ಭ್ರಷ್ಟಾಚಾರ ಪ್ರಕರಣ : ಬಾಂಗ್ಲಾ ಮಾಜಿ ಪ್ರಧಾನಿಗೆ 7 ವರ್ಷ ಜೈಲು

ಢಾಕಾ, ಅಕ್ಟೋಬರ್ 29 : ಭ್ರಷ್ಟಾಚಾರ ಪ್ರಕರಣದಲ್ಲಿ ಬಾಂಗ್ಲಾದೇಶ ಮಾಜಿ ಪ್ರಧಾನಿ ಖಲೀದಾ ಜಿಯಾ ಅಪರಾಧಿ ಎಂದು ನ್ಯಾಯಾಲಯ ತೀರ್ಪು ನೀಡಿದೆ. ಅವರಿಗೆ 7 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿ ಆದೇಶ ನೀಡಲಾಗಿದೆ.

ಸೋಮವಾರ ಖಲೀದಾ ಜಿಯಾ ಮೇಲಿದ್ದ ಭ್ರಷ್ಟಾಚಾರ ಪ್ರಕರಣದ ತೀರ್ಪು ಪ್ರಕಟವಾಗಿದ್ದು 7 ವರ್ಷದ ಜೈಲು ಶಿಕ್ಷೆ ವಿಧಿಸಲಾಗಿದೆ. 73 ವರ್ಷದ ಖಲೀದಾ ಜಿಯಾ ಅವರು ಹಣ ದುರುಪಯೋಗದ ಮತ್ತೊಂದು ಪ್ರಕರಣದಲ್ಲಿ 5 ವರ್ಷದ ಜೈಲು ಶಿಕ್ಷೆ ಅನುಭವಿಸುತ್ತಿದ್ದಾರೆ.

Former Bangladesh PM Khaleda Zia sentenced to 7 years jail

ಖಲೀದಾ ಜಿಯಾ ಎರಡು ಬಾರಿ ಬಾಂಗ್ಲಾದೇಶದ ಪ್ರಧಾನಿಯಾಗಿದ್ದರು. ವಿರೋಧ ಪಕ್ಷದ ನಾಯಕಿಯಾಗಿಯೂ ಕೆಲಸ ಮಾಡಿದ್ದರು. ತಮ್ಮ ವಿರುದ್ಧದ ಭ್ರಷ್ಟಾಚಾರ ಪ್ರಕರಣದ ತನಿಖೆಗೆ ತಡೆ ನೀಡುವಂತೆ ಅವರು ಸಲ್ಲಿಸಿದ್ದ ಅರ್ಜಿಯನ್ನು ಬಾಂಗ್ಲಾದೇಶದ ಸುಪ್ರೀಂಕೋರ್ಟ್ ವಜಾಗೊಳಿಸಿದೆ.

ಖಲೀದಾ ಜಿಯಾ ಅವರು 2018ರ ಫೆಬ್ರವರಿಯಿಂದ ಜೈಲಿನಲ್ಲಿದ್ದಾರೆ. ಹಣ ದುರುಪಯೋಗ ಪ್ರಕರಣದಲ್ಲಿ ಅವರಿಗೆ ನ್ಯಾಯಾಲಯ 5 ವರ್ಷದ ಜೈಲು ಶಿಕ್ಷೆ ವಿಧಿಸಿತ್ತು. ಈಗ ಭ್ರಷ್ಟಾಚಾರ ಪ್ರಕರಣದಲ್ಲಿ 7 ವರ್ಷಗಳ ಶಿಕ್ಷೆಯಾಗಿದೆ.

ಬಾಂಗ್ಲಾದೇಶ್ ನ್ಯಾಷನಲ್ ಪಾರ್ಟಿ ಮುಖ್ಯಸ್ಥರಾಗಿದ್ದ ಖಲೀದಾ ಜಿಯಾ ಅವರು ಜಿಯಾ ಆರ್ಫನೇಜ್‌ ಟ್ರಸ್ಟ್‌ಗೆ ಮೀಸಲಾಗಿದ್ದ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪದಲ್ಲಿ 5 ವರ್ಷದ ಶಿಕ್ಷೆ ಅನುಭವಿಸುತ್ತಿದ್ದಾರೆ.

ಈ ಪ್ರಕರಣದಲ್ಲಿ ಖಲೀದಾ ಜಿಯಾ ಪುತ್ರ ತಾರೀಕ್ ರೆಹಮಾನ್ ಸೇರಿದಂತೆ ಹಲವು ಆರೋಪಿಗಳಿದ್ದು, ಎಲ್ಲರಿಗೂ 10 ವರ್ಷದ ಜೈಲು ಶಿಕ್ಷೆ ವಿಧಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+