ಮಲೇಷ್ಯಾದಲ್ಲಿ ಭೀಕರ ಅಗ್ನಿ ದುರಂತಕ್ಕೆ 25 ಶಾಲಾ ಮಕ್ಕಳು ಬಲಿ
ಕೌಲಾಲಂಪುರ್, ಸೆಪ್ಟೆಂಬರ್ 14: ಮಲೇಷ್ಯಾ ರಾಜಧಾನಿ ಕೌಲಾಲಂಪುರ್ ನ ಧಾರ್ಮಿಕ ಶಾಲೆಯೊಂದರಲ್ಲಿ ಬೆಂಕಿ ಅವಘಡ ನಡೆದಿದ್ದು ಮಕ್ಕಳು ಸೇರಿ 25 ಜನ ಬಲಿಯಾಗಿದ್ದಾರೆ.
ಇಂದು ಬೆಳಿಗ್ಗೆ 5.40ಕ್ಕೆ ದರುಲ್ ಕುರಾನ್ ಇತ್ತಿಫಕಿಯಾ ಶಾಲೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನೋಡ ನೋಡುತ್ತಿದ್ದಂತೆ ಬೆಂಕಿಯ ಕೆನ್ನಾಲಿಗೆ ಇಡೀ ಕಟ್ಟಡವನ್ನು ಆವರಿಸಿಕೊಂಡಿದ್ದು 23 ಮಕ್ಕಳು, ಇಬ್ಬರು ವಾರ್ಡನ್ ರನ್ನು ಬಲಿ ಪಡೆದಿದೆ ಎಂದು ಎಎಫ್'ಪಿ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಮಲೇಷ್ಯಾದಲ್ಲಿ ಕಳೆದ 20 ವರ್ಷಗಳಲ್ಲಿ ನಡೆದ ಭೀಕರ ಅಗ್ನಿ ದುರಂತ ಇದು ಎಂದು ಅಲ್ಲಿನ ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.

ಮೃತ ದೇಹಗಳನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದ್ದು, ಸ್ಥಳದಲ್ಲಿ ಬೆಂಕಿ ನಂದಿಸುವ ಕೆಲಸ ಭರದಿಂದ ಸಾಗುತ್ತಿದೆ.












Click it and Unblock the Notifications