ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಷ್ಯಾಗೆ ಖಡಕ್ ವಾರ್ನಿಂಗ್..! ಪುಟಿನ್ ಸಿಡಿದೆದ್ದರೆ ಎಲ್ಲಾ ಧೂಳ್.. ಧೂಳ್..!

|
Google Oneindia Kannada News

ಉಕ್ರೇನ್ ಗಡಿಯಲ್ಲಿ ರಷ್ಯಾ ಭಾರಿ ಪ್ರಮಾಣದಲ್ಲಿ ಸೇನೆ ಹಾಗೂ ಶಸ್ತ್ರಾಸ್ತ್ರ ನಿಯೋಜನೆ ಮಾಡಿರುವ ಬೆನ್ನಲ್ಲೇ ಯುದ್ಧಭೀತಿ ಆವರಿಸಿದೆ. ಅದರಲ್ಲೂ 'ಜಿ-7' (ಅಮೆರಿಕ, ಬ್ರಿಟನ್, ಕೆನಡಾ, ಫ್ರಾನ್ಸ್, ಜರ್ಮನಿ, ಜಪಾನ್ ಹಾಗೂ ಇಟಲಿ) ನೇತೃತ್ವದ ಒಕ್ಕೂಟ ರಷ್ಯಾಗೆ ಖಡಕ್ ವಾರ್ನಿಂಗ್ ನೀಡಿದೆ. ಉಕ್ರೇನ್ ಗಡಿಯಿಂದ ಸೇನೆ ಹಿಂದಕ್ಕೆ ಪಡೆಯದೇ ಇದ್ದರೆ ಪರಿಣಾಮ ನೆಟ್ಟಗಿರಲ್ಲ ಎಂದಿದೆ 'ಜಿ-7' ರಾಷ್ಟ್ರಗಳ ಒಕ್ಕೂಟ.

ಜಗತ್ತಿನ ಶಕ್ತಿಶಾಲಿ ಒಕ್ಕೂಟಗಳ ಪೈಕಿ 'ಜಿ-7' ಕೂಡ ಒಂದು. 1975ರಲ್ಲಿ ಸ್ಥಾಪನೆಯಾದ 'ಜಿ-7' ರಾಷ್ಟ್ರಗಳ ಒಕ್ಕೂಟ ಬಲಶಾಲಿ ಹಾಗೂ ರಷ್ಯಾ ಮತ್ತು ಚೀನಾ ವಿರೋಧಿ ಪಡೆಯಲ್ಲಿ ಗುರುತಿಸಿಕೊಂಡಿದೆ. ಈಗ ಉಕ್ರೇನ್ ಮೇಲೆ ರಷ್ಯಾದಿಂದ ದಾಳಿ ನಡೆಯಲಿದೆ ಎಂಬ ಆರೋಪಗಳ ನಡುವೆ 'ಜಿ-7' ಒಕ್ಕೂಟ ಮೈಕೊಡವಿ ನಿಂತಿದೆ.

ಕೂಡಲೇ ಅಲ್ಲಿಂದ ಜಾಗ ಖಾಲಿ ಮಾಡಿ, ಉಕ್ರೇನ್ ಗಡಿಬಿಟ್ಟು ಹೊರಡಿ ಎಂಬ ಸಂದೇಶ ರವಾನಿಸಲಾಗಿದೆ. ಆದರೆ ರಷ್ಯಾ ಇದಕ್ಕೆ ಕೇರ್ ಮಾಡದೆ, ಉಕ್ರೇನ್ ಗಡಿಯಲ್ಲಿ ಮತ್ತಷ್ಟು ಸೇನೆ ಹಾಗೂ ಟ್ಯಾಂಕರ್ ನಿಯೋಜಿಸುತ್ತಿದೆ.

ಪುಟಿನ್ ಸಿಡಿದೆದ್ದರೆ ಧೂಳ್..!

ಪುಟಿನ್ ಸಿಡಿದೆದ್ದರೆ ಧೂಳ್..!

