ಅಮೆರಿಕದ ಸೀನಿಯರ್ ಬುಷ್ ಮತ್ತೆ ಆಸ್ಪತ್ರೆಗೆ ದಾಖಲು
ಹೌಸ್ಟನ್ (ಅಮೆರಿಕ), ಡಿ. 24: ಅಮೆರಿಕದ ಮಾಜಿ ಅಧ್ಯಕ್ಷ ಎಚ್.ಡಬ್ಲ್ಯೂ. ಬುಷ್ ಅವರನ್ನು ಮತ್ತೆ ಹೌಸ್ಟನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಬುಷ್ ಅವರು ಉಸಿರಾಟದ ತೊಂದರೆ ಎದುರಿಸುತ್ತಿದ್ದಾರೆಂದು ಕುಟುಂಬ ವರ್ಗದವರು ತಿಳಿಸಿದ್ದಾರೆ.
ಪ್ರಸ್ತುತ 90ನೇ ವಸಂತದಲ್ಲಿರುವ ಬುಷ್ ಅವರನ್ನು ಎರಡು ವರ್ಷಗಳ ಹಿಂದೆ ಇದೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸುಮಾರು ಎರಡು ತಿಂಗಳ ಕಾಲ ಇಲ್ಲಿಯೇ ಚಿಕಿತ್ಸೆ ನೀಡಲಾಗಿತ್ತು. 2013ರ ಜನವರಿ ತಿಂಗಳಲ್ಲಿ ಬಿಡುಗಡೆ ಮಾಡಲಾಗಿತ್ತು. ಪಾರ್ಕಿನ್‌ಸನ್ಸ್ ಮಾದರಿಯ ರೋಗದಿಂದ ಬಳಲುತ್ತಿರುವ ಅವರು ತಮ್ಮೆರಡೂ ಕಾಲುಗಳ ನಿಯಂತ್ರಣ ಕಳೆದುಕೊಂಡಿದ್ದಾರೆ. ಸಂಚರಿಸಲು ಗಾಲಿ ಕುರ್ಚಿಯನ್ನು ಆಧರಿಸಿದ್ದಾರೆ. [ಒಬಾಮಾಗಾಗಿ ವ್ರತಭಂಗ ಮಾಡಲೊಪ್ಪದ ಮೋದಿ]

ಪ್ರಸ್ತುತ ಹವಾಯಿ ದ್ವೀಪದಲ್ಲಿ ರಜಾ ದಿನಗಳನ್ನು ಆನಂದಿಸುತ್ತಿರುವ ಅಧ್ಯಕ್ಷ ಬರಾಕ್ ಒಬಾಮಾ ಅವರಿಗೆ ಈ ಕುರಿತು ಮಾಹಿತಿ ನೀಡಲಾಗಿದೆ. ಒಬಾಮಾ ಹಾಗೂ ಮಿಷೆಲ್ ಇಬ್ಬರೂ ಮಾಜಿ ಅಧ್ಯಕ್ಷ ಬುಷ್ ಅವರಿಗೆ ಶುಭ ಹಾರೈಕೆ ಕಳುಹಿಸಿದ್ದಾರೆ ಎಂದು ಶ್ವೇತ ಭವನದ ಅಧಿಕಾರಿಗಳು ತಿಳಿಸಿದ್ದಾರೆ.
ಯಾರು ಈ ಬುಷ್? : ಭಯೋತ್ಪಾದನೆ ವಿರುದ್ಧ ನಿರ್ಣಾಯಕ ಸಮರ ಸಾರಿದ ಜಾರ್ಜ್ ಡಬ್ಲ್ಯೂ. ಬುಷ್ ಜಗತ್ತಿನಲ್ಲಿ ಎಲ್ಲರಿಗೂ ಗೊತ್ತು. ಅವರ ತಂದೆಯೇ ಪ್ರಸ್ತುತ ಆಸ್ಪತ್ರೆಗೆ ದಾಖಲಾಗಿರುವ ಎಚ್.ಡಬ್ಲ್ಯೂ. ಬುಷ್. ಅಮೆರಿಕದಲ್ಲಿ ಸೀನಿಯರ್ ಬುಷ್ ಎಂದೇ ಜನಪ್ರಿಯರಾಗಿದ್ದಾರೆ. [ಅಮೆರಿಕದಲ್ಲಿ ಮೋದಿಯ ಆ ದಿನಗಳು]
ರೊನಾಲ್ಡ್ ರೇಗಾನ್ ಅವರ ಅವಧಿಯಲ್ಲಿ ಉಪಾಧ್ಯಕ್ಷರಾಗಿ ಎರಡು ಅವಧಿಗೆ ಸೇವೆ ಸಲ್ಲಿಸಿದ್ದರು. ನಂತರ ಅಮೆರಿಕದ 41ನೇ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಆದರೆ, ಅವರ ಎರಡನೇ ಅವಧಿಗಾಗಿ ನಡೆದ ಚುನಾವಣೆಯಲ್ಲಿ ಡೆಮಾಕ್ರೆಟಿಕ್ ಪಕ್ಷದ ಬಿಲ್ ಕ್ಲಿಂಟನ್ ಎದುರು ಸೋಲನುಭವಿಸಿದ್ದರು.

ರಾಜಕೀಯಕ್ಕೆ ಬರುವ ಮೊದಲು ನೌಕಾ ಸೇನೆಯಲ್ಲಿದ್ದ ಎಚ್.ಡಬ್ಲ್ಯೂ. ಬುಷ್ ದ್ವಿತೀಯ ಜಾಗತಿಕ ಮಹಾಯುದ್ಧದಲ್ಲಿ ಹೋರಾಡಿದ ಅನುಭವ ಹೊಂದಿದ್ದಾರೆ. ಅಲ್ಲದೆ, ಅವರೊಬ್ಬ ಅತ್ಯುತ್ತಮ ಸ್ಕೈಡೈವರ್ ಕೂಡ ಹೌದು. [ಮೋದಿಗೆ ಅಮೆರಿಕದಲ್ಲಿ ಅದ್ದೂರಿ ಸ್ವಾಗತ]
ಚೀನಾದಲ್ಲಿ ಅಮೆರಿಕದ ರಾಯಭಾರಿಯಾಗಿ ಹಾಗೂ ವಿಶ್ವವಿಖ್ಯಾತ ಗೂಢಚಾರ ಸಂಸ್ಥೆ ಸಿಐಎ ನಿರ್ದೇಶಕರಾಗಿ ಸೇವೆ ಸಲ್ಲಿಸಿರುವ ಹೆಗ್ಗಳಿಕೆ ಹೊಂದಿದ್ದಾರೆ.
-
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ












Click it and Unblock the Notifications