ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನ್ಯೂಜೆರ್ಸಿಯಲ್ಲಿ ಎಚ್.ಡಿ.ಕುಮಾರಸ್ವಾಮಿಗೆ ಭವ್ಯ ಸ್ವಾಗತ

|
Google Oneindia Kannada News

ನ್ಯೂಜೆರ್ಸಿ, ಜೂನ್ 30 : ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಅಮೆರಿಕದಲ್ಲಿ ಭವ್ಯ ಸ್ವಾಗತ ಸಿಕ್ಕಿದೆ. ವಿವಿಧ ಖಾಸಗಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಅಮೆರಿಕಾದ ನ್ಯೂಜೆರ್ಸಿ ಕುಮಾರಸ್ವಾಮಿ ಆಗಮಿಸಿದರು.

ನ್ಯೂಜೆರ್ಸಿಗೆ ಆಗಮಿಸಿದ ಎಚ್.ಡಿ.ಕುಮಾರಸ್ವಾಮಿ ಅವರನ್ನು ಸ್ಥಳೀಯ ಕನ್ನಡಿಗರು ಆದರದಿಂದ ಬರಮಾಡಿಕೊಂಡರು. ಒಂದು ವಾರಗಳ ಕಾಲ ಎಚ್.ಡಿ.ಕುಮಾರಸ್ವಾಮಿ ಅಮೆರಿಕದ ಖಾಸಗಿ ಪ್ರವಾಸ ಕೈಗೊಂಡಿದ್ದಾರೆ.

ಅಮೆರಿಕದಲ್ಲಿ ದೇವಸ್ಥಾನ ಶಂಕುಸ್ಥಾಪನೆಗೆ ಹೊರಟ ಕುಮಾರಸ್ವಾಮಿಅಮೆರಿಕದಲ್ಲಿ ದೇವಸ್ಥಾನ ಶಂಕುಸ್ಥಾಪನೆಗೆ ಹೊರಟ ಕುಮಾರಸ್ವಾಮಿ

ಆದಿಚುಂಚನಗಿರಿ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಪ್ರತಿಷ್ಠಾನದ ವತಿಯಿಂದ ನಿರ್ಮಿಸುತ್ತಿರುವ ಶ್ರೀ ಕಾಲಭೈರವೇಶ್ವರ ಸ್ವಾಮಿ ದೇವಾಲಯಕ್ಕೆ ಶಂಕುಸ್ಥಾಪನೆ ಸಮಾರಂಭದಲ್ಲಿ ಜುಲೈ 30ರಂದು ಎಚ್.ಡಿ.ಕುಮಾರಸ್ವಾಮಿ ಪಾಲ್ಗೊಳ್ಳಲಿದ್ದಾರೆ.

ನಾಟಕ ಮುಗಿಸಿ ವಿದೇಶಕ್ಕೆ ಹೋದ ಕುಮಾರಸ್ವಾಮಿ: ಆರ್. ಅಶೋಕ್ ಟೀಕೆನಾಟಕ ಮುಗಿಸಿ ವಿದೇಶಕ್ಕೆ ಹೋದ ಕುಮಾರಸ್ವಾಮಿ: ಆರ್. ಅಶೋಕ್ ಟೀಕೆ

HD Kumaraswamy

ಆದಿಚುಂಚನಗಿರಿ ಶ್ರೀಗಳ ಆಹ್ವಾನದಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ. ಜುಲೈ 5ರಂದು ಅಮೆರಿಕದ ಒಕ್ಕಲಿಗರ ಪರಿಷತ್ ಸಮಾವೇಶದಲ್ಲಿ ಪಾಲ್ಗೊಂಡು ವಾಪಸ್ ಆಗಮಿದ್ದಾರೆ.

ಅಮೆರಿಕದಲ್ಲಿ ದೇವಸ್ಥಾನ ಶಂಕುಸ್ಥಾಪನೆಗೆ ಹೊರಟ ಕುಮಾರಸ್ವಾಮಿಅಮೆರಿಕದಲ್ಲಿ ದೇವಸ್ಥಾನ ಶಂಕುಸ್ಥಾಪನೆಗೆ ಹೊರಟ ಕುಮಾರಸ್ವಾಮಿ

ಇದೊಂದು ಸಂಪೂರ್ಣ ಖಾಸಗಿ ಭೇಟಿಯಾಗಿದ್ದು ಸರ್ಕಾರದ ವತಿಯಿಂದ ಯಾವುದೇ ವೆಚ್ಚವನ್ನು ಭರಿಸುತ್ತಿಲ್ಲ ಎಂದು ಮುಖ್ಯಮಂತ್ರಿಗಳ ಕಚೇರಿಯ ಸ್ಪಷ್ಟಪಡಿಸಿದೆ.

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಜೊತೆ ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು, ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಸೇರಿದಂತೆ ಮುಖ್ಯಮಂತ್ರಿಗಳ ಆಪ್ತರು ಅಮೆರಿಕ ಪ್ರವಾಸ ಕೈಗೊಂಡಿದ್ದಾರೆ.

ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಸಹ ಅಮೆರಿಕ ಪ್ರವಾಸ ಕೈಗೊಳ್ಳಲಿದ್ದು, ಎರಡು ದಿನದ ಬಳಿಕ ಅವರು ರಾಜ್ಯಕ್ಕೆ ವಾಪಸ್ ಆಗಲಿದ್ದಾರೆ. ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಸೇರಿದಂತೆ ಒಕ್ಕಲಿಗ ಶಾಸಕರಿಗೆ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ.

English summary
Karnataka Chief Minister H.D.Kumaraswamy received grand welcome at America. Kumaraswamy in private visit to the US from June 28 to July 6, 2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X