ಮುಂಬೈ ದಾಳಿಯ ಸಂಚುಕೋರ ಹಫೀಜ್ ಸಯೀದ್ ಗೃಹ ಬಂಧನ ವಿಸ್ತರಣೆ
ಇಸ್ಲಾಮಾಬಾದ್, ಆಗಸ್ಟ್ 01 : ಮುಂಬೈ ದಾಳಿಯ ಪ್ರಮುಖ ಸಂಚುಕೋರ, ಜಮಾತ್ ಉದ್ ದಾವಾ (ಜೆಯುಡಿ) ಮುಖ್ಯಸ್ಥ ಹಫೀಜ್ ಸಯೀದ್ ಗೃಹ ಬಂಧನದ ಅವಧಿಯನ್ನು ಪಾಕಿಸ್ತಾನದ ಪಂಜಾಬ್ ಸರ್ಕಾರ ಎರಡು ತಿಂಗಳ ಅವಧಿಗೆ ವಿಸ್ತರಣೆ ಮಾಡಿದೆ.
ಶಾಂತಿ, ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಗೃಹ ಸಚಿವಾಲಯದ ಆದೇಶದ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸರ್ಕಾರದ ಪ್ರಕಟಣೆ ತಿಳಿಸಿದೆ.

ಸಯೀದ್ ಮತ್ತು ಆತನ ನಾಲ್ವರು ಸಹಚರರನ್ನು ಜನವರಿ 31ರಿಂದ ಗೃಹ ಬಂಧನದಲ್ಲಿರಿಸಲಾಗಿದೆ. ಏಪ್ರಿಲ್‌ನಲ್ಲಿ ಗೃಹ ಬಂಧನವನ್ನು ಮೂರು ತಿಂಗಳು ವಿಸ್ತರಿಸಲಾಗಿತ್ತು. ಇದೀಗ ಮತ್ತೆ ಗೃಹಬಂಧನದ ಅವಧಿ ವಿಸ್ತರಿಸಲಾಗಿದೆ.












Click it and Unblock the Notifications