ಕೊವ್ ನಿರಾಕರಿಸಿರಲಿಲ್ಲ, ಖಚಿತವೂ ಪಡಿಸಿರಲಿಲ್ಲ.

ಈಗ ಸ್ವತಃ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಬುಧವಾರ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಜೊತೆ ದೂರವಾಣಿ ಮೂಲಕ ಮಾತನಾಡಿರುವುದಾಗಿ ಹೇಳಿದ್ದಾರೆ. ಶೀಘ್ರವೇ ಟ್ರಂಪ್ ಮತ್ತು ಪುಟಿನ್ ಸೌದಿ ಅರೇಬಿಯಾ ಅಥವ ಯುಎಇನಲ್ಲಿ ಭೇಟಿಯಾಗಲಿದ್ದಾರೆ ಎಂದು ಅಂದಾಜಿಸಲಾಗಿದೆ.

ರಷ್ಯಾ ಮತ್ತು ಉಕ್ರೇನ್‌ ನಡುವಿನ ಯುದ್ಧ ಫೆಬ್ರವರಿ 24, 2022ರಂದು ಪ್ರಾರಂಭವಾಯಿತು. ಕೆಲವೇ ದಿನಗಳಲ್ಲಿ ಯುದ್ಧ ನಿಲ್ಲುವ ನಿರೀಕ್ಷೆ ಇತ್ತು. ಆದರೆ ಎರಡೂ ದೇಶಗಳ ನಡುವಿನ ಬಿಕ್ಕಟ್ಟು ಮುಂದುವರೆದಿದೆ. ಅಮೆರಿಕ ಅಧ್ಯಕ್ಷರಾಗಿದ್ದ ಜೋ ಬೈಡನ್ 2023ರಲ್ಲಿ ಉಕ್ರೇನ್‌ಗೆ ಭೇಟಿ ನೀಡಿದ್ದರು. ಯುದ್ಧ ಆರಂಭವಾದ ಬಳಿಕ ಇದು ಅಮೆರಿಕ ಅಧ್ಯಕ್ಷ ಮೊದಲ ಉಕ್ರೇನ್ ಭೇಟಿಯಾಗಿತ್ತು.

ಕಳೆದ ವಾರ ರಷ್ಯಾ ಉಕ್ರೇನ್‌ನ ಇಂಧನ ಮತ್ತು ಅನಿಲ ಮೂಲ ಸೌಕರ್ಯಗಳನ್ನು ಗುರಿಯಾಗಿಸಿಕೊಂಡು ದಾಳಿಗಳನ್ನು ನಡೆಸಿತ್ತು. ಈ ಕ್ಷಿಪಣಿ ದಾಳಿಗೆ ಎದುರಾಗಿ ಉಕ್ರೇನ್ ಪಡೆಗಳು ರಷ್ಯಾದ ತೈಲ ಸಂಸ್ಕರಣಾ ಘಟಕಗಳನ್ನು ಗುರಿಯಾಗಿಸಿ ದಾಳಿಗಳನ್ನು ನಡೆಸಿದ್ದವು.

ಕೆಲವು ದಿನಗಳ ಹಿಂದೆ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ಯುದ್ಧ ನಿಲ್ಲಿಸುವ ಕುರಿತು ತಮ್ಮನ್ನು ಹೊರಗಿಟ್ಟು ರಷ್ಯಾ ಮಾತುಕತೆ ನಡೆಸುವುದು ಅಪಾಯಕಾರಿ ಎಂದು ಹೇಳಿದ್ದರು. ಕದನ ವಿರಾಮ ಒಪ್ಪಂದವನ್ನು ರೂಪಿಸುವ ಮೊದಲು ಉಕ್ರೇನ್ ಮತ್ತು ಅಮೆರಿಕ ನಡುವೆ ಹಲವು ಸುತ್ತು ಚರ್ಚೆಗಳು ನಡೆಯಬೇಕು ಎಂದು ಹೇಳಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+