ನನ್ನ ಫೋನ್‌ನಲ್ಲೂ ಪೇಗಾಸಸ್ ಇತ್ತು, ಜಾಗರೂಕರಾಗಿರಲು ಅಧಿಕಾರಿಗಳು ಹೇಳಿದ್ದರು: ರಾಹುಲ್ ಗಾಂಧಿ

ಕಳೆದ ವರ್ಷ ಪೆಗಾಸಸ್ ಬೇಹುಗಾರಿಕೆ ಕುತಂತ್ರಾಂಶವನ್ನು ಭಾರತೀಯ ರಾಜಕಾರಣಿಗಳು, ಪತ್ರಕರ್ತರು, ಸಾಮಾಜಿಕ ಹೋರಾಟಗಾರರ ಮೇಲೆ ಬಳಸಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು.

ಲಂಡನ್, ಮಾರ್ಚ್ 03: ಕೇಂಬ್ರಿಡ್ಜ್ ವಿಶ್ವವಿದ್ಯಾಲಯದ ಭಾಷಣದಲ್ಲಿ ಭಾರತೀಯ ಪ್ರಜಾಪ್ರಭುತ್ವ ವ್ಯವಸ್ಥೆ ಮೇಲೆ ದಾಳಿ ನಡೆಯುತ್ತಿದೆ ಎಂದು ಮಾತನಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ತಮ್ಮ ಫೋನ್‌ ಸೇರಿದಂತೆ ಹಲವು ರಾಜಕೀಯ ನಾಯಕರ ಪೋನ್‌ಗಳಲ್ಲಿ ಪೆಗಾಸಸ್ ವೈರಸ್ ಇತ್ತು ಎಂದು ಹೇಳಿದ್ದಾರೆ.

"ಈ ಬಗ್ಗೆ ಗುಪ್ತಚರ ಅಧಿಕಾರಿಗಳು ನನಗೆ ಕರೆ ಮಾಡಿದ್ದರು. ಫೋನ್‌ನಲ್ಲಿ ಏನು ಹೇಳುತ್ತೀರೋ ಅದರ ಬಗ್ಗೆ ಜಾಗರೂಕರಾಗಿರಿ. ನಿಮ್ಮ ಕರೆಗಳನ್ನು ನಾವು ರೆಕಾರ್ಡ್ ಮಾಡುತ್ತಿದ್ದೇವೆ ಎಂದು ಹೇಳಿದ್ದರು" ಎಂದು ರಾಹುಲ್ ಗಾಂಧಿ ಬಹಿರಂಗಪಡಿಸಿದ್ದಾರೆ. ಕಳೆದ ವರ್ಷ ಪೆಗಾಸಸ್ ಬೇಹುಗಾರಿಕೆ ಕುತಂತ್ರಾಂಶವನ್ನು ಭಾರತೀಯ ರಾಜಕಾರಣಿಗಳು, ಪತ್ರಕರ್ತರು, ಸಾಮಾಜಿಕ ಹೋರಾಟಗಾರರ ಮೇಲೆ ಬಳಸಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು.

I had Pegasus on my phone says Rahul Gandhi in his Cambridge University speech

ಮುಂದುವರಿದು, "ಇದ್ದರಿಂದ ನಮ್ಮ ಮೇಲೆ ನಿರಂತರ ಒತ್ತಡವಿದೆ. ಪ್ರತಿಪಕ್ಷಗಳ ವಿರುದ್ಧ ಪ್ರಕರಣಗಳು ದಾಖಲಾಗಿವೆ. ಕ್ರಿಮಿನಲ್ ಮೊಕದ್ದಮೆಗಳ ಅಡಿಯಲ್ಲಿ ಇರಬಾರದ ವಿಷಯಗಳಿಗಾಗಿ ನನ್ನ ವಿರುದ್ಧ ಹಲವಾರು ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಲಾಗಿದೆ" ಎಂದು ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದು ರಾಹುಲ್ ಗಾಂಧಿ ಆಕ್ಷೇಪ ವ್ಯಕ್ತಡಿಸಿದ್ದಾರೆ.

" ಈ ರೀತಿ ಮಾಧ್ಯಮದ ಮೇಲೆ ಮತ್ತು ಪ್ರಜಾಪ್ರಭುತ್ವದ ಮೇಲೆ ನೀವು ಈ ರೀತಿಯ ಆಕ್ರಮಣ ನಡೆಸಿದರೇ, ಪ್ರತಿಪಕ್ಷವಾಗಿ, ಒಂದು ಮಾಧ್ಯಮವಾಗಿ ಜನರೊಂದಿಗೆ ಸಂವಹನ ನಡೆಸುವುದು ತುಂಬಾ ಕಷ್ಟ" ಎಂದು ಹೇಳಿದ್ದಾರೆ. ರಾಹುಲ್ ಗಾಂಧಿ ಹೇಳಿಕೆಗೆ ಬಿಜೆಪಿ ಟೀಕೆ ವ್ಯಕ್ತಪಡಿಸಿದ್ದು, ರಾಹುಲ್ ಗಾಂಧಿ ವಿದೇಶದಲ್ಲಿ ಮತ್ತೆ ದೇಶದ ವಿರುದ್ಧ ಹುನ್ನಾರ ನಡೆಸುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದೆ.

I had Pegasus on my phone says Rahul Gandhi in his Cambridge University speech

ರಾಹುಲ್ ಹೇಳಿಕೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಅನುರಾಗ್ ಠಾಕೂರ್, "ನನ್ನ ಮನಸ್ಸಿನಲ್ಲಿ ಪೆಗಾಸಸ್ ಇದೆ ಎಂದು ಹೇಳಿದ್ದಾರೆ. ರಾಹುಲ್ ಗಾಂಧಿ ಮತ್ತೆ ವಿದೇಶಿ ನೆಲದಲ್ಲಿ ಈ ಹುನ್ನಾರದ ಕೆಲಸವನ್ನು ಮಾಡುತ್ತಿದ್ದಾರೆ" ಎಂದಿದ್ದಾರೆ. "ಒಬ್ಬ ವ್ಯಕ್ತಿಯ ಮೇಲಿನ ದ್ವೇಷವು ದೇಶದ ಮೇಲಿನ ದ್ವೇಷವಾಗಿ ಪದೇ ಪದೇ ಹೊರಬರುತ್ತಿದೆ" ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಶೆಹಜಾದ್ ಜೈ ಹಿಂದ್ ಟ್ವೀಟ್ ಮಾಡಿದ್ದಾರೆ.

ರಾಜಕಾರಣಿಗಳು, ಸಂಅಆಝಿಕ ಹೋರಾಟಗಾರರು ಮತ್ತು ಪತ್ರಕರ್ತರ ಮೇಲೆ ಬೇಹುಗಾರಿಕೆ ನಡೆಸಲು ಸರ್ಕಾರ ಪೆಗಾಸಸ್ ಬಳಸುತ್ತಿದೆ ಎಂಬ ಆರೋಪದ ಮೇಲೆ ಕಳೆದ ವರ್ಷ, ಸುಪ್ರೀಂ ಕೋರ್ಟ್ ಸಮಿತಿ ರಚನೆ ಮಾಡಿತ್ತು. ಆದರೆ, ಸಮಿತಿ ಪರೀಕ್ಷಿಸಿದ 29 ಮೊಬೈಲ್ ಫೋನ್‌ಗಳಲ್ಲಿ ಸ್ಪೈವೇರ್ ಕಂಡುಬಂದಿಲ್ಲ, ಬದಲಿಗೆ ಐದು ಮೊಬೈಲ್ ಫೋನ್‌ಗಳಲ್ಲಿ ಪೆಗಾಸಸ್ ವೈರಸ್ ಕಂಡುಬಂದಿದೆ ಎಂದು ವರದಿ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+