ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಇಂಗ್ಲೆಂಡ್: ಮೇ.17ರವರೆಗೂ ಅಂತಾರಾಷ್ಟ್ರೀಯ ವಿಮಾನ ಸಂಚಾರಕ್ಕೆ ನಿರ್ಬಂಧ

|
Google Oneindia Kannada News

ಲಂಡನ್, ಫೆಬ್ರವರಿ.23: ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಅನಗತ್ಯವಾಗಿರುವ ಅಂತಾರಾಷ್ಟ್ರೀಯ ವಿಮಾನಗಳ ಸಂಚಾರವನ್ನು ನಿರ್ಬಂಧಿಸಿ ಇಂಗ್ಲೆಂಡ್ ಪ್ರಧಾನಮಂತ್ರಿ ಬೋರಿಸ್ ಜಾನ್ಸನ್ ಆದೇಶ ಹೊರಡಿಸಿದ್ದಾರೆ.

ಫೆಬ್ರವರಿ.22 ರಿಂದ ಮೇ.17ರವರೆಗೂ ಅನಗತ್ಯವಾಗಿರುವ ಅಂತಾರಾಷ್ಟ್ರೀಯ ವಿಮಾನಗಳ ಸಂಚಾರಕ್ಕೆ ಇಂಗ್ಲೆಂಡ್ ಸರ್ಕಾರವು ನಿರ್ಬಂಧ ವಿಧಿಸಿದೆ. ವಿಮಾನ ಸಂಚಾರದಿಂದ ಅತಿಹೆಚ್ಚು ಕೊವಿಡ್-19 ಸೋಂಕು ಹರಡುವ ಅಪಾಯವಿದ್ದು, ರೂಪಾಂತರ ವೈರಸ್ ಭೀತಿ ಹಿನ್ನೆಲೆ ಈ ಕ್ರಮ ಜರುಗಿಸಲಾಗಿದೆ.

ಅಂತಾರಾಷ್ಟ್ರೀಯ ಪ್ರಯಾಣಿಕರು ಇಂದಿನಿಂದ ಈ ಸೂಚನೆಗಳನ್ನು ಪಾಲಿಸಲೇಬೇಕುಅಂತಾರಾಷ್ಟ್ರೀಯ ಪ್ರಯಾಣಿಕರು ಇಂದಿನಿಂದ ಈ ಸೂಚನೆಗಳನ್ನು ಪಾಲಿಸಲೇಬೇಕು

ಇಂಗ್ಲೆಂಡ್ ನಲ್ಲಿ ಕೊರೊನಾವೈರಸ್ ಸೋಂಕಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಲಾಕ್ ಡೌನ್ ಕ್ರಮಗಳನ್ನು ಜರುಗಿಸಲಾಗುತ್ತಿದೆ. ಮಾರ್ಚ್.08 ರಿಂದ ಎರಡನೇ ಹಂತದಲ್ಲಿ ಐದು ವಾರಗಳವರೆಗೂ ವಿಸ್ತರಿಸಲಾಗುತ್ತದೆ ಎಂದು ಪ್ರಧಾನಮಂತ್ರಿ ಮತ್ತು ಸಲಹೆಗಾರರು ತಿಳಿಸಿದ್ದಾರೆ.

England Govt Bans Non-Essential International Travel Till At Least May 17

ಏಪ್ರಿಲ್.12ರಂದು ಅಂತಾರಾಷ್ಟ್ರೀಯ ಸಂಚಾರ:

ಸುರಕ್ಷಿತ ರೀತಿಯಲ್ಲಿ ಅಂತಾರಾಷ್ಟ್ರೀಯ ಪ್ರವಾಸಕ್ಕೆ ಸಂಬಂಧಿಸಿದಂತೆ ಜಾಗತಿಕ ಸಂಚಾರಿ ಕಾರ್ಯಪಡೆಯು ಏಪ್ರಿಲ್.12ರಂದು ಶಿಫಾರಸ್ಸುಗಳನ್ನು ಮಾಡಲಿದೆ. ಬೇಸಿಗೆಯಲ್ಲಿ ಪ್ರವಾಸಕ್ಕೆ ಯೋಜನೆ ರೂಪಿಸಿಕೊಳ್ಳಲು ಸಾರ್ವಜನಿಕರಿಗೆ ಅವಕಾಶ ನೀಡಲಾಗುತ್ತದೆ ಎಂದು ಪ್ರಧಾನಮಂತ್ರಿ ಬೋರಿಸ್ ಜಾನ್ಸನ್ ಹೇಳಿದ್ದಾರೆ.

2020ರಲ್ಲಿ ವಿಮಾನಯಾನ ವಲಯವು ಅತ್ಯಂತ ಕೆಟ್ಟ ಪರಿಸ್ಥಿತಿಯನ್ನು ಎದುರಿಸಿತು. 2021ನೇ ಸಾಲಿನಲ್ಲೂ ಅದೇ ಪರಿಸ್ಥಿತಿ ಮುಂದುವರಿಯುವ ಅಪಾಯವೇ ಹೆಚ್ಚಾಗಿದೆ ಎಂದು ಏರ್ ಪೋರ್ಟ್ ಆಪರೇಟರ್ ಅಸೋಸಿಯೇಷನ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕರೇನ್ ದಿ ಹೇಳಿದ್ದಾರೆ.

English summary
England Govt Bans Non-Essential International Travel Till At Least May 17.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X