• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಇಂಡೋನೇಷ್ಯಾದ ಜೈಲಿನಲ್ಲಿ ಅಗ್ನಿ ಅವಘಡ: ಕನಿಷ್ಠ 41 ಕೈದಿಗಳ ಸಾವು

|
Google Oneindia Kannada News

ಜಕಾರ್ತಾ, ಸೆಪ್ಟೆಂಬರ್ 08: ಇಂಡೋನೇಷ್ಯಾದ ಜೈಲಿನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಕನಿಷ್ಠ 41 ಮಂದಿ ಕೈದಿಗಳು ಮೃತಪಟ್ಟಿರುವ ಘಟನೆ ವರದಿಯಾಗಿದೆ.

ಅವಘಡಕ್ಕೆ ಕಾರಣವನ್ನು ತಿಳಿಯಲು ತನಿಖೆ ಕೈಗೊಳ್ಳಲಾಗಿದೆ. ಬುಧವಾರ ಮಧ್ಯರಾತ್ರಿ 1 ರಿಂದ 2 ಗಂಟೆ ವೇಳೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸದ್ಯ ಅಧಿಕಾರಿಗಳು ಇನ್ನೂ ಕಾರಾಗೃಹದಲ್ಲಿದ್ದವರನ್ನು ಸ್ಥಳಾಂತರಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಮೂಲಗಳ ಪ್ರಕಾರ ಈ ಬ್ಲಾಕ್ ನಲ್ಲಿ ಮಾದಕದ್ರವ್ಯ-ಸಂಬಂಧಿತ ಅಪರಾಧಗಳನ್ನು ಇರಿಸಲಾಗಿದೆ. ಇಲ್ಲಿ ಸುಮಾರು 122 ಜನರನ್ನು ಇರಿಸಲಾಗಿತ್ತು ಎನ್ನಲಾಗಿದೆ. ಈ ಜೈಲಿಗೆ 600 ಮಂದಿಯನ್ನು ಇರಿಸುವ ಸಾಮರ್ಥ್ಯವಿದ್ದು, ಇಲ್ಲಿ 2000 ಮಂದಿಯನ್ನು ಇರಿಸಲಾಗಿದೆ ಎನ್ನಲಾಗಿದೆ.

ಇನ್ನು ಮತ್ತೊಂದು ಮೂಲದ ಪ್ರಕಾರ ಜೈಲಿನ ಅವ್ಯವಸ್ಥೆಯಿಂದ ರೊಚ್ಚಿಗೆದ್ದಿದ್ದ ಕೈದಿಗಳೇ ಜೈಲಿಗೆ ಬೆಂಕಿ ಹಾಕಿದ್ದಾರೆ ಎನ್ನಲಾಗಿದೆ. ಅಲ್ಲದೆ ಬೆಂಕಿ ಅವಘಡ ವೇಳೆ ಹಲವು ಕೈದಿಗಳು ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಇಂಡೋನೇಷ್ಯಾದ ಬಾಂಟೆನ್ ಪ್ರಾಂತ್ಯದ ಜೈಲಿನಲ್ಲಿ ಸಂಭವಿಸಿರುವ ಅಗ್ನಿ ಅವಘಡದಲ್ಲಿ 41 ಜನರು ಮೃತಪಟ್ಟಿದ್ದು, 8 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಕಾನೂನು ಮತ್ತು ಮಾನವ ಹಕ್ಕುಗಳ ಸಚಿವಾಲಯದ ಜೈಲು ಇಲಾಖೆಯ ವಕ್ತಾರ ರಿಕಾ ಅಪ್ರಿಯಂತಿ ತಿಳಿಸಿದ್ದಾರೆ.

ಅಗ್ನಿ ಅವಘಡ ಸಂಭವಿಸಿದ್ದಾಗ ಎಷ್ಟು ಮಂದಿ ಅಲ್ಲಿದ್ದರು ಎನ್ನುವ ಕುರಿತು ಮಾಹಿತಿ ಇನ್ನೂ ಹೊರಬರಬೇಕಿದೆ, ತಂಗೆರಂಗ್ ಜೈಲಿನಲ್ಲಿ ಸುಮಾರು 2 ಸಾವಿರ ಮಂದಿ ಕೈದಿಗಳಿದ್ದಾರೆ.

ಆದರೆ ಆ ಜೈಲಿನಲ್ಲಿ ಕೇವಲ 600 ಮಂದಿ ಕೈದಿಗಳನ್ನಿರಿಸುವಷ್ಟು ಮಾತ್ರ ಕೆಪಾಸಿಟಿ ಇದೆ ಎನ್ನಲಾಗಿದೆ. 41 ಮಂದಿ ಮೃತಪಟ್ಟಿದ್ದು, 8 ಕೈದಿಗಳಿಗೆ ತೀವ್ರ ಗಾಯಗಳಾಗಿವೆ.
ಎಲೆಕ್ಟ್ರಿಕ್ ಶಾಕ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿರಬಹುದು ಎಂದು ಅಂದಾಜಿಸಲಾಗಿದೆ. 73 ಮಂದಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.

English summary
A fire tore through an overcrowded block in a jail in Indonesia's Banten province in the early hours of Wednesday, killingat least 41 people and injuring dozens, a government spokeswoman and media reports said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X