ಕ್ಯಾಲಿಕಟ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ಬೆಂಕಿ: ತುರ್ತು ಭೂಸ್ಪರ್ಶ!
ಅಬುಧಾಬಿಯಿಂದ ಕ್ಯಾಲಿಕಟ್‌ಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ.
ಕ್ಯಾಲಿಕಟ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಅಬುಧಾಬಿಯಲ್ಲಿ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ. ಅಬುಧಾಬಿಯಿಂದ ಕ್ಯಾಲಿಕಟ್‌ಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಅಬುಧಾಬಿ ವಿಮಾನ ನಿಲ್ದಾಣಕ್ಕೆ ಹಿಂತಿರುಗಿದೆ. ಏರ್ ಇಂಡಿಯಾ ಎಕ್ಸ್‌ಪ್ರೆಸ್ ಫ್ಲೈಟ್ IX348 ನ ಪೈಲಟ್ ಇಂಜಿನ್‌ನಲ್ಲಿ ಬೆಂಕಿಯನ್ನು ಗಮನಿಸಿ ಅಬುಧಾಬಿಗೆ ಹಿಂತಿರುಗಿದರು ಎಂದು ಮೂಲಗಳು ತಿಳಿಸಿವೆ.
ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ಒಟ್ಟು 184 ಪ್ರಯಾಣಿಕರು ಪ್ರಯಾಣಿಸುತ್ತಿದ್ದಾಗ ಇಂಜಿನ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು ಬೆಂಕಿ ಹೊತ್ತಿಕೊಂಡಿದೆ. ವಿಮಾನವು ಸುರಕ್ಷಿತವಾಗಿ ಲ್ಯಾಂಡ್ ಆಗಿದ್ದು, ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ವಿಮಾನ ಹಾರಾಟದ ಸಮಯದಲ್ಲಿ ಸಮುದ್ರ ಮಟ್ಟದಿಂದ 1,000 ಅಡಿ ಎತ್ತರದಲ್ಲಿ ಎಂಜಿನ್ ಒಂದರಲ್ಲಿ ಜ್ವಾಲೆ ಪತ್ತೆಯಾಗಿದೆ ಎಂದು ಡಿಜಿಸಿಎ ತಿಳಿಸಿದೆ.

ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (DGCA) ಹೇಳಿಕೆಯಲ್ಲಿ ಏರ್ ಇಂಡಿಯಾ ಎಕ್ಸ್‌ಪ್ರೆಸ್ B737-800 ವಿಮಾನ VT-AYC ಆಪರೇಟಿಂಗ್ ಫ್ಲೈಟ್ IX 348 (ಅಬುಧಾಬಿ-ಕ್ಯಾಲಿಕಟ್) ತಾಂತ್ರಿಕ ದೋಶಕ್ಕೆ ಕಾರಣವನ್ನು ಪತ್ತೆ ಹಚ್ಚಲಾಗುತ್ತಿದೆ.












Click it and Unblock the Notifications