ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಷ್ಯಾ-ಉಕ್ರೇನ್ ಸಮರ: ಜೀವ ಹೋಗುವ ವೇಳೆಯೂ ವರ್ಣಭೇದ ಮಾಡಿ ಬೇಳೆ ಬೇಯಿಸಿಕೊಂಡವರೆಷ್ಟೋ

|
Google Oneindia Kannada News

ಒಂದೆಡೆ ಜೀವ ಉಳಿಸಿಕೊಂಡರೆ ಸಾಕೆಂದು ಉಕ್ರೇನ್‌ನಿಂದ ನೆರೆಯ ದೇಶಕ್ಕೆ ತೆರಳಲು ಹಲವು ಮಂದಿ ಮುಂದಾಗಿದ್ದಾರೆ.

ಆದರೆ ಉಕ್ರೇನ್ ಹಾಗೂ ಪೋಲೆಂಡ್ ಗಡಿಯಲ್ಲಿ ವರ್ಣಭೇದ ನೀತಿಯನ್ನು ಹಲವು ಮಂದಿ ವಿದ್ಯಾರ್ಥಿಗಳು ಅನುಭವಿಸಿ ಬೇಸರ ವ್ಯಕ್ತಪಡಿಸಿದ್ದಾರೆ. ಜನಾಂಗೀಯ ಬೇಧ, ಕೆಲವು ಗಾಯಗಳು ಹಾಗೂ ಮೈನಸ್‌ಗಿಂತಲೂ ಕಡಿಮೆ ತಾಪಮಾನದ ನಡುವೆ 108 ಗಂಟೆಗಳ ಕಾಲ ಪ್ರಯಾಣ ಬೆಳೆಸಿ ಉಕ್ರೇನ್‌ನಿಂದ ಜೀವ ಉಳಿಸಿಕೊಂಡು ಬಂದ ತನ್ನ ಸಹೋದರಿಯ ಕತೆಯನ್ನು ಪತ್ರಕರ್ತರೊಬ್ಬರು ಬರೆದುಕೊಂಡಿದ್ದು ಮನ ಕಲಕುವಂತಿದೆ.

Breaking: ಉಕ್ರೇನ್‌ನಲ್ಲಿ ಸ್ಟ್ರೋಕ್‌ನಿಂದಾಗಿ ಭಾರತದ ವಿದ್ಯಾರ್ಥಿ ಸಾವುBreaking: ಉಕ್ರೇನ್‌ನಲ್ಲಿ ಸ್ಟ್ರೋಕ್‌ನಿಂದಾಗಿ ಭಾರತದ ವಿದ್ಯಾರ್ಥಿ ಸಾವು

ಉಕ್ರೇನ್‌ನಿಂದ ತಪ್ಪಿಸಿಕೊಂಡು ಬರುವ ವೇಳೆ ತಮ್ಮ ಸಹೋದರಿ ಅನುಭವಿಸಿದ ಕಷ್ಟವನ್ನು ಪತ್ರಕರ್ತ ಬಿಜನ್ ಹೊಸೈನಿ ಟ್ವಿಟ್ಟರ್‌ನಲ್ಲಿ ಬಿಚ್ಚಿಟ್ಟಿದ್ದಾರೆ. ಉಕ್ರೇನ್‌ನಿಂದ ತಪ್ಪಿಸಿಕೊಂಡು ಬರುವ ವೇಳೆ ಅವರ ಸಹೋದರಿ ವರ್ಣಭೇದ ಅನುಭವಿಸುವುದರ ಜೊತೆ ಗಾಯಗೊಂಡಿದ್ದು, ಮೈನಸ್‌ ಡಿಗ್ರಿಗಿಂತಲೂ ಕಡಿಮೆ ತಾಪಮಾನದ ವ್ಯತಿರಿಕ್ತ ಹವಾಮಾನದ ವಿರುದ್ಧವೂ ಹೋರಾಡಿ ಗೆದ್ದು ಬಂದಿದ್ದಾರೆ.

