• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಬಲೂಚಿಸ್ತಾನದ ಕ್ವೆಟ್ಟಾ ನಗರದಲ್ಲಿ ಬಾಂಬ್ ಸ್ಫೋಟಕ್ಕೆ ನಾಲ್ವರು ಸಾವು

|

ಕರಾಚಿ, ಅಕ್ಟೋಬರ್.25: ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಬಾಂಬ್ ಸ್ಫೋಟದ ದುರ್ಘಟನೆ ನಡೆದಿದೆ. ನೈಋತ್ಯ ಬಲೂಚಿಸ್ತಾನ್ ಪ್ರಾಂತ್ಯದ ರಾಜಧಾನಿ ಕ್ವಟ್ಟಾದ ಹಜಾರ್ ಗಂಜ್ ಪ್ರದೇಶದಲ್ಲಿ ಸಂಭವಿಸಿದ ಸ್ಫೋಟದಲ್ಲಿ ನಾಲ್ವರು ಪ್ರಾಣ ಬಿಟ್ಟಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ.

ಪಾಕಿಸ್ತಾನದಲ್ಲಿ ಪ್ರಧಾನಮಂತ್ರಿ ಇಮ್ರಾನ್ ಖಾನ್ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳ ಮಹಾಮೈತ್ರಿಕೂಟವು ಕಳೆದ ಮೂರು ದಿನಗಳಿಂದ ಪಾಕಿಸ್ತಾನ್ ಪ್ರಜಾಪ್ರಭುತ್ವ ಚಳುವಳಿಯನ್ನು ನಡೆಸುತ್ತಿವೆ. ಕ್ವಟ್ಟಾದ ಆಯುಬ್ ಮೈದಾನದಲ್ಲಿ ಪ್ರತಿಭಟನೆ ನಡೆಸುತ್ತಿರುವುದರ ನಡುವೆ ಈ ಸ್ಫೋಟ ಸಂಭವಿಸಿದ್ದು, ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ.

ಪಾಕಿಸ್ತಾನದಲ್ಲಿ ಪೊಲೀಸ್-ಸೇನೆ ಸಂಘರ್ಷ: ನಾಗರಿಕ ಯುದ್ಧದ ಭೀತಿ

ಸರ್ಕಾರದ ವಿರುದ್ಧ ನಡೆಸುತ್ತಿರುವ ಪ್ರತಿಭಟನಾ ಚಳುವಳಿಯು ಇದೇ ಮಾರ್ಗದಲ್ಲಿ ಹಾದು ಹೋಗಬೇಕಿತ್ತು. 35 ರಿಂದ 40 ನಿಮಿಷಗಳ ಅಂತರದಲ್ಲಿ ಈ ಸ್ಪೋಟ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ಸುದ್ದಿ ಮಾಧ್ಯಮಗಳು ವರದಿ ಮಾಡಿವೆ.

ಪ್ರಜಾಪ್ರಭುತ್ವ ಚಳುವಳಿ ಮುಂದೂಡಿಕೆ:

ಬಲೂಚಿಸ್ತಾನ್ ಪ್ರಾಂತ್ಯದಲ್ಲೇ ಸಂಭವಿಸಿದ ಸ್ಫೋಟದಿಂದ ಸ್ಥಳೀಯ ಸರ್ಕಾರವು ಎಚ್ಚೆತ್ತುಕೊಂಡಿದೆ. ಸಾರ್ವಜನಿಕವಾಗಿ ನಡೆಸಲು ಉದ್ದೇಶಿಸಿದ್ದ ಪಾಕಿಸ್ತಾನ್ ಪ್ರಜಾಪ್ರಭುತ್ವ ಚಳುವಳಿಯನ್ನು ಸ್ವಲ್ಪ ದಿನಗಳ ಮಟ್ಟಿಗೆ ಮುಂದೂಡಿಕೆ ಮಾಡಲು ತೀರ್ಮಾನಿಸಲಾಗಿದೆ.

ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ ಮುಖಂಡ ಮೊಹಮ್ಮದ್ ಸಫ್ದಾರ್ ಅವರ ವಿರುದ್ಧ ಎಫ್‌ಐಆರ್ ದಾಖಲಿಸಿ ಬಂಧಿಸುವಂತೆ ಸೇನೆಯು ಒತ್ತಡ ಹೇರಿರುವುದು ಆಘಾತಕಾರಿ ಎಂದಿರುವ ಅನೇಕ ಪೊಲೀಸ್ ಅಧಿಕಾರಿಗಳು ಮಂಗಳವಾರ ರಜೆ ಅರ್ಜಿ ಸಲ್ಲಿಸಿದ್ದಾರೆ ಎನ್ನಲಾಗಿದೆ.

English summary
Four People Dead In Bomb Blast At Pakistan's Quetta City. Know More.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X