ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

42 ದಿನಗಳಲ್ಲೇ 60 ಲಕ್ಷ ಕೊರೊನಾವೈರಸ್ ಸೋಂಕಿತರ ಪ್ರಕರಣ

|
Google Oneindia Kannada News

ನವದೆಹಲಿ, ಜುಲೈ.10: ಚೀನಾದಲ್ಲಿ ಮೊದಲು ಕಾಣಿಸಿಕೊಂಡ ಕೊರೊನಾವೈರಸ್ ವಿಶ್ವವನ್ನೇ ನಲುಗುವಂತೆ ಮಾಡಿದೆ. ಜಗತ್ತಿನಲ್ಲಿ ಕೊವಿಡ್-19 ಸೋಂಕಿತರ ಸಂಖ್ಯೆ 12 ಮಿಲಿಯನ್ ಗಡಿ ದಾಟಿದೆ. ಕಳೆದ ಆರು ವಾರಗಳಲ್ಲೇ ಸೋಂಕಿತರ ಸಂಖ್ಯೆ ಇಮ್ಮಡಿಯಾಗಿದೆ.
ವಿಶ್ವದಲ್ಲಿ 6 ಮಿಲಿಯನ್ ಇದ್ದ ಕೊರೊನಾವೈರಸ್ ಸೋಂಕಿತರ ಸಂಖ್ಯೆಯು 42 ದಿನಗಳಲ್ಲೇ ಬರೋಬ್ಬರಿ 12 ಮಿಲಿಯನ್ ಗೆ ಏರಿಕೆಯಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಡೈರೆಕ್ಟರ್ ಜನರಲ್ ಟೆಂಡ್ರಸ್ ಅಧನಮ್ ಗೆಬ್ರಿಯಸಿಸ್ ತಿಳಿಸಿದ್ದಾರೆ.

ಕೊರೊನಾ ಸೋಂಕು ಗಾಳಿಯಿಂದಲೂ ಹರಡುತ್ತೆ ಎಂದು ಒಪ್ಪಿಕೊಂಡ WHO
ವಿಶ್ವದಲ್ಲಿ ಶುಕ್ರವಾರದ ಅಂಕಿ-ಅಂಶಗಳ ಪ್ರಕಾರ ವಿಶ್ವದಲ್ಲಿ 1,24,90,771 ಮಂದಿಗೆ ಕೊರೊನಾವೈರಸ್ ಸೋಂಕು ತಗಲಿರುವುದು ದೃಢಪಟ್ಟಿದೆ. 5,59,379 ಮಂದಿ ಕೊರೊನಾವೈರಸ್ ಸೋಂಕಿಗೆ ಬಲಿಯಾಗಿದ್ದು, ಇದುವರೆಗೂ 72,87,631 ಸೋಂಕಿತರು ಗುಣಮುಖರಾಗಿದ್ದಾರೆ.

Coronavirus Infected Cases Doubled In Just 6 Weeks: WHO

ಅಮೆರಿಕಾದಲ್ಲಿ ಅತಿಹೆಚ್ಚು ಕೊವಿಡ್-19 ಪ್ರಕರಣ
ಕೊರೊನಾವೈರಸ್ ಸೋಂಕಿಗೆ ಅಮೆರಿಕಾ ಅಕ್ಷರಶಃ ನಲುಗಿ ಹೋಗಿದೆ. ವಿಶ್ವದಲ್ಲೇ ಅತಿಹೆಚ್ಚು ಸೋಂಕಿತ ಪ್ರಕರಣಗಳು ವಿಶ್ವದ ದೊಡ್ಡಣ್ಣನ ನೆಲದಲ್ಲಿ ಪತ್ತೆಯಾಗಿದ್ದು, ಇದುವರೆಗೂ 32,47,798 ಜನರಿಗೆ ಸೋಂಕು ಪತ್ತೆಯಾಗಿರುವುದು ದೃಢಪಟ್ಟಿದೆ. ಈ ಪೈಕಿ 1,437,703 ಸೋಂಕಿತರು ಗುಣಮುಖರಾಗಿದ್ದು, 1,673,970 ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

Coronavirus Infected Cases Doubled In Just 6 Weeks: WHO

ದೇಶದಲ್ಲಿ ಇದುವರೆಗೂ ಮಹಾಮಾರಿಗೆ 136,125 ಜನರು ಪ್ರಾಣ ಬಿಟ್ಟಿದ್ದಾರೆ. ಬ್ರೆಜಿಲ್ ಎರಡನೇ ಸ್ಥಾನದಲ್ಲಿದ್ದು 1,762,263 ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಮೂರನೇ ಸ್ಥಾನದಲ್ಲಿರುವ ಭಾರತದಲ್ಲಿ 819,986 ಮಂದಿಗೆ ಸೋಂಕು ತಗಲಿರುವುದು ದೃಢಪಟ್ಟಿದೆ.

English summary
Today The World Recorded 12 Million Cases. In The Last 6 Weeks Cases Have More Than Doubled: WHO.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X