ಪಿಯು ವಿದ್ಯಾರ್ಥಿಗಳಿಗೆ ಉಚಿತವಾಗಿ ಸ್ಮರ್ಧಾತ್ಮಕ ಪರೀಕ್ಷೆ ತರಬೇತಿ

ಬೆಂಗಳೂರು, ಜುಲೈ 11 : ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸಂತಸದ ಸುದ್ದಿ. ಈ ಶೈಕ್ಷಣಿಕ ವರ್ಷದಿಂದಲೇ ವಿದ್ಯಾರ್ಥಿಗಳಿಗೆ ಉಚಿತವಾಗಿ ಸರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ತರಬೇತಿ ಸಿಗಲಿದೆ.

ಹೌದು, ಪದವಿ ಪೂರ್ವ ಶಿಕ್ಷಣ ಇಲಾಖೆ ಇಂತಹ ಯೋಜನೆಯನ್ನು ಪ್ರಾಯೋಗಿಕ ಜಾರಿಗೆ ತರುತ್ತಿದೆ. 2018-19ನೇ ಸಾಲಿನಿಂದ ರಾಜ್ಯದ 250 ಪಿಯುಸಿ ಕಾಲೇಜುಗಳಲ್ಲಿ ಸ್ಮರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ವಿದ್ಯಾರ್ಥಿಗಳಿಗೆ ತರಬೇತಿ ನೀಡಲಾಗುತ್ತದೆ.

ಸಿಇಟಿ, ನೀಟ್, ಜೆಇಇ ಮುಂತಾದ ಪರೀಕ್ಷೆಗಳನ್ನು ಎದುರಿಸಲು ವಿದ್ಯಾರ್ಥಿಗಳಿಗೆ ಉಚಿತವಾಗಿ ತರಬೇತಿ ನೀಡಲಾಗುತ್ತದೆ. ಆನ್‌ಲೈನ್ ಮೂಲಕ ತರಗತಿಗಳು ನಡೆಯಲಿದ್ದು, ತಜ್ಞರು ಬೇರೆ ಕಡೆ ಕುಳಿತು ವಿದ್ಯಾರ್ಥಿಗಳಿಗೆ ಪಾಠ ಮಾಡಲಿದ್ದಾರೆ.

Free coaching class for PU students to face competitive examinations

ಪ್ರತಿ ಬಾರಿ ತಜ್ಞರ ಪಾಠ ಮುಕ್ತಾಯಗೊಂಡ ಬಳಿಕ ವಿದ್ಯಾರ್ಥಿಗಳು ಪ್ರಶ್ನೆಗಳನ್ನು ಕೇಳಲು ಅವಕಾಶ ನೀಡಲಾಗುತ್ತದೆ. ಪ್ರತಿ ವಾರ ವಿದ್ಯಾರ್ಥಿಗಳಿಗೆ 6 ತರಗತಿಗಳನ್ನು ಮಾಡಲಾಗುತ್ತದೆ. ಗ್ರಾಮೀಣ ಭಾಗದಿಂದ ಬಂದಿರುವ ವಿದ್ಯಾರ್ಥಿಗಳಿಗೆ ಸಹಾಯಕವಾಗಲಿ ಎಂದು ಇಂತಹ ತರಬೇತಿ ನಡೆಸಲಾಗುತ್ತಿದೆ.

ಈ ತರಬೇತಿಯಿಂದಾಗಿ ಸರ್ಕಾರಿ ಕಾಲೇಜುಗಳಲ್ಲಿ ಪ್ರವೇಶಾತಿಯೂ ಹೆಚ್ಚಳವಾಗಲಿದೆ. ವಿದ್ಯಾರ್ಥಿಗಳಿಗೆ ಸ್ಮರ್ಧಾತ್ಮಕ ಪರೀಕ್ಷೆ ಬರೆಯಲು ಸಹಾಯಕವಾಗಲಿದೆ ಎಂದು ಇಲಾಖೆಯ ಅಧಿಕಾರಿಗಳು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+