ಪ್ರಧಾನಿ ಮೋದಿಯನ್ನು ಪ್ರಶ್ನಿಸಿದ್ದ ಪತ್ರಕರ್ತೆಗೆ ಕಿರುಕುಳ: ಶ್ವೇತಭವನ ಖಂಡನೆ
ನವದೆಹಲಿ, ಜೂನ್ 27: ಕಳೆದ ವಾರ ಶ್ವೇತಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭಾರತದಲ್ಲಿ ಅಲ್ಪಸಂಖ್ಯಾತರ ಹಕ್ಕುಗಳ ಸ್ಥಿತಿಗತಿ ಕುರಿತು ಪ್ರಶ್ನಿಸಿದ್ದಕ್ಕೆ ಪತ್ರಕರ್ತೆ ಸಬ್ರಿನಾ ಸಿದ್ದಿಕಿ ಎದುರಿಸುತ್ತಿರುವ ಆನ್‌ಲೈನ್ ಕಿರುಕುಳವನ್ನು ವೈಟ್ ಹೌಸ್ ಮಂಗಳವಾರ ಖಂಡಿಸಿದೆ.
ಸಬ್ರಿನಾ ಸಿದ್ದಿಕಿ ಅವರು ದಿ ವಾಲ್ ಸ್ಟ್ರೀಟ್ ಜರ್ನಲ್‌ನ ವರದಿಗಾರ್ತಿಯಾಗಿದ್ದಾರೆ. ಶ್ವೇತಭವನದ ರಾಷ್ಟ್ರೀಯ ಭದ್ರತಾ ಮಂಡಳಿಯ ಕಾರ್ಯತಂತ್ರದ ಸಂವಹನಗಳ ಸಂಯೋಜಕ ಜಾನ್ ಕಿರ್ಬಿ, ವಾಲ್ ಸ್ಟ್ರೀಟ್ ಜರ್ನಲ್‌ನ ವಿಚಾರಣೆಗೆ ಪ್ರತಿಕ್ರಿಯೆಯಾಗಿ ಪತ್ರಕರ್ತೆಗೆ ಕಿರುಕುಳ ನೀಡುವುದು ಯಾವುದೇ ಸಂದರ್ಭದಲ್ಲೂ ಸ್ವೀಕಾರಾರ್ಹವಲ್ಲ. ಇದು ಪ್ರಜಾಪ್ರಭುತ್ವದ ತತ್ವಗಳಿಗೆ ವಿರುದ್ಧವಾದ ನಡೆಯಾಗಿದೆ ಎಂದು ಹೇಳಿದರು.

ವಾಲ್ ಸ್ಟ್ರೀಟ್ ಜರ್ನಲ್ (ಡಬ್ಲ್ಯುಎಸ್‌ಜೆ) ಶ್ವೇತಭವನಕ್ಕೆ ಸಲ್ಲಿಸಿದ ತನ್ನ ಪ್ರಶ್ನೆಯಲ್ಲಿ ಸಿದ್ದಿಕಿ ಅವರು ಬಿಜೆಪಿ ಸರ್ಕಾರದೊಂದಿಗೆ ಸಂಬಂಧ ಹೊಂದಿರುವ ರಾಜಕಾರಣಿಗಳಿಂದ ಆನ್‌ಲೈನ್ ಟ್ರೋಲ್‌ಗೆ ಒಳಗಾಗಿದ್ದಾರೆ ಎಂದು ಹೇಳಿಕೊಂಡಿದೆ. ಆಕೆ ಮೋದಿ ಅವರನ್ನು ಪ್ರಶ್ನಿಸಿದ್ದಕ್ಕೆ ಟ್ರೋಲ್ ಮಾಡಲಾಗುತ್ತಿದೆ ಎಂದು ಅಮೆರಿಕದ ಪತ್ರಿಕೆ ಉಲ್ಲೇಖಿಸಿದೆ.
ಜೋ ಬಿಡೆನ್ ಮತ್ತು ಪ್ರಧಾನಿ ಮೋದಿಯವರೊಂದಿಗಿನ ಪ್ರಶ್ನೋತ್ತರ ಕಾರ್ಯಕ್ರಮದಲ್ಲಿ ನಮ್ಮ ಸಹೋದ್ಯೋಗಿ, ದಿ ವಾಲ್ ಸ್ಟ್ರೀಟ್ ಜರ್ನಲ್‌ನ ಸಬ್ರಿನಾ ಸಿದ್ದಿಕಿ ಅವರು ಪ್ರಧಾನ ಮಂತ್ರಿಯ ಪ್ರಶ್ನೆಯನ್ನು ಕೇಳಿದ್ದರು. ಆ ಸಮಯದಿಂದ ಅವರು ಕೆಲವು ಭಾರತದೊಳಗಿನ ಜನರಿಂದ ಆನ್‌ಲೈನ್ ಕಿರುಕುಳಕ್ಕೆ ಒಳಗಾಗಿದ್ದರು. ಅವರಲ್ಲಿ ಕೆಲವರು ರಾಜಕಾರಣಿಗಳು, ಅವರು ಮೋದಿ ಸರ್ಕಾರದೊಂದಿಗೆ ಒಡನಾಟ ಹೊಂದಿದ್ದಾರೆ ಎಂದು ಪತ್ರಿಕೆ ತಿಳಿಸಿದೆ.

ಟೀಕೆ ಮಾಡುತ್ತಿರುವವರು ಸಿದ್ದಿಕಿ ಅವರು ಮುಸ್ಲಿಮರ ಬಗ್ಗೆ ಪ್ರಶ್ನಿಸಿದ್ದ ಕಾರಣದಿಂದಾಗಿ ಆಕೆಯನ್ನು ಗುರಿಯಾಗಿಸಲಾಗಿದೆ. ಅಕೆ ಸ್ವಂತ ಧರ್ಮವನ್ನು ಪ್ರಶ್ನಿಸುತ್ತಿದ್ದಾರೆ. ಏಕೆಂದರೆ ಇದು ಯಾವುದೋ ರೂಪದಲ್ಲಿ ಪ್ರಜಾಪ್ರಭುತ್ವದ ಬಗ್ಗೆ ಇರಬೇಕಾಗಿತ್ತು. ಒಬ್ಬ ಪತ್ರಕರ್ತನು ಪ್ರಜಾಪ್ರಭುತ್ವವಿರುವ ದೇಶದ ನಾಯಕನಿಗೆ ಪ್ರಶ್ನೆಯನ್ನು ಕೇಳಿದ್ದಕ್ಕೆ ಈ ರೀತಿಯ ಕಿರುಕುಳ ಅನುಭವಿಸುತ್ತಿರುವುದಕ್ಕೆ ಶ್ವೇತಭವನದ ಪ್ರತಿಕ್ರಿಯೆ ಏನು?" ಎಂದು ಪ್ರತಿಕೆ ಕೇಳಿದೆ.
ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕರೀನ್ ಜೀನ್-ಪಿಯರ್ ಕೂಡ "ನಾವು ಪತ್ರಿಕಾ ಸ್ವಾತಂತ್ರ್ಯಕ್ಕೆ ಬದ್ಧರಾಗಿದ್ದೇವೆ" ಮತ್ತು "ಪತ್ರಕರ್ತರಿಗೆ ಬೆದರಿಕೆ ಅಥವಾ ಕಿರುಕುಳ ನೀಡುವ ಯಾವುದೇ ಪ್ರಯತ್ನಗಳನ್ನು ಖಂಡಿಸುತ್ತೇವೆ" ಎಂದು ಹೇಳಿದ್ದಾರೆ. ಸಿದ್ದಿಕಿ ಇತ್ತೀಚೆಗೆ ಟ್ವಿಟರ್‌ನಲ್ಲಿ "ಕೆಲವರು ನನ್ನ ವೈಯಕ್ತಿಕ ಹಿನ್ನೆಲೆಯನ್ನು ಟೀಕೆ ಮಾಡಲು ಆಯ್ಕೆ ಮಾಡಿಕೊಂಡಿರುವುದರಿಂದ, ಸಂಪೂರ್ಣ ಚಿತ್ರವನ್ನು ಒದಗಿಸುವುದು ಮಾತ್ರ ಸರಿ ಎಂದು ಭಾವಿಸುತ್ತದೆ. ಕೆಲವೊಮ್ಮೆ ಗುರುತುಗಳು ತೋರುತ್ತಿರುವುದಕ್ಕಿಂತ ಹೆಚ್ಚು ಸಂಕೀರ್ಣವಾಗಿರುತ್ತವೆ ಎಂದು ಬರೆದಿದ್ದಾರೆ.
ಶ್ವೇತಭವನದ ಪತ್ರಿಕಾಗೋಷ್ಠಿಯಲ್ಲಿ ಸಬ್ರಿನಾ ಸಿದ್ದಿಕಿ ಅವರು ಭಾರತದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ ಹಕ್ಕುಗಳು ಮತ್ತು ವಾಕ್ ಸ್ವಾತಂತ್ರ್ಯದ ಬಗ್ಗೆ ಪ್ರಧಾನಿ ಮೋದಿಯವರನ್ನು "ನಿಮ್ಮ ದೇಶದಲ್ಲಿ ಮುಸ್ಲಿಮರು ಮತ್ತು ಇತರ ಅಲ್ಪಸಂಖ್ಯಾತರ ಹಕ್ಕುಗಳನ್ನು ಸುಧಾರಿಸಲು ಮತ್ತು ವಾಕ್ ಸ್ವಾತಂತ್ರ್ಯವನ್ನು ಎತ್ತಿಹಿಡಿಯಲು ನೀವು ಮತ್ತು ನಿಮ್ಮ ಸರ್ಕಾರ ಯಾವ ಕ್ರಮಗಳನ್ನು ತೆಗೆದುಕೊಳ್ಳಲು ಸಿದ್ಧರಿದ್ದೀರಿ ಎಂದು ಕೇಳಿದ್ದರು.
ಅದಕ್ಕೆ ಪ್ರಧಾನಿ ಮೋದಿ "ನಾವೇ ಪ್ರಜಾಪ್ರಭುತ್ವ... ಭಾರತ ಮತ್ತು ಅಮೆರಿಕ ಎರಡೂ ದೇಶಗಳು ನಮ್ಮ ಡಿಎನ್‌ಎಯಲ್ಲಿ ಪ್ರಜಾಪ್ರಭುತ್ವವನ್ನು ಹೊಂದಿವೆ. ಪ್ರಜಾಪ್ರಭುತ್ವವು ನಮ್ಮ ಆತ್ಮದಲ್ಲಿದೆ ಮತ್ತು ನಾವು ಹಾಗೆ ಬದುಕುತ್ತೇವೆ, ಅದನ್ನು ನಮ್ಮ ಸಂವಿಧಾನದಲ್ಲಿ ಬರೆಯಲಾಗಿದೆ. ಈ ಆಧಾರದ ಮೇಲೆ ಜಾತಿ, ಮತ ಅಥವಾ ಧರ್ಮ ಆಧಾರಿತ ತಾರತಮ್ಯಕ್ಕೆ ಯಾವುದೇ ಅವಕಾಶವಿಲ್ಲ ಎಂದು ಹೇಳಿದ್ದರು.
ಭಾರತವು ಮುಂದೆ ಸಾಗುವುದರಲ್ಲಿ ಮತ್ತು ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗುವುದರಲ್ಲಿ ನಂಬಿಕೆ ಹೊಂದಿದೆ. ಜಾತಿ, ಧರ್ಮ, ವಯಸ್ಸು ಅಥವಾ ಭೌಗೋಳಿಕ ಸ್ಥಳದ ಆಧಾರದ ಮೇಲೆ ಯಾವುದೇ ತಾರತಮ್ಯವಿಲ್ಲದೆ ಸರ್ಕಾರದ ಪ್ರಯೋಜನಗಳು ಎಲ್ಲರಿಗೂ ಲಭ್ಯವಿದೆ ಎಂದು ಪ್ರಧಾನಿ ಮೋದಿ ಹೇಳಿದ್ದರು.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications