ವಿಶ್ವಸಂಸ್ಥೆ ಮಾಜಿ ಮಹಾಪ್ರಧಾನ ಕಾರ್ಯದರ್ಶಿ ಕೋಫಿ ಅನ್ನಾನ್ ನಿಧನ
ವಿಶ್ವಸಂಸ್ಥೆಯ ಮಾಜಿ ಮಹಾಪ್ರಧಾನ ಕಾರ್ಯದರ್ಶಿ, ನೊಬೆಲ್ ಶಾಂತಿ ಪುರಸ್ಕೃತ ಕೋಫಿ ಅನ್ನಾನ್ (80) ಶನಿವಾರ ನಿಧನರಾದರು.
ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಶನಿವಾರ ನಸುಕಿನಲ್ಲಿ ನಿಧನರಾಗಿರುವುದಾಗಿ ಕೋಫಿ ಅನ್ನಾನ್ ಪ್ರತಿಷ್ಠಾನ ಪ್ರಕಟಿಸಿದೆ.
ಅವರಿಗೆ ಪತ್ನಿ ನೇನ್ ಮತ್ತು ಮಕ್ಕಳಾದ ಅಮಾ, ಕೋಜೋ ಹಾಗೂ ನಿನಾ ಇದ್ದಾರೆ.

ಘಾನಾದ ಕುಮಾಸಿಯಲ್ಲಿ 1938ರ ಏಪ್ರಿಲ್ 8ರಂದು ಜನಿಸಿದ್ದ ಕೋಫಿ ಅನ್ನಾನ್, ಸ್ವಿಟ್ಜರ್ಲೆಂಡ್‌ನ ಜಿನೀವಾದಲ್ಲಿ ಹಲವು ವರ್ಷಗಳಿಂದ ನೆಲೆಸಿದ್ದರು. 2001ರಲ್ಲಿ ಅವರಿಗೆ ನೊಬೆಲ್ ಶಾಂತಿ ಪುರಸ್ಕಾರ ದೊರೆತಿತ್ತು.
1962ರಲ್ಲಿ ಜಿನೀವಾದಲ್ಲಿನ ವಿಶ್ವ ಆರೋಗ್ಯ ಸಂಸ್ಥೆಯಲ್ಲಿ ಆಡಳಿತಾಧಿಕಾರಿಯಾಗಿ ಕಾರ್ಯ ಆರಂಭಿಸಿದ್ದರು. ನಂತರ ಅದ್ದಿಸ್ ಅಬಾಬಾದಲ್ಲಿ ಆಫ್ರಿಕಾದ ಆರ್ಥಿಕ ಕಮಿಷನ್‌ನಲ್ಲಿ, ಇಸ್ಮಾಲಿಯಾದಲ್ಲಿ ವಿಶ್ವಸಂಸ್ಥೆಯ ತುರ್ತುಪರಿಸ್ಥಿತಿ, ಜಿನೀವಾದಲ್ಲಿ ವಿಶ್ವಸಂಸ್ಥೆಯ ನಿರಾಶ್ರಿತರ ಹೈಕಮಿಷನರ್ ಆಗಿ ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿದ್ದರು.
It is with immense sadness that the Annan family and the Kofi Annan Foundation announce that Kofi Annan, former Secretary General of the United Nations and Nobel Peace Laureate, passed away peacefully on Saturday 18th August after a short illness... pic.twitter.com/42nGOxmcPZ
— Kofi Annan (@KofiAnnan) 18 August 2018
ವಿಶ್ವದ ಅತ್ಯಂತ ಪ್ರಮುಖ ರಾಜತಾಂತ್ರಿಕ ಸಂಸ್ಥೆಯಾದ ವಿಶ್ವಸಂಸ್ಥೆಯಲ್ಲಿನ ಉನ್ನತ ಹುದ್ದೆಗೆ ಏರಿದ ಮೊದಲ ಕಪ್ಪು ವರ್ಣೀಯ ಆಫ್ರಿಕನ್ ಎನಿಸಿಕೊಂಡಿದ್ದ ಅವರು, 1997ರಿಂದ 2006ರವರೆಗೂ ವಿಶ್ವಸಂಸ್ಥೆಯ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿದ್ದರು.
ಬಳಿಕ ಅವರು ವಿಶ್ವಸಂಸ್ಥೆಯ ಸಿರಿಯಾದ ವಿಶೇಷ ರಾಯಭಾರಿಯಾಗಿ ಸೇವೆ ಸಲ್ಲಿಸುವ ಮೂಲಕ ಅಲ್ಲಿನ ಸಂಘರ್ಷಗಳಿಗೆ ಶಾಂತಿಯುತ ಪರಿಹಾರ ಕಂಡುಕೊಳ್ಳುವ ಪ್ರಯತ್ನ ನಡೆಸಿದ್ದರು.
ಕೋಫಿ ಅನ್ನಾನ್ ಅವರ ನಿಧನದ ಸುದ್ದಿಯನ್ನು ಪ್ರಕಟಿಸಿರುವ ಪ್ರತಿಷ್ಠಾನ, ಅವರೊಬ್ಬ ಜಾಗತಿಕ ರಾಜನೀತಿಜ್ಞ, ಶಾಂತಿಯುತ ಹಾಗೂ ನ್ಯಾಯಯುತ ಜಗತ್ತಿಗಾಗಿ ತಮ್ಮ ಜೀವಮಾನವಿಡೀ ಹೋರಾಟ ನಡೆಸಿದ ಅಂತಾರಾಷ್ಟ್ರೀಯವಾದಿಯಾಗಿದ್ದರು ಎಂದು ಬಣ್ಣಿಸಿದೆ.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications