Forbes Most Powerful Women: 2023ರ ಶಕ್ತಿಶಾಲಿ ಮಹಿಳೆಯರ ಪಟ್ಟಿಯಲ್ಲಿ ನಾಲ್ವರು ಭಾರತೀಯರು
ಫೋರ್ಬ್ಸ್ 2023ರ ಮೋಸ್ಟ್ ಪವರ್ ಫುಲ್ ವುಮೆನ್ ಅಂದರೆ ಅತ್ಯಂತ ಶಕ್ತಿಶಾಲಿ ಮಹಿಳೆಯರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಯುಎಸ್ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅಂತವರನ್ನು ಒಳಗೊಂಡಿರುವ ಈ ಪಟ್ಟಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ನಾಲ್ಕು ಭಾರತೀಯ ಮಹಿಳೆಯರು ಸ್ಥಾನಗಳಿಸಿದ್ದಾರೆ.
ಈ ನಾಲ್ವರು ಭಾರತೀಯ ಮಹಿಳೆಯರು ಜಾಗತಿಕ ಮಟ್ಟದಲ್ಲಿ ತಮ್ಮನ್ನು ಗುರುತಿಸಿಕೊಂಡಿದ್ದಾರೆ. ಹಣ, ಮಾಧ್ಯಮ, ಪ್ರಭಾವ ಆಧಾರದ ಮೇಲೆ ಫೋರ್ಬ್ಸ್ 2023ರ ಮೋಸ್ಟ್ ಪವರ್ ಫುಲ್ ವುಮೆನ್ ಪಟ್ಟಿ ಬಿಡುಗಡೆ ಮಾಡಿದೆ. ಇದರಲ್ಲಿ ನಾಲ್ವರು ಭಾರತೀಯರಿರುವುದು ಹೆಮ್ಮೆಯ ವಿಚಾರವಾಗಿದೆ. ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡ ಭಾರತೀಯ ಶಕ್ತಿಶಾಲಿ ಮಹಿಳೆಯರ ಬಗ್ಗೆ ಮಾಹಿತಿ ಇಲ್ಲಿದೆ.

ನಿರ್ಮಲಾ ಸೀತಾರಾಮನ್
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೋರ್ಬ್ಸ್ 2023ರ ಶಕ್ತಿಶಾಲಿ ಮಹಿಳೆಯರ ಪಟ್ಟಿಯಲ್ಲಿ 32ನೇ ಸ್ಥಾನ ಪಡೆದಿದ್ದಾರೆ. ಭಾರತೀಯ ಜನತಾ ಪಾರ್ಟಿಯ ಹಿರಿಯ ಮುಖಂಡರಾಗಿರುವ ಇವರು 2019 ರಿಂದ ಭಾರತದ ಹಣಕಾಸು ಹಾಗೂ ಕಾರ್ಪೊರೇಟ್ ವ್ಯವಹಾರಗಳ ಸಚಿವರಾಗಿದ್ದಾರೆ. ಸೀತಾರಾಮನ್ ಅವರು 2017 ರಿಂದ 2019ರವರೆಗೆ 28ನೇ ರಕ್ಷಣಾ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಇಂದಿರಾ ಗಾಂಧಿಯವರ ನಂತರ ಭಾರತದ ಎರಡನೇ ಮಹಿಳಾ ರಕ್ಷಣಾ ಮಂತ್ರಿ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಕಳೆದ ವರ್ಷ ನಿರ್ಮಲಾ ಸೀತಾರಾಮನ್ ಫೋರ್ಬ್ಸ್ ಶಕ್ತಿಶಾಲಿ ಮಹಿಳೆಯರ ಪಟ್ಟಿಯಲ್ಲಿ 36ನೇ ಸ್ಥಾನದಲ್ಲಿದ್ದರು. ಆದರೆ ಈ ಬಾರಿ 32ನೇ ಸ್ಥಾನವನ್ನು ಪಡೆದಿದ್ದಾರೆ.

ರೋಶ್ನಿ ನಾಡರ್ ಮಲ್ಹೋತ್ರಾ
ರೋಶ್ನಿ ನಾಡರ್ ಮಲ್ಹೋತ್ರಾ ಫೋರ್ಬ್ಸ್ 2023ರ ಶಕ್ತಿಶಾಲಿ ಮಹಿಳೆಯರ ಪಟ್ಟಿಯಲ್ಲಿ 60ನೇ ಸ್ಥಾನ ಪಡೆದಿದ್ದಾರೆ. ಭಾರತೀಯರಾದ ರೋಶ್ನಿ ನಾಡಾರ್, ಉದ್ಯಮಿ ಶಿವ ನಾಡಾರ್ ಅವರ ಬಿಲಿಯನೇರ್ ಪುತ್ರಿ ಆಗಿದ್ದಾರೆ. ಜುಲೈ 2020ರಲ್ಲಿ ಎಚ್‌ಸಿಎಲ್‌ನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಕಂಪನಿಯ ಎಲ್ಲಾ ಕಾರ್ಯತಂತ್ರದ ನಿರ್ಧಾರಗಳ ಉಸ್ತುವಾರಿ ವಹಿಸಿದ್ದಾರೆ. IIFL ವೆಲ್ತ್ ಹುರುನ್ ಇಂಡಿಯಾ ರಿಚ್ ಲಿಸ್ಟ್ (2019) ಪ್ರಕಾರ ಅವರು ಭಾರತದ ಅತ್ಯಂತ ಶ್ರೀಮಂತ ಮಹಿಳೆ ಎಂದು ಗುರುತಿಸಿಕೊಂಡಿದ್ದಾರೆ. ಇನ್ನು ಫೋರ್ಬ್ಸ್ ಪಟ್ಟಿಯಲ್ಲಿ 2019 ರಲ್ಲಿ 54 ನೇ ಸ್ಥಾನ, 2020 ರಲ್ಲಿ 55 ನೇ ಮತ್ತು 2023 ರಲ್ಲಿ 60ನೇ ಪಡೆದಿದ್ದಾರೆ.
ಸೋಮಾ ಮೊಂಡಾಲ್
ಸೋಮಾ ಮೊಂಡಾಲ್ ಫೋರ್ಬ್ಸ್ 2023ರ ಶಕ್ತಿಶಾಲಿ ಮಹಿಳೆಯರ ಪಟ್ಟಿಯಲ್ಲಿ 70ನೇ ಸ್ಥಾನ ಪಡೆದಿದ್ದಾರೆ. ಭಾರತೀಯ ಸ್ಟೀಲ್ ಅಥಾರಿಟಿಯಲ್ಲಿ ಪ್ರಸ್ತುತ ಅಧ್ಯಕ್ಷರಾಗಿದ್ದಾರೆ. ಭುವನೇಶ್ವರದಲ್ಲಿ ಜನಿಸಿದ ಅವರು 1984 ರಲ್ಲಿ ಎಲೆಕ್ಟ್ರಿಕಲ್ ಎಂಜಿನಿಯರಿಂಗ್‌ನಲ್ಲಿ ಪದವಿ ಪಡೆದರು. ಲೋಹದ ಉದ್ಯಮದಲ್ಲಿ 35 ವರ್ಷಗಳ ಅನುಭವ ಹೊಂದಿದ್ದಾರೆ. ವೃತ್ತಿಜೀವನದ ಮೈಲಿಗಲ್ಲುಗಳು ಸೋಮಾ ಮೊಂಡಾಲ್ SAIL ನಲ್ಲಿ ಮೊದಲ ಮಹಿಳಾ ಕಾರ್ಯಕಾರಿ ನಿರ್ದೇಶಕಿ ಮತ್ತು ಅಧ್ಯಕ್ಷರಾಗಿದ್ದಾರೆ. 2023ರಲ್ಲಿ ಇಟಿಪಿರೈಮ್ ಮಹಿಳಾ ನಾಯಕತ್ವ ಪ್ರಶಸ್ತಿಗಳಲ್ಲಿ 'ವರ್ಷದ ಸಿಇಒ' ಎಂದು ಗೌರವ ಪಡೆದಿದ್ದಾರೆ.

ಕಿರಣ್ ಮಜುಂದಾರ್-ಶಾ
ಕಿರಣ್ ಮಜುಂದಾರ್-ಶಾ ಫೋರ್ಬ್ಸ್ 2023ರ ಶಕ್ತಿಶಾಲಿ ಮಹಿಳೆಯರ ಪಟ್ಟಿಯಲ್ಲಿ 76ನೇ ಸ್ಥಾನ ಪಡೆದಿದ್ದಾರೆ. ಕಿರಣ್ ಮಜುಂದಾರ್-ಶಾ ಪ್ರಮುಖ ಭಾರತೀಯ ಬಿಲಿಯನೇರ್ ಉದ್ಯಮಿ ಬೆಂಗಳೂರಿನಲ್ಲಿ ಬಯೋಕಾನ್ ಲಿಮಿಟೆಡ್ ಮತ್ತು ಬಯೋಕಾನ್ ಬಯೋಲಾಜಿಕ್ಸ್ ಲಿಮಿಟೆಡ್ ಸ್ಥಾಪಿಸಿದ ಅವರು ಯಶಸ್ವಿಯಾಗಿ ಮುನ್ನೆಡೆಸಿಕೊಂಡು ಬಂದಿದ್ದಾರೆ. ಜೈವಿಕ ತಂತ್ರಜ್ಞಾನ ಕಂಪನಿಗಳ ನಿರ್ವಹಣೆ ಜೊತೆಗೆ ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್‌ನ ಮಾಜಿ ಅಧ್ಯಕ್ಷರಾಗಿದ್ದಾರೆ. ತಮ್ಮ ಕ್ಷೇತ್ರದಲ್ಲಿ ಗರಿಷ್ಠ ಮಟ್ಟದ ಸಾಧನೆಗೈದಿರುವ ಕಿರಣ್ ಮಜುಂದಾರ್-ಶಾ, 2019ರ ಫೋರ್ಬ್ಸ್ ರ ಶಕ್ತಿಶಾಲಿ ಮಹಿಳೆಯರ ಪಟ್ಟಿಯಲ್ಲಿ 68ನೇ ಸ್ಥಾನ ಪಡೆದಿದ್ದರು. ಈ ಬಾರಿ 76ನೇ ಸ್ಥಾನ ಪಡೆದಿದ್ದಾರೆ.
-
School Property: ಸರ್ಕಾರಿ ಶಾಲೆ 12 ವರ್ಷಗಳಿಂದ ಒಂದೇ ಭೂಮಿಯಲ್ಲಿದ್ದರೆ ಅದು ರಾಜ್ಯ ಸರ್ಕಾರದ ಆಸ್ತಿ: ಏನಿದು ಹೊಸ ಕಾನೂನು? -
Dhurandhar-2: ಸಕ್ಸಸ್ ಅಲೆಯಲ್ಲಿ ಧುರಂಧರ್ 2: ಫ್ಯಾನ್ಸ್ ಕುರಿತು ಸಾರಾ ಅರ್ಜುನ್ ಪೋಸ್ಟ್ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ












Click it and Unblock the Notifications