ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮೇಲೆ ಕೊಲೆ, ಭಯೋತ್ಪಾದನೆ ಪ್ರಕರಣ ದಾಖಲು

ತೋಷಖಾನಾ ಪ್ರಕರಣದಲ್ಲಿ ಮಾಜಿ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಿದ ಕೆಲವೇ ದಿನಗಳಲ್ಲಿ ಈ ಬೆಳವಣಿಗೆ ನಡೆದಿದೆ.

ಜೈಪುರ, ಮಾರ್ಚ್ 09: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಪಾಕಿಸ್ತಾನದ ಪೊಲಿಸರು ಕೊಲೆ ಮತ್ತು ಭಯೋತ್ಪಾದನೆ ಪ್ರಕರಣಗಳನ್ನು ದಾಖಲಿಸಿದ್ದಾರೆ. ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ ್ಯಾಲಿಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಅವರ ಮೇಲೆ ಪ್ರಕರಣ ದಾಖಲಿಸಲಾಗಿದೆ. ಈ ಮೆರವಣಿಗೆಯಲ್ಲಿ ಓರ್ವ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.

ತೋಷಖಾನಾ ಪ್ರಕರಣದಲ್ಲಿ ಮಾಜಿ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಿದ ಕೆಲವೇ ದಿನಗಳಲ್ಲಿ ಈ ಬೆಳವಣಿಗೆ ನಡೆದಿದೆ. ಕ್ರಿಕೆಟಿಗ, ರಾಜಕಾರಣಿಯನ್ನು ಬಂಧಿಸಲು ಪೊಲೀಸ್ ಅಧಿಕಾರಿಗಳು ಲಾಹೋರ್ ನಿವಾಸದಲ್ಲಿ ಕಾಯುತ್ತಿದ್ದರು. ಈ ವೇಳೆ ಬುಧವಾರ ಪೊಲೀಸರೊಂದಿಗೆ ನಡೆದ ಘರ್ಷಣೆಯಲ್ಲಿ ಪಿಟಿಐ ಕಾರ್ಯಕರ್ತನೊಬ್ಬ ಮೃತಪಟ್ಟು, ಪಕ್ಷದ ಹತ್ತಕ್ಕೂ ಹೆಚ್ಚು ಬೆಂಬಲಿಗರು ಗಾಯಗೊಂಡಿದ್ದಾರೆ.

Former Pakistan PM Imran Khan Booked on Charges of Murder, Terrorism

ಇಮ್ರಾನ್ ಖಾನ್ ಅವರ ನಿವಾಸದ ಹೊರಗೆ ್ಯಾಲಿ ನಡೆಯುತ್ತಿತ್ತು, ಈ ವೇಳೆ ಪಕ್ಷದ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದಾಗ ಪೊಲೀಸರು ಅಶ್ರುವಾಯು ಮತ್ತು ಜಲಫಿರಂಗಿಗಳನ್ನು ಬಳಸಿದ್ದಾರೆ. ಎಫ್ಐಆರ್ ಪ್ರಕಾರ, ಘರ್ಷಣೆಯಲ್ಲಿ 11 ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ. ಇಮ್ರಾನ್ ಖಾನ್ ಜೊತೆಗೆ 400 ಇತರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಹಿಂಸಾಚಾರದ ಘಟನೆಗಳಿಗೆ ಸಂಬಂಧಿಸಿದಂತೆ ಪಾಕಿಸ್ತಾನದ ಪೊಲೀಸರು 100 ಕ್ಕೂ ಹೆಚ್ಚು ಪಿಟಿಐ ಕಾರ್ಯಕರ್ತರನ್ನು ಬಂಧಿಸಿದ್ದಾರೆ. ಪಕ್ಷದ ಉನ್ನತ ನಾಯಕರು ಮತ್ತು ಮಾಜಿ ಸಚಿವರಾದ ಫವಾದ್ ಚೌಧರಿ, ಫಾರೂಖ್ ಹಬೀಬ್, ಹಮ್ಮದ್ ಅಜರ್ ಮತ್ತು ಮಹಮೂದೂರ್ ರಶೀದ್ ಅವರನ್ನು ಘಟನೆಗೆ ಸಂಬಂಧಿಸಿದ ಎಫ್‌ಐಆರ್‌ನಲ್ಲಿ ಹೆಸರಿಸಲಾಗಿದೆ.

Former Pakistan PM Imran Khan Booked on Charges of Murder, Terrorism

ತೋಷಖಾನಾ ಎಂಬುದು ಸರ್ಕಾರಿ ವ್ಯಾಪ್ತಿಯ ಅಧಿಕೃತ ಭಂಡಾರ ಆಗಿದೆ. ಅಲ್ಲಿ ವಿದೇಶಿ ಅಧಿಕಾರಿಗಳು ಮತ್ತು ಪ್ರತಿನಿಧಿಗಳಿಂದ ಸ್ವೀಕರಿಸಿದ ಅಧಿಕೃತ ಉಡುಗೊರೆಗಳನ್ನು ಇರಿಸಲು ಬಳಕೆ ಆಗುತ್ತದೆ. ಅಂತಹ ಭಂಡಾರದಲ್ಲಿ ಉಡುಗೊರೆಗಳನ್ನು ಯಾಯಿತಿ ದರದಲ್ಲಿ ಮತ್ತು ಲಾಭಕ್ಕಾಗಿ ಮಾರಾಟ ಮಾಡಿದ್ದಾರೆ. ಹಣ ಪಾವತಿಸದೇ ತಮ್ಮ ಬಳಿ ಇಟ್ಟುಕೊಂಡಿದ್ದಾರೆ ಎಂಬ ಆರೋಪಗಳಿದ್ದು, ಕಳೆದ ವಾರ ಅವರ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಲಾಗಿತ್ತು. ಇಸ್ಲಾಮಾಬಾದ್ ಹೈಕೋರ್ಟ್ ಜಾಮೀನು ರಹಿತ ಬಂಧನ ವಾರಂಟ್ ಅನ್ನು ಮಾರ್ಚ್ 13 ರವರೆಗೆ ಅಮಾನತುಗೊಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+