Get Updates
Get notified of breaking news, exclusive insights, and must-see stories!

Breaking: ಲಾಸ್ ಏಂಜಲೀಸ್‌ನಲ್ಲಿ ಮಂಕಿಪಾಕ್ಸ್ ಸೋಂಕಿಗೆ ಮೊದಲ ಸಾವು

ಲಾಸ್ ಏಂಜಲೀಸ್‌, ಸೆಪ್ಟೆಂಬರ್ 13: ಜಾಗತಿಕ ಮಟ್ಟದಲ್ಲಿ ಭಯ ಹುಟ್ಟಿಸಿದ ಮಂಕಿಪಾಕ್ಸ್ ರೋಗದಿಂದ ಮೊದಲ ಬಾರಿಗೆ ರೋಗಿಯೊಬ್ಬರು ಮೃತಪಟ್ಟಿದ್ದಾರೆ. ಅಮೆರಿಕಾದ ಲಾಸ್ ಏಂಜಲೀಸ್‌ನಲ್ಲಿ ಮಂಕಿಪಾಕ್ಸ್ ಸೋಂಕಿನಿಂದ ಮೊದಲ ಬಾರಿಗೆ ವ್ಯಕ್ತಿಯೊಬ್ಬ ಮೃತಪಟ್ಟಿರುವ ಪ್ರಕರಣ ವರದಿಯಾಗಿದೆ.

US ಸೆಂಟರ್ಸ್ ಫಾರ್ ಡಿಸೀಸ್ ಕಂಟ್ರೋಲ್ ಅಂಡ್ ಪ್ರಿವೆನ್ಷನ್ (CDC) ಕೂಡ ರೋಗಿಯ ಸಾವಿಗೆ ಮಂಕಿಪಾಕ್ಸ್ ಸೋಂಕು ಕಾರಣ ಎಂಬುದನ್ನು ಖಾತ್ರಿಪಡಿಸಿದೆ. ಮಂಕಿಪಾಕ್ಸ್ ನಿಂದ ರೋಗಿಯಲ್ಲಿ ಪ್ರತಿರೋಧಕ ಶಕ್ತಿಯು ಇಳಿಮುಖವಾಗಿದ್ದು, ಸಾವು ಸಂಭವಿಸಿದೆ ಎಂದು ಹೇಳಲಾಗಿದೆ. ಇದರ ಹೊರತಾಗಿ ಸಾವಿನ ಪ್ರಕರಣಗಳು ಮತ್ತು ಇತರೆ ಯಾವುದೇ ಮಾಹಿತಿಯನ್ನು ಯುಎಸ್ ಆರೋಗ್ಯ ಇಲಾಖೆಯು ಬಹಿರಂಗಪಡಿಸಿಲ್ಲ.

ರೋಗಿಯ ಮರಣೋತ್ತರ ಪರೀಕ್ಷೆಯಲ್ಲಿ ಮಂಕಿಪಾಕ್ಸ್ ಸೋಂಕಿನಿಂದ ಮೃತಪಟ್ಟಿರುವುದು ದೃಢಪಟ್ಟಿದೆ ಎಂದು ಲಾಸ್ ಏಂಜಲೀಸ್‌ನ ಸಾರ್ವಜನಿಕ ಆರೋಗ್ಯ ಇಲಾಖೆಯು ಮಾಹಿತಿ ನೀಡಿದೆ. "ಪ್ರತಿರೋಧಕ ಶಕ್ತಿ ಕುಗ್ಗುತ್ತಿರುವ ಹಂತದಲ್ಲಿಯೇ ರೋಗಿಗೆ ಪ್ರಾಥಮಿಕವಾಗಿ ಅಗತ್ಯ ಚಿಕಿತ್ಸೆಯನ್ನು ನೀಡುವುದಕ್ಕೆ ಸಾಧ್ಯವಾಗಲಿಲ್ಲ, ಈ ಹಿನ್ನೆಲೆಯಲ್ಲಿ ತೀವ್ರವಾಗಿ ಅಸ್ವಸ್ಥಗೊಂಡ ರೋಗಿಯು ಮೃತಪಟ್ಟಿದ್ದಾರೆ," ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.

First Monkeypox Death case Confirms in Los Angeles

ಅಮೆರಿಕಾದಲ್ಲಿ ಮಂಕಿಪಾಕ್ಸ್ ರೋಗಕ್ಕೆ ಮೊದಲ ಬಲಿ:

ಅಪಾಯಕಾರಿ ಮಂಕಿಪಾಕ್ಸ್ ರೋಗಕ್ಕೆ ಅಮೆರಿಕಾದಲ್ಲಿ ಮೊದಲ ಬಲಿಯಾಗಿದೆ. ಟೆಕ್ಸಾಸ್ ಮೂಲದ ವ್ಯಕ್ತಿಯು ಕಳೆದ ತಿಂಗಳೇ ಮೃತಪಟ್ಟಿದ್ದು, ಸಾವಿಗೆ ಮಂಕಿಪಾಕ್ಸ್ ಸೋಂಕು ಕಾರಣವೇ ಎಂಬುದು ಸ್ಪಷ್ಟವಾಗಿರಲಿಲ್ಲ. ರಾಷ್ಟ್ರೀಯ ಅಂಕಿ-ಅಂಶಗಳ ಪ್ರಕಾರ, ಅಮೆರಿಕಾದಲ್ಲಿ ಇದುವರೆಗೂ 22,000 ಮಂಕಿಪಾಕ್ಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ.

ಮಂಕಿಪಾಕ್ಸ್ ಬಗ್ಗೆ ಪ್ರಾಥಮಿಕ ಮಾಹಿತಿ

ಮಂಕಿಪಾಕ್ಸ್ ಒಂದು ಝೂನೋಟಿಕ್ ಕಾಯಿಲೆಯಾಗಿದ್ದು, ಸಿಡುಬುಗೆ ಕಾರಣವಾಗುವ ವೈರಸ್‌ಗಳ ಒಂದೇ ಕುಟುಂಬಕ್ಕೆ ಸೇರಿದೆ. ಈ ರೋಗವು ಪಶ್ಚಿಮ ಮತ್ತು ಮಧ್ಯ ಆಫ್ರಿಕಾದಂತಹ ಪ್ರದೇಶಗಳಲ್ಲಿ ಸ್ಥಳೀಯವಾಗಿದೆ. ಆದರೆ ಇತ್ತೀಚೆಗೆ, ಆಸ್ಟ್ರೇಲಿಯಾ, ಯುಕೆ ಮತ್ತು ಯುಎಸ್ ಸೇರಿದಂತೆ ಇತರೆ ರಾಷ್ಟ್ರಗಳಲ್ಲೂ ಹೆಚ್ಚಾಗುತ್ತಿದೆ.

ಮಂಕಿಪಾಕ್ಸ್ ಸಿಡುಬಿಗೆ ಸಂಬಂಧಿಸಿದ ಒಂದು ಪಾಕ್ಸ್‌ವೈರಸ್ ಆಗಿದ್ದು, ಸಾಮಾನ್ಯವಾಗಿ ಮೊಡವೆ ಅಥವಾ ಗುಳ್ಳೆಗಳಂತಹ ಗಾಯಗಳನ್ನು ಉಂಟು ಮಾಡುತ್ತದೆ. ಇದರ ಜೊತೆ ಜ್ವರ, ತಲೆನೋವು, ಸ್ನಾಯು ನೋವು, ಶೀತ ಮತ್ತು ಉಸಿರಾಟ ಸಮಸ್ಯೆ ತರಹದ ಲಕ್ಷಣಗಳು ಸೋಂಕಿತರಲ್ಲಿ ಕಾಣಿಸಿಕೊಳ್ಳುತ್ತವೆ. ವೈರಸ್ ನಿಕಟ ಮತ್ತು ಆಗಾಗ್ಗೆ ಚರ್ಮದಿಂದ ಚರ್ಮಕ್ಕೆ ಸಂಪರ್ಕ ಹೊಂದುವುದರಿಂದ ಯಾರಿಗಾದರೂ ಸೋಂಕು ಹರಡಬಹುದು. ಸೋಂಕಿತ ಪ್ರಾಣಿಗಳಿಂದ ಜನರು ಮಂಕಿಪಾಕ್ಸ್ ಸೋಂಕಿಗೆ ತುತ್ತಾಗುವ ಅಪಾಯವಿರುತ್ತದೆ.

ಈಗಾಗಲೇ 80 ರಾಷ್ಟ್ರಗಳಲ್ಲಿ ವರದಿಯಾದ ಮಂಕಿಪಾಕ್ಸ್

ವಿಶ್ವ ಆರೋಗ್ಯ ಸಂಸ್ಥೆ ನೀಡಿರುವ ಮಾಹಿತಿ ಪ್ರಕಾರ, ಜಗತ್ತಿನ 80 ರಾಷ್ಟ್ರಗಳಲ್ಲಿ ಸೇರಿ 18,500ಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿವೆ. "ತಮಗೆ ಸೋಂಕು ತಗುಲಿರುವ ಬಗ್ಗೆ ದೇಶಗಳು, ಸಮುದಾಯಗಳು ಮತ್ತು ಜನರು ಸ್ವಯಂಪ್ರೇರಿತರಾಗಿ ಮಾಹಿತಿ ನೀಡಿದರೆ ಹಾಗೂ ರೋಗ ಹರಡದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡರೆ, ಮಂಕಿಪಾಕ್ಸ್ ಸೋಂಕು ಹರಡುವಿಕೆಯನ್ನು ತಕ್ಷಣಕ್ಕೆ ತಡೆಯುವುದಕ್ಕೆ ಸಾಧ್ಯವಿದೆ," ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮಹಾನಿರ್ದೇಶಕ ಡಾ ಟೆಡ್ರೊಸ್ ಗೆಬ್ರೆಯೆಸಸ್ ಹೇಳಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+