ಜಾಗತಿಕ ಮಟ್ಟದಲ್ಲಿ ಕೊರೊನಾವೈರಸ್ ಸೋಂಕಿಗೆ 25 ಲಕ್ಷ ಜನ ಸಾವು!

ನವದೆಹಲಿ, ಫೆಬ್ರವರಿ.25: ಜಾಗತಿಕ ಮಟ್ಟದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ದಿನೇ ದಿನೆ ಹೆಚ್ಚುತ್ತಿದೆ. ವಿಶ್ವದಲ್ಲಿ ಕೊವಿಡ್-19 ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 25 ಲಕ್ಷದ ಗಡಿಯನ್ನೂ ದಾಟಿದೆ.

ಜಗತ್ತಿನಾದ್ಯಂತ ಒಂದೇ ದಿನ ಕೊವಿಡ್-19 ಸೋಂಕಿನಿಂದ 10530 ಜನರು ಪ್ರಾಣ ಬಿಟ್ಟಿದ್ದಾರೆ. ಕೊರೊನಾವೈರಸ್ ಸೋಂಕಿಗೆ ಬಲಿಯಾದವರ ಒಟ್ಟು ಸಂಖ್ಯೆ 25,18,322ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲೇ 4,43,955 ಜನರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

ಜಾಗತಿಕ ಮಟ್ಟದಲ್ಲಿ ಒಟ್ಟು ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 11,35,32,907ಕ್ಕೆ ಏರಿಕೆಯಾಗಿದೆ. ಈ ಪೈಕಿ 8,91,20,654 ಸೋಂಕಿತರು ಗುಣಮುಖರಾಗಿದ್ದು, 2,18,93,931 ಸಕ್ರಿಯ ಪ್ರಕರಣಗಳಿವೆ ಎಂದು ತಿಳಿದು ಬಂದಿದೆ.

Global Coronavirus Death Toll Surpasses 25 Lakhs Line

ಅಮೆರಿಕಾದಲ್ಲೇ ಅತಿಹೆಚ್ಚು ಕೊರೊನಾ ಹಾವಳಿ:

ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾದಲ್ಲೇ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ಹೆಚ್ಚಾಗಿದೆ. ಒಂದೇ ದಿನ 77347 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಅಮೆರಿಕಾದಲ್ಲಿ ಕಳೆದ 24 ಗಂಟೆಗಳಲ್ಲೇ ಮಹಾಮಾರಿ ಕೊರೊನಾವೈರಸ್ ಸೋಂಕಿಗೆ 2395 ಜನರು ಪ್ರಾಣ ಬಿಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 5,20,766ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಈವರೆಗೂ 2,90,52,232 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಈ ಪೈಕಿ 1,94,35,416 ಸೋಂಕಿತರು ಗುಣಮುಖರಾಗಿದ್ದು, 90,96,050 ಸಕ್ರಿಯ ಪ್ರಕರಣಗಳಿವೆ ಎಂದು ತಿಳಿದು ಬಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+