 If you are Black, You Should Walk,Rampant Racism At Ukraine Border For Droves Fleeing

ಆಕೆಯ ಕತೆ ಸಾವಿರಾರು ಜನರಲ್ಲಿ ಒಬ್ಬರದ್ದಾಗಿದೆ ಎಂದು ಅವರು ಬರೆದುಕೊಂಡಿದ್ದಾರೆ. ಪತ್ರಕರ್ತ ಬಿಜನ್‌ ಹೊಸೈನಿ ಅವರ ಸಹೋದರಿಯನ್ನು ಮೂಲತಃ ದಕ್ಷಿಣ ಆಫ್ರಿಕಾದ ದೇಶವಾದ ಸಿಯೆರಾ ಲಿಯೋನ್‌ ನಿಂದ ದತ್ತು ಪಡೆಯಲಾಗಿತ್ತಂತೆ. ಇದರಿಂದಾಗಿ ಅವರ ಮೈ ಬಣ್ಣ ಮೂಲತಃ ಕಪ್ಪಾಗಿದ್ದು, ಇದರಿಂದ ಅವರಿಗೆ ಉಕ್ರೇನ್‌ನಿಂದ ಹೊರಬರಲು ತುಂಬಾ ಕಷ್ಟವಾಯಿತು ಎಂದು ಬಿಜನ್ ಹೊಸೈನಿ ಬರೆದಿದ್ದಾರೆ.

ಪೋಲೆಂಡ್ ಗಡಿಯಲ್ಲಿ ಪ್ರತ್ಯೇಕವಾದ ಎರಡು ಸಾಲುಗಳಿದ್ದವು ಒಂದು ಬಿಳಿ ಬಣ್ಣದ ವ್ಯಕ್ತಿಗಳಿಗೆ ಹಾಗೂ ಇನ್ನೊಂದು ಉಳಿದವರಿಗೆ. ಇಲ್ಲೂ ಅವರು ಬೇಧವನ್ನು ಅನುಭವಿಸಿದರು.

ಹೊಸೈನಿ ಅವರ ಸಹೋದರಿ ಯುದ್ಧ ಶುರುವಾಗುವ ವೇಳೆ ಉಕ್ರೇನ್‌ ರಾಜಧಾನಿ ಕೀವ್‌ನಲ್ಲಿ ಇದ್ದರು. ಅವರು ತಮ್ಮ ಸ್ನೇಹಿತರ ಜೊತೆ ಕೀವ್‌ನಿಂದ ಎಲ್‌ವಿವ್‌ಗೆ(Lviv) ಹೊರಡಲು ಯತ್ನಿಸಿದರು. ಈ ಎಲ್‌ವಿವ್‌(Lviv) ಪಶ್ಚಿಮ ಉಕ್ರೇನ್‌ನಲ್ಲಿದ್ದು, ಪೋಲೆಂಡ್ ಗಡಿಗೆ ಹತ್ತಿರದಲ್ಲಿದೆ. ಒಂದು ಕಾರು ಚಾಲಕನೊಂದಿಗೆ ಪ್ರಯಾಣದ ಬಗ್ಗೆ ಇವರು ಮಾತನಾಡಿದಾಗ ಆತ ಇವರನ್ನು ಡ್ನಿಪ್ರೋ ನಗರಕ್ಕೆ ಬಿಡುವುದಾಗಿ ಹೇಳುತ್ತಾನೆ. ಡ್ನಿಪ್ರೋ ರಷ್ಯಾದ ಗಡಿ ಸಮೀಪವಿರುವ ಪೂರ್ವ ಉಕ್ರೇನ್‌ನಲ್ಲಿರುವ ನಗರ. ಅಲ್ಲಿಂದ ಎಲ್‌ವಿವ್‌ಗೆ ಬಸ್ ಅಥವಾ ರೈಲು ಸಿಗುವುದು ಎಂದು ಚಾಲಕ ಇವರಿಗೆ ಹೇಳುತ್ತಾನೆ.

ಹೀಗಾಗಿ ಅತ್ತ ಪ್ರಯಾಣಿಸಿದ ಈ ತಂಡಕ್ಕೆ 7 ಗಂಟೆಗಳ ಪ್ರಯಾಣಕ್ಕೆ ಚಾಲಕ ಬರೋಬರಿ 700 ಡಾಲರ್‌ (52,936 ರೂಪಾಯಿ)ಚಾರ್ಜ್‌ ಮಾಡಿದ ಎಂದು ಇವರು ಹೇಳಿದ್ದಾರೆ.
ಆದರೆ ಇವರು ಡ್ನಿಪ್ರೊಗೆ ತಲುಪಿದಾಗ ಅಲ್ಲಿಂದ ಎಲ್‌ವಿವ್‌ ಬಸ್ಸುಗಳು ಮತ್ತು ರೈಲುಗಳು ಓಡುತ್ತಿಲ್ಲ ಎಂದು ತಿಳಿದು ಬಂದಿದ್ದು, ಆದ್ದರಿಂದ ಹೀಗಾಗಿ ತಮ್ಮನ್ನು ಎಲ್ವಿವ್‌ಗೆ ಬಿಡುವಂತೆ ಅವರು ಚಾಲಕನನ್ನು ಬೇಡಿಕೊಂಡಿದ್ದಾರೆ. ಇದಕ್ಕೆ ಆತ 1,500 ಡಾಲರ್‌ ನೀಡಿದರೆ ಬಿಡುವುದಾಗಿ ಒಪ್ಪಿಕೊಂಡಿದ್ದಾನೆ.

ನಂತರ ಸಣ್ಣ ಸೆಡಾನ್‌ ಕಾರಿನಲ್ಲಿ 13 ತಿಂಗಳ ಒಂದು ಮಗುವೂ ಸೇರಿದಂತೆ ಒಟ್ಟು ಎಂಟು ಜನ ಎಲ್‌ವಿವ್‌ನತ್ತ 15 ಗಂಟೆಗಳ ಪ್ರಯಾಣ ಬೆಳೆಸಲು ಸಿದ್ಧರಾದರು. ನಂತರ ಎಲ್‌ವಿವ್‌ ತಲುಪಿದ ಅವರಿಗೆ ಕಾರಿನ ಚಾಲಕ ಇವರನ್ನು ಪೋಲೆಂಡ್ ಗಡಿಗೆ ಬಿಡುವುದಾಗಿ ಹೇಳಿದ್ದಾನೆ.

ಆದರೆ 30 ಗಂಟೆಗಳ ರಸ್ತೆ ಪ್ರಯಾಣ ಮಾಡಬೇಕು ಎಂಬುದನ್ನು ತಿಳಿದ ಆತ ಮತ್ತರ್ಧ ಗಂಟೆಯಲ್ಲಿ ತನ್ನ ನಿರ್ಧಾರ ಬದಲಿಸಿದ್ದಾನೆ. ಪರಿಣಾಮ ಕಾರಿನಿಂದ ಇಳಿದ ಪತ್ರಕರ್ತನ ಸಹೋದರಿ ಹಾಗೂ ಆಕೆಯ ಸ್ನೇಹಿತರು ಕಾಲ್ನಡಿಗೆಯಲ್ಲೇ ಪೋಲೆಂಡ್ ಗಡಿ ತಲುಪಲು ನಿರ್ಧರಿಸಿದ್ದಾರೆ.

ಚಳಿಯ ಮಧ್ಯೆಯೂ 10 ಗಂಟೆಗಳ ಕಾಲ ನಡೆದ ಅವರು ನಂತರ ತಾವು ಹೊಂದಿದ್ದ ವಸ್ತುಗಳನ್ನು ದಾರಿಯಲ್ಲೇ ಬಿಟ್ಟು ಮುಂದೆ ಪ್ರಯಾಣಿಸಿದ್ದಾರೆ. ಆದರೆ ಗಡಿ ತಲುಪುತ್ತಿದ್ದಂತೆ ಅಲ್ಲೂ ಅವರಿಗೆ ದಾರಿ ಸುಗಮವಿರಲಿಲ್ಲ.

ಅಲ್ಲಿ ಬಿಳಿ ಬಣ್ಣದವರಿಗೆ ಒಂದು ಹಾಗೂ ಉಳಿದವರಿಗೆ ಒಂದು ಎಂದು ಪ್ರತ್ಯೇಕವಾಗಿ ಎರಡು ಸಾಲುಗಳನ್ನು ನಿರ್ಮಿಸಲಾಗಿತ್ತು. ಮೊದಲಿಗೆ ಉಕ್ರೇನಿಯನ್ನರಿಗೆ ಮಾತ್ರ ಹೊರ ಹೋಗಲು ಆದ್ಯತೆ ನೀಡಲಾಗಿತ್ತು. ಹೀಗಾಗಿ ಗಡಿಭಾಗದಲ್ಲಿ ಕೊರೆಯುವ ಚಳಿಯಲ್ಲೇ ಅನೇಕರು ನಿದ್ದೆಗೆ ಜಾರಿದರು. ಇಲ್ಲಿ ಜನರನ್ನು ಬೆಚ್ಚಗಾಗಿಸಲು ಬೆಂಕಿಯನ್ನು ಹಾಕಲಾಗಿತ್ತು ಎಂದು ತಿಳಿಸಿದ್ದಾರೆ.

English summary
Angry posts have swamped social media on the racist treatment given to non-whites as they try to cross over to Ukraine’s bordering countries.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X