ಅಯ್ಯಯ್ಯೋ Bro ನಾನಂತೂ ಇಲ್ಲಿ ಸಿಕ್ಕಾಕೊಂಡಿದ್ದೀನಿ ಅಂತ ಟ್ರಂಪ್‌ಗೆ ಫ್ರಾನ್ಸ್ ಅಧ್ಯಕ್ಷ ಫೋನ್! ವೈರಲ್ ವಿಡಿಯೋ
ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಿವಿಧ ದೇಶಗಳ ಮೇಲೆ ಬೇಕಾಬಿಟ್ಟಿ ಸುಂಕವನ್ನು ವಿಧಿಸುತ್ತಿರುವುದರ ನಡುವೆಯೇ ಫ್ರಾನ್ಸ್ ಅಧ್ಯಕ್ಷ ಇಮ್ಯಾನ್ಯುಯೆಲ್ ಮ್ಯಾಕ್ರನ್ ಅವರನ್ನು ನಡು ರಸ್ತೆಯಲ್ಲಿ ನಿಲ್ಲಿಸಿ ಅವಮಾನ ಮಾಡಿದ್ದಾರೆ ಎನ್ನಲಾಗಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ನೋಡುವುದಕ್ಕೆ ಹೋದ ಇಮ್ಯಾನ್ಯುಯೆಲ್ ಅವರು ಮುಜುಗರಕ್ಕೆ ಒಳಗಾಗಿದ್ದಾರೆ. ಅಲ್ಲದೇ ಡಿಯರ್ ಡೊನಾಲ್ಡ್ ಟ್ರಂಪ್ ಅವರೇ ನಾನು ಇಲ್ಲಿ ಸಿಕ್ಕಿ ಹಾಕಿಕೊಂಡಿದ್ದೀನಿ ಅಂತ ಟ್ರಂಪ್‌ಗೆ ಫೋನ್ ಸಹ ಮಾಡಿದ್ದಾರೆ.
ಅಯ್ಯಯ್ಯೋ ಬ್ರೋ ನಾನಂತೂ ಇಲ್ಲಿ ಸಿಕ್ಕಾಕೊಂಡಿದ್ದೀನಿ ಅಂತ ಟ್ರಂಪ್‌ಗೆ ಫ್ರಾನ್ಸ್ ಅಧ್ಯಕ್ಷ ಫೋನ್ ಇಮ್ಯಾನ್ಯುಯೆಲ್ ಮ್ಯಾಕ್ರನ್ ಅವರು ಫೋನ್ ಮಾಡಿದ್ದಾರೆ. ಇದೀಗ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗುತ್ತಿದೆ. ಇಮ್ಯಾನ್ಯುಯೆಲ್ ಮ್ಯಾಕ್ರನ್ ಅವರ ವಿಡಿಯೋಗಳು ಈ ಹಿಂದೆಯೂ ವೈರಲ್ ಆಗಿರುವುದು ಇದೆ. ಇದೀಗ ಅವರು ಅಮೆರಿಕಾದ ಪೊಲೀಸ್ ಸಿಬ್ಬಂದಿ / ಬೆಂಗಾವಲು ಪಡೆಯಿಂದ ತಡೆಯಲ್ಪಟ್ಟಿರುವ ವಿಡಿಯೋ ವೈರಲ್ ಆಗುತ್ತಿದೆ.

ಅಮೆರಿಕಾದ ನ್ಯೂಯಾರ್ಕ್ ಬೀದಿಯಲ್ಲಿ ಮಿನಿ ಹೈ ಡ್ರಾಮಾವೊಂದು ನಡೆದಿದೆ. ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬೆಂಗಾವಲು ಪಡೆಗೆ ದಾರಿ ಮಾಡಿಕೊಡುವ ಕಾರಣಕ್ಕೆ ಪೊಲೀಸರು ಫ್ರಾನ್ಸ್ ಅಧ್ಯಕ್ಷ ಇಮ್ಯಾನ್ಯುಯೆಲ್ ಮ್ಯಾಕ್ರನ್ ಅವರನ್ನೇ ನಡು ಬೀದಿಯಲ್ಲಿ ನಿಲ್ಲಿಸಿದ್ದಾರೆ. ಇದು ಸಾರ್ವಜನಿಕರ ಆಕ್ರೋಶಕ್ಕೂ ಕಾರಣವಾಗಿದೆ. ಒಂದು ದೇಶದ ಅಧ್ಯಕ್ಷರನ್ನು ನಡೆಸಿಕೊಳ್ಳುವ ವಿಧಾನ ಇದಲ್ಲ ಅಂತ ಹಲವರು ಅಭಿಪ್ರಾಯಪಟ್ಟಿದ್ದಾರೆ.
ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬೆಂಗಾವಲು ಪಡೆ ಮುಂದೆ ಹೋಗುವ ಕಾರಣಕ್ಕೆ ನ್ಯೂಯಾರ್ಕ್ ಬೀದಿಗಳನ್ನು ಪೊಲೀಸರು ತೆರವುಗೊಳಿಸುತ್ತಿದ್ದರು. ಇದೇ ಸಂದರ್ಭದಲ್ಲಿ ಫ್ರಾನ್ಸ್ ಅಧ್ಯಕ್ಷ ಇಮ್ಯಾನ್ಯುಯೆಲ್ ಮ್ಯಾಕ್ರನ್ ಅವರ ಬೆಂಗಾವಲು ಪಡೆಯನ್ನು ತಡೆಯಲಾಗಿದೆ. ಇನ್ನು ಮ್ಯಾಕ್ರನ್ 80ನೇ ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಭಾಷಣ ಮಾಡಿದ ಕೆಲವೇ ನಿಮಿಷಗಳ ಅಂತರದಲ್ಲಿ ಈ ಘಟನೆ ನಡೆದಿದೆ.
Major security failure in the US as France's President Macron is forced to walk through the streets of New York, the incident is reported to have been triggered by Trump's motorcade blocking access to the French delegation after President Macron's Palestine speech. pic.twitter.com/Un6Bm1z80Q
— Anonymous (@YourAnonCentral) September 24, 2025
ಇಮ್ಯಾನ್ಯುಯೆಲ್ ಮ್ಯಾಕ್ರನ್ ಅವರು ಫ್ಯಾಲೆಸ್ತೈನ್ ರಾಷ್ಟ್ರವನ್ನು ಫ್ರಾನ್ಸ್ ಔಪಚಾರಿಕವಾಗಿ ಗುರುತಿಸುವುದಾಗಿ ತಮ್ಮ ಭಾಷಣದಲ್ಲಿ ಹೇಳಿದ್ದರು. ಇದಾದ ಕೆಲವೇ ಕ್ಷಣಗಳಲ್ಲಿ ಈ ಘಟನೆ ನಡೆದಿದೆ. ಇಸ್ರೇಲ್ ಪರವಾಗಿ ಅಮೆರಿಕಾ ಇದೆ. ಫ್ಯಾಲೆಸ್ತೈನ್ ರಾಷ್ಟ್ರಕ್ಕೆ ಭಾರೀ ಬೆಂಬಲ ವ್ಯಕ್ತವಾಗುತ್ತಿರುವುದು ಅಮೆರಿಕಾಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಮ್ಯಾಕ್ರನ್ ಮತ್ತು ಅವರ ತಂಡವು ಅಮೆರಿಕಾದ ಪೊಲೀಸ್ ಅಧಿಕಾರಿಯೊಂದಿಗೆ ಈ ಬಗ್ಗೆ ಮಾತನಾಡುತ್ತಿದ್ದಾರೆ. ಅಲ್ಲದೇ ಅಮೆರಿಕಾದ ಅಧ್ಯಕ್ಷರಿಗೆ ಈ ವಿಚಾರವಾಗಿ ನಾನು ಕರೆ ಮಾಡಿ ಮಾತನಾಡಲಿದ್ದೇನೆ ಇರಿ ಎಂದೂ ಫ್ರಾನ್ಸ್ ಅಧ್ಯಕ್ಷರು ಹೇಳಿರುವುದು ಸಹ ವಿಡಿಯೋದಲ್ಲಿ ಇದೆ.
-
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ












Click it and Unblock the Notifications