'ಜಿ-7' ಒಕ್ಕೂಟ ವಾರ್ನಿಂಗ್ ಕೊಡೋದು ಇರಲಿ. ಪುಟಿನ್ ಉಕ್ರೇನ್ ಜೊತೆಗೆ ಯುದ್ಧ ಮಾಡಲೇಬೇಕು ಎಂದು ನಿರ್ಧರಿಸಿದ್ದರೆ ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಏಕೆಂದರೆ ರಷ್ಯಾದ ಸೇನೆ ಬಲಶಾಲಿಯಾಗಿದೆ. 'ಜಿ-7' ಒಕ್ಕೂಟಕ್ಕೆ ತಿರುಗೇಟು ಕೊಡೊ ಶಕ್ತಿ ಹೊಂದಿದೆ.

ಹೀಗಾಗಿಯೇ 'ಜಿ-7' ಒಕ್ಕೂಟದ ರಾಷ್ಟ್ರಗಳಿಗೂ ಸಣ್ಣಗೆ ನಡುಕ ಉಂಟಾಗಿದೆ. ಅಕಸ್ಮಾತ್ ರಷ್ಯಾ ಉಕ್ರೇನ್ ಮೇಲೆ ಯುದ್ಧ ನಡೆಸಿದ್ದೇ ಆದರೆ ಯೂರೋಪ್‌ನ ನೆಮ್ಮದಿ ಹಾರಿ ಹೋಗಲಿದೆ. 20ನೇ ಶತಮಾನದ ಆರಂಭಿಕ ದಿನಗಳು ಅಂದರೆ ಮೊದಲ ಮತ್ತು ಎರಡನೇ ಮಹಾಯುದ್ಧದ ಸನ್ನಿವೇಶಗಳು ಮರುಕಳಿಸಲಿವೆ.

ಸೈನಿಕರ ಜೊತೆ ಟ್ಯಾಂಕರ್..!

ಸೈನಿಕರ ಜೊತೆ ಟ್ಯಾಂಕರ್..!

ಅಪಾರ ಪ್ರಮಾಣದ ಸೇನೆಯನ್ನ ಉಕ್ರೇನ್ ಗಡಿಯಲ್ಲಿ ನಿಯೋಜನೆ ಮಾಡಿರುವ ರಷ್ಯಾ, ಇವರ ಜೊತೆಯಲ್ಲಿ ಟ್ಯಾಂಕರ್‌ಗಳನ್ನೂ ಗಡಿಗೆ ಕೊಂಡೊಯ್ದಿದೆ. ಇದು ಸಹಜವಾಗಿ ಆತಂಕ ಹೆಚ್ಚಾಗುವಂತೆ ಮಾಡಿದೆ. ಈಗಾಗಲೇ ಈ ಬಗ್ಗೆ ಉಕ್ರೇನ್ ಆತಂಕ ಹೊರಹಾಕಿದೆ. ಗಡಿಯಲ್ಲಿ ರಷ್ಯಾ ನಡೆ ಭಯ ಹುಟ್ಟಿಸುತ್ತಿದೆ.

ವಿವಾದವಿರುವ ಗಡಿ ಭಾಗದಲ್ಲೇ ಭಾರಿ ಪ್ರಮಾಣದ ಸೇನೆ ನಿಯೋಜನೆ ಮಾಡಿದೆ ಎಂದಿದೆ. ಇದು ಯುರೋಪ್ ಹಾಗೂ ಅಮೆರಿಕ ಮತ್ತಿತರ ರಾಷ್ಟ್ರಗಳ ನಿದ್ದೆ ಹಾರಿಹೋಗುವಂತೆ ಮಾಡಿದೆ. ಏಕೆಂದರೆ ಯುರೋಪ್‌ನಲ್ಲಿ ಯುದ್ಧ ಆರಂಭವಾದರೆ 3ನೇ ಮಹಾಯುದ್ಧ ಆರಂಭ ಆದಂತೆ ಎಂಬುದು ತಜ್ಞರ ಆತಂಕ.

ಅಮೆರಿಕದ ಸ್ನೇಹ ಮುಳುವಾಯ್ತಾ..?

ಅಮೆರಿಕದ ಸ್ನೇಹ ಮುಳುವಾಯ್ತಾ..?

