ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿಶ್ವಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ 6.50 ಕೋಟಿಗೆ ಏರಿಕೆ

|
Google Oneindia Kannada News

ನ್ಯೂಯಾರ್ಕ್, ಡಿಸೆಂಬರ್ 04: ವಿಶ್ವದಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ 6.50 ಕೋಟಿಗೆ ತಲುಪಿದೆ.

ವಿಶ್ವದಾದ್ಯಂತ ಕೊರೊನಾ ವೈರಸ್ ಹೆಚ್ಚೆಚ್ಚು ತಗುಲುತ್ತಿದೆ ಈ ಕುರಿತು ಜಾನ್ ಹಾಪ್ಕಿನ್ಸ್ ವಿಶ್ವವಿದ್ಯಾಲಯ ವರದಿ ಮಾಡಿದೆ.

ಸಿಹಿಸುದ್ದಿ: ಭಾರತದಲ್ಲಿ 90,16,289 ಕೊರೊನಾ ಸೋಂಕಿತರು ಗುಣಮುಖಸಿಹಿಸುದ್ದಿ: ಭಾರತದಲ್ಲಿ 90,16,289 ಕೊರೊನಾ ಸೋಂಕಿತರು ಗುಣಮುಖ

ಪ್ರಮುಖವಾಗಿ ಅಮೆರಿಕ ರಾಷ್ಟ್ರದಲ್ಲಿ ಕೊರೊನಾ ಮಟ್ಟಹಾಕುವುದು ದೊಡ್ಡ ತಲೆನೋವಾಗಿ ಪರಿಣಾಮಿಸಿದೆ. ಅಮೆರಿಕದಲ್ಲಿ ಕಳೆದ 24 ಗಂಟೆಗಳಲ್ಲಿ 2,10,000 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

Global Covid-19 Cases Surpass 65-Million Mark: Johns Hopkins University

ಇದರೊಂದಿಗೆ ರಾಷ್ಟ್ರದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 14,102,568ಕ್ಕೆ ಏರಿಕೆಯಾಗಿದೆ. ಅಲ್ಲದೆ. ಬುಧವಾರ ಒಂದೇ ದಿನ 3,157 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಕೂಡ 275,729ಕ್ಕೆ ತಲುಪಿದೆ ಎಂದು ವರದಿಗಳು ತಿಳಿಸಿವೆ.

ವಿಶ್ವದ ವಿವಿಧ ರಾಷ್ಟ್ರಗಳಲ್ಲಿ ಒಟ್ಟಾರೆ 65,048,192 ಮಂದಿ ಸೋಂಕಿಗೊಳಗಾಗಿದ್ದು, 1,512,223 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ. ಕಳೆದ ವರ್ಷ ಮಾರ್ಚ್ ತಿಂಗಳಿನಲ್ಲಿ ಕಾಣಿಸಿಕೊಂಡ ಕೊರೊನಾ ವೈರಸ್ ಅಮೆರಿಕ, ಭಾರತ ಹಾಗೂ ಬ್ರೆಜಿಲ್ ರಾಷ್ಟ್ರಗಳಲ್ಲಿ ಆರ್ಭಟಿಸುತ್ತಲೇ ಇದೆ.

ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ನಿರಂತರವಾಗಿ 40 ಸಾವಿರಕ್ಕಿಂತ ಕಡಿಮೆಯಾಗಿದೆ. ಕಳೆದೊಂದು ದಿನದಲ್ಲಿ 36594 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

Recommended Video

ಶಿವಮೊಗ್ಗದಲ್ಲಿ IGP Ravi ಎದುರು ಚಾಕು ಪ್ರದರ್ಶಿಸಿದ ಯುವಕ | Oneindia Kannada

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 540 ಮಂದಿ ಕೊರೊನಾಗೆ ಬಲಿಯಾಗಿದ್ದು, ಇದುವರೆಗೂ ಮೃತಪಟ್ಟವರ ಸಂಖ್ಯೆಯು 1,39,188ಕ್ಕೆ ಏರಿಕೆಯಾಗಿದೆ. ದೇಶಾದ್ಯಂತ ಕೊವಿಡ್-19 ಸೋಂಕಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಾಹಿತಿ ನೀಡಿದೆ.

English summary
The overall number of global coronavirus cases has surpassed the 65 million mark, while the deaths have surged to more than 1.50 million, according to the Johns Hopkins University.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X