ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಒಂದು ವಾರದಲ್ಲಿ ಜಾಗತಿಕವಾಗಿ 4 ಮಿಲಿಯನ್ ಕೊರೊನಾ ಸೋಂಕಿತರು ಪತ್ತೆ

|
Google Oneindia Kannada News

ಒಂದು ವಾರದಲ್ಲಿ ಜಾಗತಿಕವಾಗಿ 4 ಮಿಲಿಯನ್‌ಗೂ ಅಧಿಕ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ. ಮಧ್ಯಪ್ರಾಚ್ಯ ಮತ್ತು ಏಷ್ಯಾದಲ್ಲಿ ಬಹುತೇಕ ಹೆಚ್ಚಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಸಾಂಕ್ರಾಮಿಕ ಕುರಿತ ವಾರದ ವರದಿಯಲ್ಲಿ ಹೇಳಿದೆ.

ಭಾರತದಲ್ಲಿ ಮೊದಲಿಗೆ ಕಾಣಿಸಿಕೊಂಡ ಡೆಲ್ಟಾ ರೂಪಾಂತರದ ಪ್ರಕರಣಗಳು ಇದೀಗ 130 ಕ್ಕೂ ಹೆಚ್ಚು ದೇಶಗಳಲ್ಲಿ ಸುಲಭವಾಗಿ ಹರಡುತ್ತಿದೆ. ಸುಮಾರು ಒಂದು ತಿಂಗಳ ನಂತರ ಪ್ರಕರಣಗಳು ಹೆಚ್ಚಾಗುತ್ತಿದ್ದು, ಬ್ರಿಟನ್ ಮತ್ತು ಸ್ಪೇನ್ ನಲ್ಲಿ ಪ್ರಕರಣಗಳ ಸಂಖ್ಯೆ ಇಳಿಕೆಯನ್ನು ಉಲ್ಲೇಖಿಸಿದ್ದು, ಯೂರೋಪಿಯನ್ ವಲಯದಲ್ಲಿ ಪ್ರಕರಣಗಳ ಸಂಖ್ಯೆಯಲ್ಲಿ ಶೇಕಡಾ 9 ರಷ್ಟು ಕುಸಿತವಾಗಿರುವುದಾಗಿ ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ.

ತಿಂಗಳ ನಂತರ ಸೋಂಕು ಹೆಚ್ಚಾಗುತ್ತಿದೆ. ಆದಾಗ್ಯೂ, ವಿಶ್ವದಾದ್ಯಂತ ಸಾವಿನ ಸಂಖ್ಯೆ ಶೇ.8 ರಷ್ಟು ಕುಸಿತವಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಬುಧವಾರ ಹೇಳಿದೆ. ಆದಾಗ್ಯೂ, ಮಧ್ಯಪ್ರಾಚ್ಯ ಮತ್ತು ಏಷ್ಯಾದಲ್ಲಿ, ಸಾವುಗಳು ಮೂರನೇ ಒಂದು ಭಾಗಕ್ಕಿಂತ ಹೆಚ್ಚಾಗಿದೆ. ಕಳೆದ ವಾರ ಅಮೆರಿಕ, ಭಾರತ, ಇಂಡೋನೇಷ್ಯಾ , ಬ್ರೆಜಿಲ್ ಮತ್ತು ಇರಾನ್ ನಲ್ಲಿ ಹೆಚ್ಚಿನ ಸಂಖ್ಯೆಯ ಕೊರೊನಾ ವೈರಸ್ ಪ್ರಕರಣಗಳು ವರದಿಯಾಗಿವೆ ಎಂದು ಹೇಳಿದೆ.

