15th BRICS Summit: ಇಂದಿನಿಂದ ಬ್ರಿಕ್ಸ್ ಶೃಂಗಸಭೆ ಆರಂಭ, ಈ 10 ವಿಷಯಗಳ ಬಗ್ಗೆ ಭಾರತ ಮತ್ತು ಚೀನಾ ನಡುವೆ ಚರ್ಚಿಸಬಹುದು
ಬ್ರಿಕ್ಸ್ ಶೃಂಗಸಭೆ ಮಂಗಳವಾರದಿಂದ (ಆಗಸ್ಟ್ 22) ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್‌ನಲ್ಲಿ ಪ್ರಾರಂಭವಾಗಲಿದೆ. 15ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಜೋಹಾನ್ಸ್‌ಬರ್ಗ್‌ಗೆ ತೆರಳಿದ್ದಾರೆ. ಈ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸುವ ಸಾಧ್ಯತೆಯಿದೆ. ಈ ಸಮಯದಲ್ಲಿ ಇಬ್ಬರೂ ಉನ್ನತ ನಾಯಕರು ಗಂಭೀರ ವಿಷಯಗಳ ಬಗ್ಗೆ ಚರ್ಚಿಸಬಹುದು.
ಆಗಸ್ಟ್ 22ರಿಂದ 24ರವರೆಗೆ ಬ್ರಿಕ್ಸ್ ಶೃಂಗಸಭೆ ನಡೆಯಲಿದೆ. ಇದಕ್ಕಾಗಿ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡಿರುವ ಮೋದಿ ಅವರು ಇದು ಮೂರನೇ ಬಾರಿಗೆ ದಕ್ಷಿಣ ಆಫ್ರಿಕಾಕ್ಕೆ ಭೇಟಿ ನೀಡುತ್ತಿದ್ದಾರೆ. ಬ್ರಿಕ್ಸ್ ಶೃಂಗಸಭೆಯ ನೇತೃತ್ವ ದಕ್ಷಿಣ ಆಫ್ರಿಕಾ ವಹಿಸಿಕೊಂಡಿದೆ. ಬ್ರಿಕ್ಸ್ ಅಧ್ಯಕ್ಷರು ಸಹ ಆಫ್ರಿಕಾದ ಅಧ್ಯಕ್ಷರೇ ಆಗಿದ್ದಾರೆ. ''BRICS ಮತ್ತು ಆಫ್ರಿಕಾ: ಪರಸ್ಪರ ವೇಗವರ್ಧಿತ ಬೆಳವಣಿಗೆ ಹಾಗೂ ಸುಸ್ಥಿರ ಅಭಿವೃದ್ಧಿ ಮತ್ತು ಅಂತರ್ಗತ ಬಹುಪಕ್ಷೀಯತೆಗಾಗಿ ಪಾಲುದಾರಿಕೆ'' ಎಂಬ ವಿಷಯವನ್ನು ಇಟ್ಟುಕೊಂಡು ಈ ಬಾರಿಯ ಶೃಂಗಸಭೆ ಆಯೋಜಿಸಲಾಗಿದೆ.
PM Narendra Modi embarks on four-day visit to South Africa, Greece
— ANI Digital (@ani_digital) August 22, 2023
Read @ANI Story | https://t.co/EUEWNg7Ibp#PMModi #BRICSSummit2023 #SouthAfrica #Greece pic.twitter.com/jRICc7PYFV
ಭಾರತ ಮತ್ತು ಚೀನಾ ನಡುವೆ ನಡೆಯುತ್ತಿರುವ ಸಭೆಯಲ್ಲಿ ಚರ್ಚೆಯಾಗುವ ಅಂಶಗಳು:-
*ಜೋಹಾನ್ಸ್‌ಬರ್ಗ್‌ನಲ್ಲಿ ನಡೆಯಲಿರುವ 15ನೇ ಬ್ರಿಕ್ಸ್ ಶೃಂಗಸಭೆಯ ಸಂದರ್ಭದಲ್ಲಿ ಬ್ರೆಜಿಲ್, ಚೀನಾ, ರಷ್ಯಾ ಮತ್ತು ದಕ್ಷಿಣ ಆಫ್ರಿಕಾದ ನಾಯಕರೊಂದಿಗೆ ಪ್ರಧಾನಿ ಮಾತುಕತೆ ನಡೆಸಲಿದ್ದಾರೆ. ಇದು 2019 ರ ನಂತರದ ಮೊದಲ BRICS ಶೃಂಗಸಭೆಯಾಗಿದೆ (ಕರೋನಾ ಸಾಂಕ್ರಾಮಿಕ), ಇದರಲ್ಲಿ ಎಲ್ಲಾ ನಾಯಕರು ವೈಯಕ್ತಿಕವಾಗಿ ಭೇಟಿಯಾಗಲಿದ್ದಾರೆ.

*ಪ್ರಧಾನಿ ಮೋದಿ ಮತ್ತು ಕ್ಸಿ ಜಿನ್‌ಪಿಂಗ್ ನಡುವೆ ದ್ವಿಪಕ್ಷೀಯ ಸಭೆ ನಡೆದರೆ, ಮೇ 2020 ರಲ್ಲಿ ಭಾರತ-ಚೀನಾ ಗಡಿ ಬಿಕ್ಕಟ್ಟು ಪ್ರಾರಂಭವಾದ ನಂತರ ಇದು ಅವರ ಮೊದಲನೆಯ ಸಭೆಯಾಗಿದೆ. ಕಳೆದ ವರ್ಷ ನವೆಂಬರ್‌ನಲ್ಲಿ ಬಾಲಿಯಲ್ಲಿ ಇಂಡೋನೇಷ್ಯಾ ಅಧ್ಯಕ್ಷ ಜೋಕೊ ವಿಡೋಡೊ ಆಯೋಜಿಸಿದ್ದ ಜಿ20 ಔತಣಕೂಟದಲ್ಲಿ ಉಭಯ ನಾಯಕರು ಭೇಟಿಯಾಗಿದ್ದರು.
*15ನೇ ಬ್ರಿಕ್ಸ್ ಶೃಂಗಸಭೆ ವೇಳೆ ವಾಣಿಜ್ಯೋದ್ಯಮ ಸಭೆಗಳು, ಬ್ರಿಕ್ಸ್ ವ್ಯಾಪಾರ ಮಂಡಳಿ, ಬ್ರಿಕ್ಸ್ ಮಹಿಳಾ ವ್ಯಾಪಾರ ಒಕ್ಕೂಟ ಸಭೆಗಳಲ್ಲಿ ಭಾರತದ ವ್ಯಾಪಾರ ಒಕ್ಕೂಟದ ನಿಯೋಗವು ಮಹತ್ವದ ಚರ್ಚೆಗಳಲ್ಲಿ ಭಾಗವಹಿಸಲಿದೆ.
*ಪೂರ್ವ ಲಡಾಖ್‌ನ ಗಡಿಯಲ್ಲಿ ಭಾರತ ಮತ್ತು ಚೀನಾದ ಸೈನಿಕರು ಮೂರು ವರ್ಷಗಳಿಂದಲೂ ಮುಖಾಮುಖಿ ಸ್ಥಿತಿಯಲ್ಲಿದ್ದಾರೆ. ಎರಡೂ ದೇಶಗಳು ವ್ಯಾಪಕ ರಾಜತಾಂತ್ರಿಕ ಮತ್ತು ಮಿಲಿಟರಿ ಮಾತುಕತೆಗಳ ನಂತರ ಅನೇಕ ಸ್ಥಳಗಳಲ್ಲಿ ಸೈನ್ಯವನ್ನು ಹಿಂತೆಗೆದುಕೊಳ್ಳಲಾಗಿದೆ.
*ಜೂನ್ 2020 ರಲ್ಲಿ ಗಾಲ್ವಾನ್ ಕಣಿವೆಯಲ್ಲಿ ನಡೆದ ಭೀಕರ ಘರ್ಷಣೆಯ ನಂತರ ಭಾರತ-ಚೀನಾ ಸಂಬಂಧಗಳು ಹದಗೆಟ್ಟಿವೆ. ಇದು ಹಲವು ದಶಕಗಳಲ್ಲಿ ಉಭಯ ದೇಶಗಳ ನಡುವಿನ ಅತ್ಯಂತ ಗಂಭೀರವಾದ ಮಿಲಿಟರಿ ಸಂಘರ್ಷವಾಗಿದೆ.
ಬ್ರಿಕ್ಸ್ ಸಭೆ ಬಳಿಕ ಗ್ರೀಸ್‌ಗೆ ಮೋದಿ ಭೇಟಿ
ಮಾಹಿತಿಯ ಪ್ರಕಾರ, ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು 15 ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೊವ್ ರಷ್ಯಾದ ನಿಯೋಗದ ನೇತೃತ್ವ ವಹಿಸಲಿದ್ದಾರೆ. ಬ್ರಿಕ್ಸ್ ಸಭೆಯನ್ನು ಮುಗಿಸಿದ ನಂತರ ಪ್ರಧಾನಿ ಮೋದಿ ಆಗಸ್ಟ್ 25 ರಂದು ಗ್ರೀಸ್‌ಗೆ ಭೇಟಿ ನೀಡಲಿದ್ದಾರೆ.
ಮುಂದಿನ ದಿನಗಳಲ್ಲಿ ಗ್ರೀಸ್‌ಗೆ ಭೇಟಿ ನೀಡುವ ಕುರಿತು ಪ್ರಧಾನಿ ಮೋದಿ ತಮ್ಮ ಎಕ್ಸ್ (ಟ್ವಿಟರ್) ಹ್ಯಾಂಡಲ್‌ನಲ್ಲಿ ಬರೆದಿದ್ದಾರೆ. "ಆಗಸ್ಟ್ 25 ರಂದು ನಾನು ಗ್ರೀಸ್‌ಗೆ ಭೇಟಿ ನೀಡುತ್ತೇನೆ, ಭಾರತವು ಶತಮಾನಗಳಿಂದ ನಾಗರಿಕತೆಯ ಸಂಪರ್ಕವನ್ನು ಹೊಂದಿದೆ. ನಾನು ಗ್ರೀಸ್‌ನ ಪ್ರಧಾನಿ ಕಿರಿಯಾಕೋಸ್ ಮಿಟ್ಸೊಟಾಕಿಸ್ ಅವರೊಂದಿಗೆ ಮಾತನಾಡುತ್ತೇನೆ. ಇದಕ್ಕಾಗಿ ಎದುರುನೋಡುತ್ತಿದ್ದೇನೆ. ನಾನು ಅಲ್ಲಿನ ಭಾರತೀಯ ಸಮುದಾಯದೊಂದಿಗೂ ಸಂವಹನ ನಡೆಸುತ್ತೇನೆ" ಎಂದಿದ್ದಾರೆ.












Click it and Unblock the Notifications