ಫುಟ್‌ಬಾಲ್ : ಜರ್ಮನಿ ಮತ್ತೆ ನಂ. 1, ಭಾರತ 171ರಲ್ಲಿ
ಜ್ಯೂರಿಚ್ (ಸ್ವಿಟ್ಜರ್ಲೆಂಡ್), ಡಿ. 18: ಜಗತ್ತಿನ ಅತ್ಯಂತ ಜನಪ್ರಿಯ ಕ್ರೀಡೆ ಫುಟ್‌ಬಾಲ್‌ನ ಇಂದಿನ ವಿಶ್ವ ಚಾಂಪಿಯನ್ ಜರ್ಮನಿ ತಂಡವು ಮತ್ತೆ ವಿಶ್ವದ ನಂ. 1 ಪಟ್ಟ ಅಲಂಕರಿಸಿದೆ. ಆದರೆ, ಭಾರತ 171ನೇ ಸ್ಥಾನಕ್ಕೆ ಕುಸಿದಿದೆ.
ಫಿಫಾ ಸಂಸ್ಥೆಯು ಗುರುವಾರ ಬಿಡುಗಡೆ ಮಾಡಿದ ವಿಶ್ವಮಟ್ಟದ ಶ್ರೇಯಾಂಕ ಪಟ್ಟಿಯಲ್ಲಿ ಜರ್ಮನಿ ತಂಡವು 1,725 ಪಾಯಿಂಟ್‌ಗಳ ಮೂಲಕ ಪ್ರಥಮ ಸ್ಥಾನ ಗಳಿಸಿಕೊಂಡಿದೆ. ಈ ಮೂಲಕ 2015ಕ್ಕೆ ವರ್ಷವನ್ನು ಸಂತಸದಿಂದ ಬರಮಾಡಿಕೊಳ್ಳಲು ಸಜ್ಜಾಗಿದೆ. [ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ಕ್ರಿಕೆಟ್ ಮಂಡಳಿ]

ಬ್ರೆಜಿಲ್‌ನಲ್ಲಿ ನಡೆದಿದ್ದ ಫುಟ್‌ಬಾಲ್ ವಿಶ್ವ ಕಪ್ ಪಂದ್ಯಾವಳಿಯಲ್ಲಿ ಜರ್ಮನಿ ತಂಡವು ಅರ್ಜೆಂಟೀನಾ ತಂಡವನ್ನು 1-0 ಅಂತರದಿಂದ ಸೋಲಿಸಿ ಚಾಂಪಿಯನ್ ಪಟ್ಟ ಅಲಂಕರಿಸಿತ್ತು.
ವಿಶ್ವಕಪ್‌ನಲ್ಲಿ ರನ್ನರ್ ಅಪ್‌ಗೆ ತೃಪ್ತಿ ಪಡೆದಿದ್ದ ಅರ್ಜೆಂಟೀನಾ ಶ್ರೇಯಾಂಕ ಪಟ್ಟಿಯಲ್ಲೂ ಎರಡನೇ ಸ್ಥಾನದಲ್ಲಿದೆ. ಕೋಲಂಬಿಯಾ ತಂಡ ಮೂರನೇ ಸ್ಥಾನದಲ್ಲಿ ಹಾಗೂ ಬೆಲ್ಜಿಯಂ ನಾಲ್ಕನೇ ಸ್ಥಾನದಲ್ಲಿವೆ. [ವೀರೇಂದ್ರ ಸೆಹ್ವಾಗ್ ಕ್ರಿಕೆಟ್ ಜೀವನ ಅಂತ್ಯ]
ಆದರೆ, ಶ್ರೇಯಾಂಕ ಪಟ್ಟಿಯ ಮೊದಲ 50 ಸ್ಥಾನಗಳಲ್ಲಿ ಏಶಿಯಾದ ಯಾವುದೇ ರಾಷ್ಟ್ರ ಸ್ಥಾನ ಪಡೆದಿಲ್ಲ. ಇರಾನ್ 51ನೇ ಸ್ಥಾನದಲ್ಲಿದ್ದು, ಜಪಾನ್ 54ನೇ ಶ್ರೇಯಾಂಕಕ್ಕೆ ತೃಪ್ತಿಪಟ್ಟುಕೊಂಡಿದೆ. ಇನ್ನು ಭಾರತ ಪಟ್ಟಿಯಲ್ಲಿ 171ನೇ ಸ್ಥಾನ ಗಳಿಸಿದೆ.
ಪ್ರಸ್ತುತ ಬಿಡುಗಡೆ ಮಾಡಿರುವ ಪಟ್ಟಿಯನ್ನು 2015ರ ಜನವರಿ 8ರಂದು ಪರಿಷ್ಕರಿಸಲಾಗುವುದು. ಪ್ರಸ್ತುತ ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ ಮೊದಲ 10 ಸ್ಥಾನ ಗಳಿಸಿರುವ ದೇಶಗಳ ಪಟ್ಟಿ ಈ ಕೆಳಗಿನಂತಿವೆ. [ಇಸ್ರೇಲ್ ಅಂಪೈರ್ ದುರಂತ ಸಾವು]
1. ಜರ್ಮನಿ
2. ಅರ್ಜೆಂಟೀನಾ
3. ಕೋಲಂಬಿಯಾ
4. ಬೆಲ್ಜಿಯಂ
5. ನೆದರ್ಲೆಂಡ್
6. ಬ್ರೆಜಿಲ್ [ಲಂಕಾ ಕ್ರಿಕೆಟ್ : ಮಂಚ ಏರಿದರೆ ಕ್ರಿಕೆಟ್ ಗೆ ಆಯ್ಕೆ]
7. ಪೋರ್ಚುಗಲ್
7. ಫ್ರಾನ್ಸ್
9. ಸ್ಪೇನ್
10. ಉರುಗ್ವೇ
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications