• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಯುರೋಪ್: ಜನವರಿ ಹೊತ್ತಿಗೆ ಕೊರೊನಾ ಸೋಂಕಿತರ ಸಾವಿನ ಸಂಖ್ಯೆ 5 ಪಟ್ಟು ಹೆಚ್ಚಳ

|

ಪರಿಸ್ಥಿತಿ ಹೀಗೆಯೇ ಮುಂದುವರೆದರೆ ಯುರೋಪ್‌ನಲ್ಲಿ ಜನವರಿ ಅಷ್ಟೊತ್ತಿಗೆ ಕೊರೊನಾ ಸೋಂಕಿತರ ಸಾವಿನ ಸಂಖ್ಯೆ 5 ಪಟ್ಟು ಹೆಚ್ಚಾಗಲಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ ನೀಡಿದೆ.

ಕೊರೊನಾ ಲಾಕ್‌ಡೌನ್ ನಿರ್ಬಂಧಗಳನ್ನು ಸಡಿಲಗೊಳಿಸಿದ ದಿನದಿಂದ ಕೊರೊನಾ ಸೋಂಕಿತರ ಸಂಖ್ಯೆಯಲ್ಲೂ ಹೆಚ್ಚಳವಾಗುತ್ತಿದೆ.

ಫ್ರಾನ್ಸ್‌ನಲ್ಲಿ ಕಳೆದ 24 ಗಂಟೆಯಲ್ಲಿ 30 ಸಾವಿರ ಕೊರೊನಾ ಸೋಂಕಿತರು ಪತ್ತೆ

ಈ ಕುರಿತು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ ನೀಡಿದೆ. ಶೇ.95ರಷ್ಟು ಮಂದಿ ಸಂಪೂರ್ಣವಾಗಿ ಮಾಸ್ಕ್ ಧರಿಸಿದರೆ ಮುಂದಿನ ಫೆಬ್ರವರಿ ಅಷ್ಟೊತ್ತಿಗೆ 28000 ಮಂದಿಯ ಜೀವವನ್ನು ಬದುಕಿಸಬಹುದು ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.

ಸಾಂಕ್ರಾಮಿಕ ರೋಗವು ಕಡಿಮೆಯಾಗದಿದ್ದರೆ ಇನ್ನೂ ಹೆಚ್ಚಿನ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕಾಗುತ್ತದೆ. ವೈರಸ್‌ನ್ನು ನಿಯಂತ್ರಿಸುವ ಪ್ರಯತ್ನದಲ್ಲಿ ದೇಶಗಳು ರಾಜಿಯಾಗಬಾರದು ಎಂದು ಹೇಳಲಾಗಿದೆ.

ಕೊವಿಡ್ 19 ಹೆಚ್ಚಾಗಿ, ಮನೆ, ಒಳಾಂಗಣ ಮತ್ತು ಸಮುದಾಯದಲ್ಲಿ ಹರಡಿದೆ. ಸರ್ಕಾರಗಳು ರಕ್ಷಣಾ ಕ್ರಮಗಳನ್ನು ಅನುಸರಿಸುವಲ್ಲಿ ವಿಫಲವಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.

ಭಾರತದಲ್ಲಿ ಇಂದು 63,371 ಕೊರೊನಾ ಸೋಂಕಿತರು ಪತ್ತೆ

ಪ್ರತಿನಿತ್ಯದ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದ್ದಂತೆ ಆಸ್ಪತ್ರೆಯಲ್ಲಿ ಕೂಡ ದಾಖಲಾಗುವವರ ಸಂಖ್ಯೆಯೂ ಏರಿಕೆಯಾಗುತ್ತಿದೆ.

   ಮತ್ತೊಂದು ಬ್ರಹ್ಮಾಸ್ತ್ರ ರೆಡಿ ಮಾಡ್ತಿದೆ India..! | India Hypersonic Cruise Missile | Oneindia Kannada

   ಏಪ್ರಿಲ್‌ಗೆ ಹೋಲಿಸಿದರೆ ಕೊರೊನಾ ಸೋಂಕಿತರ ಸಂಖ್ಯೆ ಎರಡರಿಂದ ಮೂರು ಪಟ್ಟು ಹೆಚ್ಚಳವಾಗಿದೆ.ಫ್ರಾನ್ಸ್ ಸೇರಿದಂತೆ ಒಟ್ಟು 9 ನಗರಗಳಲ್ಲಿ ಕರ್ಫ್ಯೂ ಜಾರಿಮಾಡಲಾಗಿದೆ.

   English summary
   Relaxing coronavirus restrictions in Europe could lead to death rates "four to five times higher than those in April" occurring by January, the World Health Organization (WHO) has warned.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X