ಉಕ್ರೇನ್ ರಷ್ಯಾದ ಆಪ್ತಮಿತ್ರ. ಆದರೆ ಇದು ಸಹಜವಾಗಿ ರಷ್ಯಾ ಕಣ್ಣು ಕೆಂಪಗಾಗುವಂತೆ ಮಾಡಿದೆ. ಇತ್ತೀಚೆಗೆ ಅಮೆರಿಕದ ವೆಪನ್‌ಗಳನ್ನ ಉಕ್ರೇನ್ ಖರೀದಿ ಮಾಡಿತ್ತು, ರಷ್ಯಾ ಈ ಒಪ್ಪಂದವನ್ನ ತೀವ್ರವಾಗಿ ವಿರೋಧಿಸಿತ್ತು. ಘಟನೆ ನಡೆದು ಕೆಲವೇ ದಿನಗಳಲ್ಲಿ ರಷ್ಯಾ ತನ್ನ ಅಪಾರ ಪ್ರಮಾಣದ ಸೇನೆ ಹಾಗೂ ಯುದ್ಧ ಟ್ಯಾಂಕರ್‌ಗಳನ್ನು ಉಕ್ರೇನ್ ಗಡಿಗೆ ತಂದು ಬಿಟ್ಟಿದೆ. ಇದು ಯುದ್ಧ ನಡೆಯುವ ಪರೋಕ್ಷ ಎಚ್ಚರಿಕೆ ಎಂಬುದು ತಜ್ಞರ ವಿಶ್ಲೇಷಣೆ. ಆದರೆ ರಷ್ಯಾ ಮಾತ್ರ ಹೆದರಬೇಡಿ, ನಾವು ಏನೂ ಮಾಡೋದಿಲ್ಲ ಅಂತಾ ಭರವಸೆ ನೀಡುತ್ತಿದೆ

ರಷ್ಯಾ ನೆನೆದು ನಡುಗಿದೆ ಜರ್ಮನಿ..!

ರಷ್ಯಾ ನೆನೆದು ನಡುಗಿದೆ ಜರ್ಮನಿ..!

ಯುರೋಪ್ ಮೇಲೆ ನಿಯಂತ್ರಣ ಸಾಧಿಸಲು ರಷ್ಯಾ ಕಾದು ಕುಳಿತಿದೆ ಎಂದು ಯುರೋಪ್ ಒಕ್ಕೂಟದ ಕೆಲ ಬಲಾಢ್ಯ ರಾಷ್ಟ್ರಗಳು ಆರೋಪ ಮಾಡುತ್ತಾ ಬಂದಿವೆ. ಹೀಗಾಗಿಯೇ ಅಮೆರಿಕದ ಜೊತೆ ಸಾಧ್ಯವಾದಷ್ಟು ಸ್ನೇಹ ಗಿಟ್ಟಿಸಿಕೊಂಡಿತ್ತು ಯುರೋಪ್.

ಆದರೆ ಅದ್ಯಾವಾಗ ಟ್ರಂಪ್ ಅಮೆರಿಕದ ಅಧ್ಯಕ್ಷರಾದರೋ ಅಂದಿನಿಂದ ಈ ಸಂಬಂಧ ಹಳಸುತ್ತಾ ಬಂದಿದೆ. ಅಮೆರಿಕ ಮತ್ತು ಯುರೋಪ್ ಸ್ನೇಹ ನಾಶವಾಗುವ ಹಂತಕ್ಕೆ ಬಂದಿದೆ. ಇದೇ ಸಂದರ್ಭವನ್ನ ರಷ್ಯಾ ಬಳಸಿಕೊಂಡು, ಯುದ್ಧ ಸಾರುವ ಆತಂಕ ಜರ್ಮನಿಗೆ ಕಾಡುತ್ತಿದೆ. 2ನೇ ಮಹಾಯುದ್ಧ ನಡೆದಾಗ ಜರ್ಮನಿಯನ್ನ ಧೂಳಿಪಟ ಮಾಡಿತ್ತು ರಷ್ಯಾ. ಎರಡೂ ರಾಷ್ಟ್ರಗಳ ಮಧ್ಯೆ ಆ ದ್ವೇಷ ಇನ್ನೂ ಆರಿಲ್ಲ.

English summary
G7 Countries warned Russia and ordered to withdraw military from Ukraine border.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X