Four Million New Coronavirus Cases Reported Globally Says WHO

ಆಗಸ್ಟ್ 04ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 200,606,642ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 4,265,056ಕ್ಕೇರಿದೆ. ಒಟ್ಟಾರೆ, 180,785,502ಮಂದಿ ಗುಣಮುಖರಾಗಿದ್ದಾರೆ. ಒಟ್ಟು 15,556,084 ಸಕ್ರಿಯ ಪಾಸಿಟಿವ್ 93,271ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 185,050,558 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕಳೆದ ತಿಂಗಳು ಎಲ್ಲಾ ಕೋವಿಡ್-19 ನಿರ್ಬಂಧ ಸಡಿಲಗೊಳಿಸಿ ಟೀಕೆಗೆ ಗುರಿಯಾಗಿದ್ದ ಬ್ರಿಟನ್ ನಲ್ಲಿ ಸುಮಾರು ಶೇ.60 ರಷ್ಟು ಜನರಿಗೆ ಸಂಪೂರ್ಣವಾಗಿ ಲಸಿಕೆ ಹಾಕಲಾಗಿದೆ.
ದೇಶದ ಆರು ರಾಜ್ಯಗಳಲ್ಲಿ ಮತ್ತೆ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಕೇರಳ, ಮಹಾರಾಷ್ಟ್ರ, ಮಣಿಪುರ, ಮೇಘಾಲಯ, ಅರುಣಾಚಲ ಹಾಗೂ ಮೀಜೋರಾಂ ರಾಜ್ಯಗಳಲ್ಲಿ ಸೋಂಕು ಪ್ರಕರಣ ಹೆಚ್ಚಾಗುತ್ತಿದೆ. ಅದರಲ್ಲೂ ವಿಶೇಷವಾಗಿ ಕೇರಳದಲ್ಲಿ ವಾರದ ಪಾಸಿಟಿವಿಟಿ ದರ ಶೇಕಡ 10 ಕ್ಕಿಂತ ಹೆಚ್ಚಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.

ಕೇರಳದಲ್ಲಿ ಸೋಂಕು ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೆಲವು ಕಠಿಣ ನಿರ್ಬಂಧಗಳನ್ನು ವಿಧಿಸಲು ಮುಂದಾಗಿದೆ. ನೆನ್ನೆ ಈ ಸಂಬಂಧ ಉನ್ನತಮಟ್ಟದ ಅಧಿಕಾರಿಗಳ ಸಭೆಯಲ್ಲಿ ಕುರಿತು ಚರ್ಚೆ ನಡೆಸಲಾಗಿದೆ. ಈ ನಡುವೆ ಮೂರನೇ ಎಲೆ ಆಗಸ್ಟ್ ನಲ್ಲಿ ಆರಂಭವಾಗಿ ಬರುವ ಅಕ್ಟೋಬರ್ ವೇಳೆಗೆ ಸೋಂಕು ಪರಾಕಾಷ್ಠೆಗೆ ಮುಟ್ಟಲಿದೆ ಎಂದು ಆರೋಗ್ಯ ವಲಯದ ಪರಿಣಿತರು ಅಭಿಪ್ರಾಯಪಟ್ಟಿದ್ದಾರೆ.

ಮಹಾರಾಷ್ಟ್ರದಲ್ಲಿ 6,126 ಹೊಸ ಪ್ರಕರಣಗಳು, 7436 ಚೇತರಿಕೆ ಹಾಗೂ 195 ಸಾವಿನ ಪ್ರಕರಣಗಳು ವರದಿಯಾಗಿವೆ. ರಾಜ್ಯದಲ್ಲಿ ಸದ್ಯ 72,810 ಸಕ್ರಿಯ ಪ್ರಕರಣಗಳಿದ್ದು, ಒಟ್ಟಾರೇ ಪಾಸಿಟಿವಿಟಿ ಪ್ರಕರಣಗಳ ಸಂಖ್ಯೆ 63,27,194 ಆಗಿದೆ. ಮಣಿಪುರದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವುದರಿಂದ ಬಹುಶಿಸ್ತೀನ ತಂಡವೊಂದನ್ನು ಕೇಂದ್ರ ಸರ್ಕಾರ ನಿಯೋಜಿಸಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯಾ ಟ್ವೀಟ್ ಮಾಡಿದ್ದಾರೆ.

ಕೇರಳದಲ್ಲಿ ಈಗ ನಿತ್ಯ 20 ಸಾವಿರಕ್ಕಿಂತಲೂ ಹೆಚ್ಚು ಪ್ರಕರಣ ವರದಿಯಾಗುತ್ತಿದೆ. ಈ ನಡುವೆ ದೇಶಾದ್ಯಂತ ಕಳೆದ 24 ಗಂಟೆಗಳ ಅವಧಿಯಲ್ಲಿ 42,ಸಾವಿರದ 625 ಹೊಸ ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ ಇದೇ ವೇಳೆ ಚಿಕಿತ್ಸೆ ಫಲಕಾರಿಯಾಗದೆ 562 ರೋಗಿಗಳು ಮೃತಪಟ್ಟಿದ್ದಾರೆ ಎಂದು ಇಲಾಖೆ ಮಾಹಿತಿ ನೀಡಿದೆ.

English summary
There were more than 4 million new COVID-19 cases reported globally in the last week, driven mostly by spikes in the Middle East and Asia.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X