Gold Rate: ಸಿರಿಯಾ ಬಿಕ್ಕಟ್ಟು ಚಿನ್ನ, ಆಯಿಲ್ ಬೆಲೆ ಏರಿಕೆ
ಸಿರಿಯಾದಲ್ಲಿ ನಡೆಯುತ್ತಿರುವ ಆಂತರಿಕ ದಂಗೆಯಿಂದಾಗಿ ಇಡೀ ದೇಶದಲ್ಲಿ ಅಭದ್ರತೆ ಉಂಟಾಗಿದೆ. ಸಿರಿಯಾ ಅಧ್ಯಕ್ಷ ಬಶರ್ ಅಲ್ ಅಸ್ಸಾದ್ ಆಡಳಿತ ಕೊನೆಯಾಗಿದ್ದು, ಬಂಡುಕೋರರು ಅಧ್ಯಕ್ಷರ ಮನೆಗೆ ಮುತ್ತಿಗೆ ಹಾಕಿ ಲೂಟಿ ಮಾಡಿದ್ದಾರೆ. ಇದರ ಬೆನ್ನಲ್ಲೇ ಯುಎಸ್, ಇಸ್ರೇಲ್ ಸಿರಿಯಾ ಮೇಲೆ ದಾಳಿ ಆರಂಭಿಸಿದ್ದು ಮತ್ತೊಂದು ಯುದ್ಧದ ಭೀತಿ ಶುರುವಾಗಿದೆ.
ಸಿರಿಯಾ ಬಂಡುಕೋರರು ಭಾನುವಾರ ಅಧ್ಯಕ್ಷ ಅಲ್-ಅಸ್ಸಾದ್ ಅವರನ್ನು ಪದಚ್ಯುತಗೊಳಿಸಲಾಗಿದೆ ಎಂದು ಘೋಷಣೆ ಮಾಡಲಾಯಿತು. ಈ ಮೂಲಕ ಸಿರಿಯಾದಲ್ಲಿ 50 ವರ್ಷಗಳ ಕುಟುಂಬ ರಾಜವಂಶದ ಆಡಳಿತವನ್ನು ಅಂತ್ಯಗೊಳಿಸಲಾಗಿದೆ.

ಸಿರಿಯಾ ಬಿಕ್ಕಟ್ಟು ವಿಶ್ವದ ಆರ್ಥಿಕತೆ ಮೇಲೆ ಕೂಡ ಪರಿಣಾಮ ಬೀರಿದೆ. ಸಿರಿಯಾ ಉದ್ವಿಗ್ನತೆಯಿಂದ ಮಧ್ಯಪ್ರಾಚ್ಯದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಈ ಬೆನ್ನಲ್ಲೇ ಜಾಗತಿಕವಾಗಿ ತೈಲ ಮತ್ತು ಚಿನ್ನದ ಬೆಲೆ ಮೇಲೆ ಪರಿಣಾಮ ಬೀರಿದ್ದು, ಮುಂದಿನ ದಿನಗಳಲ್ಲಿ ಚಿನ್ನ, ತೈಲ ಬೆಲೆ ಹೆಚ್ಚುವ ಆತಂಕ ಎದುರಾಗಿದೆ.
ಕಚ್ಚಾ ತೈಲದ ಬೆಲೆ ಏರಿಕೆ?
ಸೋಮವಾರ ಕಚ್ಚಾ ತೈಲದ ಬೆಲೆ ಏರಿಕೆಯಾಗಿದೆ. ಕಳೆದ ವಾರ ಯುನೈಟೆಡ್ ಸ್ಟೇಟ್ಸ್‌ನಲ್ಲಿ ಕಚ್ಚಾತೈಲ ಉತ್ಪಾದನೆ ಹೆಚ್ಚಿಸಿದ ಬಳಿಕ ಬೆಲೆಗಳನ್ನು ಕಡಿಮೆ ಮಾಡಿತ್ತು. ಕಳೆದ ವಾರ ಬ್ರೆಂಟ್ ತೈಲ ದರ 2.5% ಕುಸಿತ ಕಂಡಿತ್ತು. ಯುಎಸ್ ವೆಸ್ಟ್ ಟೆಕ್ಸಾಸ್ ಇಂಟರ್ಮೀಡಿಯೇಟ್ ಕಚ್ಚಾ ತೈಲ ಬೆಲೆ ಬ್ಯಾರೆಲ್‌ಗೆ 1% ಏರಿಕೆಯಾಗಿದ್ದು $ 67.21ಗೆ ತಲುಪಿದೆ. ಪರಿಸ್ಥಿತಿ ಹೀಗೆ ಮುಂದುವರೆದರೆ ತೈಲ ಉತ್ಪಾದನೆಯನ್ನು ಕಡಿಮೆ ಮಾಡುವ ಸಾಧ್ಯತೆ ಇದ್ದು ತೈಲ ಬೆಲೆಯಲ್ಲಿ ಹೆಚ್ಚಳವಾಗುವ ಅಂದಾಜಿದೆ.
ಚಿನ್ನದ ಬೆಲೆ ಹೆಚ್ಚಳ
ಈಗಾಗಲೇ ಚಿನ್ನದ ಬೆಲೆ ಗಗನಕ್ಕೇರಿದ್ದು ಮುಂದಿನ ದಿನಗಳಲ್ಲಿ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಹೆಚ್ಚಾಗಿದೆ. ಯುದ್ಧದ ಭೀತಿಯಿಂದಾಗಿ ಹಲವು ಷೇರು ಮಾರುಕಟ್ಟೆಗಳು ಕುಸಿಯುವ ಆತಂಕ ಎದುರಾಗಿದ್ದು, ಹೂಡಿಕೆದಾರರು ಚಿನ್ನದ ಮೇಲೆ ಹೂಡಿಕೆ ಮಾಡಲು ಆಸಕ್ತಿ ತೋರಿದ್ದರಿಂದ ಚಿನ್ನದ ಬೆಲೆ ಏರಿಕೆಯಾಗುತ್ತಿದೆ.
ಸೋಮವಾರ ಕೂಡ ಭಾರತದಲ್ಲಿ ಚಿನ್ನದ ಬೆಲೆ ಏರಿಕೆಯಾಗಿದೆ. 22 ಕ್ಯಾರಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ 15 ರೂಪಾಯಿ ಏರಿಕೆಯಾಗಿದ್ದು, 24 ಕ್ಯಾರಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ 16 ರೂಪಾಯಿ ಹೆಚ್ಚಾಗಿದೆ. 18 ಕ್ಯಾರಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ 12 ರೂಪಾಯಿ ಏರಿಕೆಯಾಗಿದೆ.
ಸಿರಿಯಾ ಬಿಕ್ಕಟ್ಟು ಮುಂದುವರೆದರೆ ಹೂಡಿಕೆದಾರರು ಚಿನ್ನದ ಮೇಲೆ ಹೂಡಿಕೆ ಮಾಡಲು ಮತ್ತಷ್ಟು ಆಸಕ್ತಿ ತೋರಿಸುವ ಸಾಧ್ಯತೆ ಇದ್ದು ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಮತ್ತಷ್ಟು ಹೆಚ್ಚುತ್ತದೆ ಎಂದು ಮಾರುಕಟ್ಟೆ ತಜ್ಞರು ಭವಿಷ್ಯ ನುಡಿದಿದ್ದಾರೆ.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications