ಕುವೈತಿನ ಜಿಎಸ್ ಬಿ ಸಭಾದಿಂದ ಶಾಸಕ ವೇದವ್ಯಾಸ ಕಾಮತ್ ಗೆ ಸನ್ಮಾನ
ಕುವೈತ್, ಅಕ್ಟೋಬರ್ 24: ಶಾಸಕರಾಗಿ ಆಯ್ಕೆಯಾದ ನಂತರ ಮೊದಲ ಬಾರಿ ಕುವೈತ್ ಪ್ರವಾಸದಲ್ಲಿದ್ದ ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಶಾಸಕ ಶ್ರೀಯುತ ವೇದವ್ಯಾಸ ಕಾಮತ್ ರವರನ್ನು ಜಿ.ಎಸ್.ಬಿ. ಸಭಾ ಕುವೈತ್‍ನ ಸದಸ್ಯರು ಕುವೈತ್‍ನ ರಿಗೈನಲ್ಲಿ ಮಾಲಾರ್ಪಣೆ, ಪುಷ್ಪಗುಚ್ಛದೊಂದಿಗೆ ಆದರದಿಂದ ಸ್ವಾಗತಿಸಿ, ಶಾಲು ಹೊದೆಸಿ, ಫಲ-ಪುಷ್ಪ, ಸ್ಮರಣಿಕೆ ನೀಡಿ ಸನ್ಮಾನಿಸಿದರು.
ಸಭಾದ ಅಧ್ಯಕ್ಷ ಫಲಿಮಾರು ವಿಶ್ವನಾಥ ಪ್ರಭು ಅಧ್ಯಕ್ಷತೆ ವಹಿಸಿದ್ದರೆ, ಉಪಾಧ್ಯಕ್ಷ ಗಿರೀಶ ಶೆಣೈ ಶಾಸಕರ ಪರಿಚಯ ಭಾಷಣ ಮಾಡಿದರು. ಸಭಾದ ಮಾಜಿ ಅಧ್ಯಕ್ಷರುಗಳಾದ ಡಾ|ಸುರೇಂದ್ರ ನಾಯಕ್ ಕಾಪಾಡಿ ಮತ್ತು ಗೋಕುಲ್ ದಾಸ್ ಭಟ್ ಹಾಗೂ ಸಲಹಾ ಸಮಿತಿ ಸದಸ್ಯರುಗಳಾದ ಅನಿಲ್ ಪ್ರಭು, ರಾಜಾರಾಮ್ ಪೈ ಕಟೀಲು, ಪ್ರಕಾಶ್ ಪೈಯವರು ಕಾರ್ಯಕ್ರಮದ ನೇತೃತ್ವವನ್ನು ವಹಿಸಿದ್ದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಶಾಸಕರು, ಪರದೇಶದಲ್ಲೂ ಸಮಾಜ ಬಾಂಧವರ ಸಂಘಟನೆ ಹಾಗೂ ಒಗ್ಗಟ್ಟಿನ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಸಭಾದ ಧಾರ್ಮಿಕ, ಸಾಮಾಜಿಕ ಕಾರ್ಯಕ್ರಮಗಳು, ವಿದ್ಯಾರ್ಥಿವೇತನ, ಬಡವರು, ರೋಗಿಗಳು ಮತ್ತು ಅಶಕ್ತರಿಗೆ ನೀಡುತ್ತಿರುವ ನೆರವಿನ ಬಗ್ಗೆ ತಿಳಿದು ಶ್ಲಾಘಿಸಿದರು.
ಸಭಾದ ಸಾರ್ವಜನಿಕ ಸಂಪರ್ಕಾಧಿಕಾರಿ ಗಣೇಶ್ ಪಡಿಯಾರ್ ಮತ್ತು ಕಾರ್ಯದರ್ಶಿ ಶ್ರೀಮತಿ ಸ್ಫೂರ್ತಿ ದೀಪಕ್ ಕಾಮತ್ ಕಾರ್ಯಕ್ರಮವನ್ನು ನಿರ್ವಹಿಸಿದ್ದು, ಕೋಶಾಧಿಕಾರಿ ವಿನಾಯಕ ಶೆಣೈಯವರ ವಂದನಾರ್ಪಣೆಯೊಂದಿಗೆ ಕಾರ್ಯಕ್ರಮ ಸಂಪನ್ನಗೊಂಡಿತು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications