ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಡೆಲ್ಟಾ ಭೀತಿ: ಏಷ್ಯಾ-ಪೆಸಿಫಿಕ್ ಮತ್ತು ಯುರೋಪ್ ರಾಷ್ಟ್ರಗಳಲ್ಲಿ ಹೇಗಿದೆ ಪರಿಸ್ಥಿತಿ?

|
Google Oneindia Kannada News

ನವದೆಹಲಿ, ಜೂನ್ 28: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಅಲೆಗಳ ಹಾವಳಿ ಏಷಿಯನ್ ರಾಷ್ಟ್ರಗಳಿಗೆ ಬೆನ್ನು ಬಿಡದ ಭೂತದಂತೆ ಕಾಡುತ್ತಿದೆ. ಇಂಡೋನೆಷ್ಯಾದಲ್ಲಿ ಭಾನುವಾರ ಕೊವಿಡ್-19 ಹೊಸ ಪ್ರಕರಣಗಳ ಸಂಖ್ಯೆ 20,000 ಗಡಿ ದಾಟಿದೆ. ರಷ್ಯಾ ರಾಜಧಾನಿ ಮಾಸ್ಕೋದಲ್ಲಿ ಕೊರೊನಾವೈರಸ್ ಸೋಂಕಿನಿಂದ ಪ್ರಾಣ ಬಿಟ್ಟವರ ಸಂಖ್ಯೆ ಇಳಿಕೆಯಲ್ಲಿ ಹೊಸ ದಾಖಲೆಯಾಗಿದೆ.

ಜಗತ್ತಿನಾದ್ಯಂತ ಕೊವಿಡ್-19 ಸೋಂಕಿನಿಂದ 40 ಲಕ್ಷಕ್ಕಿಂತ ಹೆಚ್ಚು ಮಂದಿ ಪ್ರಾಣ ಬಿಟ್ಟಿದ್ದಾರೆ. 85 ರಾಷ್ಟ್ರಗಳಲ್ಲಿ ಹರಡಿರುವ ಕೊರೊನಾವೈರಸ್ ಸೋಂಕಿನ ಡೆಲ್ಟಾ ರೂಪಾಂತರ ತಳಿಯ ಭೀತಿ ಹಿನ್ನೆಲೆ ಏಷಿಯಾ-ಪೆಸಿಫಿಕ್ ವಲಯದಲ್ಲಿ ಮತ್ತೊಮ್ಮೆ ನಿರ್ಬಂಧಗಳನ್ನು ವಿಧಿಸಲಾಗಿದೆ.

ಶ್ವಾಸಕೋಶದ ಮೇಲೆ ಶ್ವಾಸಕೋಶದ ಮೇಲೆ "ಡೆಲ್ಟಾ ಪ್ಲಸ್" ಪ್ರಭಾವ ಹೆಚ್ಚು; ತಜ್ಞರ ವಿಶ್ಲೇಷಣೆ

ಯುರೋಪ್ ಮತ್ತು ಯುಎಸ್ ರಾಷ್ಟ್ರಗಳಲ್ಲಿ ಕೊರೊನಾವೈರಸ್ ಪರಿಸ್ಥಿತಿ ಸುಧಾರಿಸಿದ್ದು, ಲಸಿಕೆ ವಿತರಣೆ ಅಭಿಯಾನ ಸಮರೋಪಾದಿಯಲ್ಲಿ ನಡೆಯುತ್ತಿದೆ. ಇಂಗ್ಲೆಂಡಿನಲ್ಲಿ ಕಳೆದ ಐದು ದಿನಗಳಲ್ಲಿ ಕೊವಿಡ್ ಪ್ರಕರಣಗಳು ಹಾಗೂ ಸಾವಿನ ಸಂಖ್ಯೆಯಲ್ಲಿ ಅರ್ಧಕ್ಕರ್ಧ ಕುಸಿದಿದೆ. ಯುನೈಟೆಡ್ ಕಿಂಗ್ ಡಮ್(ಯುಕೆ)ನಲ್ಲಿ ಕಳೆದ ಒಂದು ದಿನದಲ್ಲಿ 14,876 ಹೊಸ ಪ್ರಕರಣಗಳು ವರದಿಯಾಗಿದ್ದು, 11 ಮಂದಿ ಮೃತಪಟ್ಟಿದ್ದಾರೆ. ದೇಶದಲ್ಲಿ ಈವರೆಗೂ 1,28,100 ಮಂದಿ ಪ್ರಾಣ ಬಿಟ್ಟಿದ್ದು, 2,87,820 ಸಕ್ರಿಯ ಪ್ರಕರಣಗಳಿವೆ.

ಇಂಗ್ಲೆಂಡಿನಲ್ಲಿ ಶೇ.84ರಷ್ಟು ವಯಸ್ಕರಿಗೆ ಲಸಿಕೆ

ಇಂಗ್ಲೆಂಡಿನಲ್ಲಿ ಶೇ.84ರಷ್ಟು ವಯಸ್ಕರಿಗೆ ಲಸಿಕೆ

ಕೊರೊನಾವೈರಸ್ ಸೋಂಕಿನ ಡೆಲ್ಟಾ ರೂಪಾಂತರವು ಇಂಗ್ಲೆಂಡಿನಲ್ಲೂ ಕಾಣಿಸಿಕೊಂಡಿತ್ತು. ಅದಾಗ್ಯೂ, ಸೋಂಕಿನಿಂದ ಗಂಭೀರ ಸಮಸ್ಯೆ ಎದುರಿಸಿದವರು ಹಾಗೂ ಆಸ್ಪತ್ರೆಗೆ ದಾಖಲಾದವರ ಸಂಖ್ಯೆ ತೀರಾ ಕಡಿಮೆಯಾಗಿದೆ. ಇಂಗ್ಲೆಂಡಿನಲ್ಲಿ ಶೇ.84ರಷ್ಟು ವಯಸ್ಕರಿಗೆ ಕೊವಿಡ್-19 ಲಸಿಕೆ ವಿತರಿಸುವಲ್ಲಿ ನಡೆಸಿದ ಅಭಿಯಾನವೇ ಇಂದು ದೇಶದ ಪ್ರಜೆಗಳನ್ನು ಹೊಸ ಅಲೆಗಳಿಂದ ರಕ್ಷಿಸುವುದಕ್ಕೆ ಸಾಧ್ಯ ಎಂದು ಹೇಳಲಾಗುತ್ತಿದೆ.

ರಷ್ಯಾದಲ್ಲಿ ಹೇಗಿದೆ ಕೊವಿಡ್-19 ಡೆಲ್ಟಾ ರೂಪಾಂತರದ ಹಾವಳಿ?

ರಷ್ಯಾದಲ್ಲಿ ಹೇಗಿದೆ ಕೊವಿಡ್-19 ಡೆಲ್ಟಾ ರೂಪಾಂತರದ ಹಾವಳಿ?

ಜೂನ್ ಮಧ್ಯಭಾಗದಲ್ಲಿ ರಷ್ಯಾದಲ್ಲಿ ಡೆಲ್ಟಾ ರೂಪಾಂತರ ತಳಿಯು ಕಾಣಿಸಿಕೊಂಡ ನಂತರದಲ್ಲಿ ಮೊದಲ ಬಾರಿಗೆ ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಂಡು ಬಂದಿದೆ. ಭಾನುವಾರ ರಷ್ಯಾದಲ್ಲಿ 20,538 ಹೊಸ ಕೊವಿಡ್-19 ಪ್ರಕರಣಗಳು ಪತ್ತೆಯಾಗಿದ್ದು, 599 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಪೈಕಿ ಮಾಸ್ಕೋದಲ್ಲಿ 144 ಮಂದಿ ಕೊರೊನಾವೈರಸ್ ಸೋಂಕಿಗೆ ಬಲಿಯಾಗಿದ್ದಾರೆ.

ಡೆಲ್ಟಾ ರೂಪಾಂತರಕ್ಕೆ ತತ್ತರಿಸಿದ ಏಷ್ಯಾ ಆಗ್ನೇಯ ಭಾಗ

ಡೆಲ್ಟಾ ರೂಪಾಂತರಕ್ಕೆ ತತ್ತರಿಸಿದ ಏಷ್ಯಾ ಆಗ್ನೇಯ ಭಾಗ

ಕೊರೊನಾವೈರಸ್ ಸೋಂಕಿನ ಡೆಲ್ಟಾ ರೂಪಾಂತರ ತಳಿಯು ಏಷ್ಯಾದ ಆಗ್ನೇಯ ಭಾಗದಲ್ಲಿ ಹಾಗೂ ಆಸ್ಟ್ರೇಲಿಯಾದಲ್ಲಿ ಹೊಸ ಭೀತಿ ಸೃಷ್ಟಿಸಿದ ಹಿನ್ನೆಲೆ ನಿರ್ಬಂಧಗಳನ್ನು ವಿಸ್ತರಿಸಲಾಗಿದೆ. 40 ಲಕ್ಷಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ಆಸ್ಟ್ರೇಲಿಯಾ ರಾಜಧಾನಿ ಸಿಡ್ನಿಯಲ್ಲಿ ಭಾನುವಾರ ಕಟ್ಟುನಿಟ್ಟಿನ ಲಾಕ್ ಡೌನ್ ಜಾರಿಗೊಳಿಸಲಾಗಿತ್ತು. ಬಾರ್, ರೆಸ್ಟೋರೆಂಟ್, ಹೋಟೆಲ್ ಬಂದ್ ಮಾಡಲಾಗಿದ್ದು, ಮನೆಯಲ್ಲೇ ಇರುವಂತೆ ಆದೇಶ ಹೊರಡಿಸಲಾಗಿತ್ತು.

ಜೂನ್ ಮಧ್ಯಭಾಗದಲ್ಲಿ ಅಂತಾರಾಷ್ಟ್ರೀಯ ವಿಮಾನಗಳ ಸಂಚಾರಕ್ಕೆ ಅನುಮತಿ ನೀಡಿದಾಗಿನಿಂದ ಈವರೆಗೆ ಸಿಡ್ನಿಯಲ್ಲಿ ಡೆಲ್ಟಾ ರೂಪಾಂತರ ತಳಿಯ 110ಕ್ಕೂ ಹೆಚ್ಚು ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಆಸ್ಟ್ರೇಲಿಯಾ ಉತ್ತರ ಭಾಗದ ಡ್ರಾವಿನ್ ನಗರದಲ್ಲಿ ಕೂಡ ಭಾನುವಾರದಿಂದ 48 ಗಂಟೆಗಳ ಲಾಕ್ ಡೌನ್ ಘೋಷಿಸಲಾಗಿತ್ತು. ವಾರಾಂತ್ಯದಲ್ಲಿ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಗುಂಪುಗೂಡುವುದರಿಂದ ಕೊವಿಡ್-19 ಸೋಂಕು ಹರಡುವಿಕೆ ಹೆಚ್ಚಾಗಲಿದ್ದು, ಜೂನ್ 29ರ ಮಧ್ಯರಾತ್ರಿವರೆಗೂ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುವಂತಿಲ್ಲ. ಸಾಮಾಜಿಕ ಅಂತರವನ್ನು ಕಾರಾಡುವುದು ಕಡ್ಡಾಯಗೊಳಿಸಿ ಆದೇಶ ಹೊರಡಿಸಲಾಗಿದೆ.

ಕೊರೊನಾವೈರಸ್ ಪ್ರಕರಣಗಳಲ್ಲಿ ಇಂಡೋನೆಷ್ಯಾ ದಾಖಲೆ

ಕೊರೊನಾವೈರಸ್ ಪ್ರಕರಣಗಳಲ್ಲಿ ಇಂಡೋನೆಷ್ಯಾ ದಾಖಲೆ

ಡೆಲ್ಟಾ ರೂಪಾಂತರ ತಳಿಯ ಹಾವಳಿ ಹೆಚ್ಚಿದ ಬೆನ್ನಲ್ಲೇ ಇಂಡೋನೆಷ್ಯಾದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಇಂಡೋನೆಷ್ಯಾದಲ್ಲಿ ಭಾನುವಾರ ಒಂದು ದಿನದಲ್ಲಿ 21,342 ಹೊಸ ಪ್ರಕರಣಗಳು ವರದಿಯಾಗಿದ್ದು, 409 ಮಂದಿ ಮೃತಪಟ್ಟಿದ್ದಾರೆ. ದೇಶದಲ್ಲಿ ಈವರೆಗೂ 57,138 ಮಂದಿ ಪ್ರಾಣ ಬಿಟ್ಟಿದ್ದು, 2,07,685 ಸಕ್ರಿಯ ಪ್ರಕರಣಗಳಿವೆ. ಇಂಡೋನೆಷ್ಯಾ ರಾಜಧಾನಿ ಜಕರ್ತಾದ ಆಸ್ಪತ್ರೆಗಳಲ್ಲಿ ಕೊವಿಡ್-19 ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಈ ಹಿನ್ನೆಲೆ ಇಂಡೋನೆಷ್ಯಾದಲ್ಲಿ ಕಟ್ಟುನಿಟ್ಟಿನ ಲಾಕ್ ಡೌನ್ ನಿಯಮ ಜಾರಿಗೊಳಿಸಲಾಗಿದೆ.

ಮಲೇಶಿಯಾ, ಥೈಲ್ಯಾಂಡ್, ಬ್ಯಾಂಕಾಕ್ ಲಾಕ್‌ಡೌನ್‌

ಮಲೇಶಿಯಾ, ಥೈಲ್ಯಾಂಡ್, ಬ್ಯಾಂಕಾಕ್ ಲಾಕ್‌ಡೌನ್‌

ಕೊರೊನಾವೈರಸ್ ಸೋಂಕಿನ ಡೆಲ್ಟಾ ರೂಪಾಂತರದ ಹಾವಳಿ ಹೆಚ್ಚಾಗಿರುವ ಹಿನ್ನೆಲೆ ಸೋಮವಾರ ಥೈಲ್ಯಾಂಡ್, ಮಲೇಶಿಯಾ ಹಾಗೂ ಬ್ಯಾಂಕಾಕ್ ರಾಷ್ಟ್ರಗಳಲ್ಲಿ ಕಟ್ಟುನಿಟ್ಟಿನ ಲಾಕ್‌ಡೌನ್‌ ಘೋಷಿಸಲಾಗಿದೆ. ಹೋಟೆಲ್, ರೆಸ್ಟೋರೆಂಟ್, ಬಾರ್ ಮುಚ್ಚುವುದರ ಜೊತೆಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುವುದಕ್ಕೆ ನಿರ್ಬಂಧ ವಿಧಿಸಲಾಗಿದೆ. ಬಾಂಗ್ಲಾದೇಶದಲ್ಲೂ ಸೋಮವಾರದಿಂದ ಲಾಕ್‌ಡೌನ್‌ ಜಾರಿಗೊಳಿಸಲಾಗಿದ್ದು, ವೈದ್ಯಕೀಯ ಸೇವೆಗಳಿಗೆ ಮಾತ್ರ ಅನುಮತಿ ನೀಡಲಾಗಿದೆ.

ಭಾರತದಲ್ಲಿ ಕೊರೊನಾವೈರಸ್ ಸೋಂಕಿತರ ಸಂಖ್ಯೆ ಇಳಿಕೆ

ಭಾರತದಲ್ಲಿ ಕೊರೊನಾವೈರಸ್ ಸೋಂಕಿತರ ಸಂಖ್ಯೆ ಇಳಿಕೆ

ದೇಶದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಜೊತೆಗೆ ಸಾವಿನ ಸಂಖ್ಯೆಯಲ್ಲೂ ಇಳಿಕೆ ಕಂಡು ಬಂದಿದೆ. ಕೊವಿಡ್-19 ಗುಣಮುಖರ ಸಂಖ್ಯೆಯೂ ಏರಿಕೆಯಾಗಿದ್ದು, ಚೇತರಿಕೆ ಪ್ರಮಾಣ ಶೇ.96.80ರಷ್ಟಿದೆ. ಕಳೆದ 24 ಗಂಟೆಗಳಲ್ಲಿ 979 ಮಂದಿ ಕೊರೊನಾವೈರಸ್ ಸೋಂಕಿನಿಂದ ಪ್ರಾಣ ಬಿಟ್ಟಿದ್ದು, ಒಟ್ಟು ಸಾವಿನ ಪ್ರಕರಣಗಳ ಸಂಖ್ಯೆ 3,96,730ಕ್ಕೆ ಏರಿಕೆಯಾಗಿದೆ. ಕಳೆದೊಂದು ದಿನದಲ್ಲಿ 46,148 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 58,578 ಸೋಂಕಿತರು ಗುಣಮುಖರಾಗಿದ್ದಾರೆ. ಸೋಮವಾರದ ಅಂಕಿ-ಅಂಶಗಳ ಪ್ರಕಾರ, ಭಾರತದಲ್ಲಿ ಒಟ್ಟು 3,02,79,331 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಪೈಕಿ ಇದುವರೆಗೂ 2,93,09,607 ಸೋಂಕಿತರು ಗುಣಮುಖರಾಗಿದ್ದು, 5,72,994 ಕೊರೊನಾವೈರಸ್ ಸಕ್ರಿಯ ಪ್ರಕರಣಗಳು ಪತ್ತೆಯಾಗಿವೆ.

English summary
How Delta Variant Changes Picture In Asia-Pacific and Create Fear In European Nations To.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X