ಈ ಪುಣ್ಯಾತ್ಮನ ಆಡಳಿತದಲ್ಲಿ ಬ್ರೆಜಿಲ್ ಇನ್ನೂ ಏನೇನ್ ನೋಡಬೇಕೋ..!

ಬ್ರೆಜಿಲ್ ಎಂದರೆ ನಿಸರ್ಗ ಮಾತೆಯ ಸ್ವರ್ಗ, ಕೋಟಿ ಕೋಟಿ ಜೀವ ಸಂಕುಲದ ಮೂಲಸ್ಥಾನ. ಆದರೆ ಈಗ ಬ್ರೆಜಿಲ್ ಮೊದಲಿನಂತಿಲ್ಲ. ಅಲ್ಲಿ ಕಂಡ ಕಂಡ ಕಡೆ ಕಾಡು ಕಡಿಯುತ್ತಿದ್ದಾರೆ. ಭೂಮಿ ಪಾಲಿಗೆ ಶ್ವಾಸಕೋಶವೇ ಆಗಿರುವ ಅಮೆಜಾನ್ ಕಾಡು ನಾಶವಾಗುತ್ತಿದೆ. ಇದೀಗ ಇಂತಹದ್ದೇ ಒಂದು ಘಟನೆಗೆ ಅಮಾಯಕ ಅರಣ್ಯ ನಿವಾಸಿಗಳು ಬಲಿಯಾಗಿದ್ದಾರೆ. ಅಕ್ರಮವಾಗಿ ಅಮೆಜಾನ್ ಕಾಡಿನಲ್ಲಿ ಗಣಿಗಾರಿಕೆ ನಡೆಸುತ್ತಿದ್ದವರನ್ನು ಪ್ರಶ್ನಿಸಿದ್ದ ಕಾಡು ಜನರ ಮೇಲೆ ಮಷಿನ್ ಗನ್ ಬಳಸಿ ದಾಳಿ ಮಾಡಲಾಗಿದೆ. ದಾಳಿಗೆ ಸರಿಯಾಗಿ ತಿರುಗೇಟು ನೀಡಿರುವ ಕಾಡು ಜನರು, ತಮ್ಮಲ್ಲಿರುವ ಬಾಣ, ಭರ್ಜಿಗಳಿಂದ ಕಾಡುಗಳ್ಳರಿಗೆ ಸರಿಯಾಗಿ ಬುದ್ಧಿ ಕಲಿಸಿದ್ದಾರೆ.

Recommended Video

      ಬ್ರೆಜಿಲ್ ಅಧ್ಯಕ್ಷನ ವಿಚಿತ್ರ ಆಡಳಿತ ವೈಖರಿ ! | Oneindia Kannada

      ಫೈಟ್‌ನಲ್ಲಿ ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿದ್ದ ಹತ್ತಾರು ಕಳ್ಳರು ಗಾಯಗೊಂಡಿದ್ದು, ಜೀವ ಉಳಿಸಿಕೊಳ್ಳಲು ಓಡಿದ್ದಾರೆ. ಬ್ರೆಜಿಲ್‌ನ ಯನೋಮಾಮಿ ಮೀಸಲು ಅರಣ್ಯದಲ್ಲಿ ಈ ಘಟನೆ ನಡೆದಿದೆ. ಇದೇ ಪ್ರದೇಶದಲ್ಲಿ ಅಮೆಜಾನ್‌ನ ಪ್ರಮುಖ ನದಿಗಳು ಜನ್ಮತಾಳುತ್ತವೆ. ಹೀಗಾಗಿಯೇ ಯನೋಮಾಮಿ ಮೀಸಲು ಅರಣ್ಯದ ಬಗ್ಗೆ ಕಾಳಜಿಯನ್ನು ವಹಿಸಲಾಗುತ್ತದೆ. ಆದರೆ ಜೈರ್ ಬೋಲ್ಸೊನಾರೋ ಆಡಳಿತದಲ್ಲಿ ಕಾಡುಗಳ್ಳರ ಕಾಟ ವಿಪರೀತವಾಗಿದೆ ಎಂಬ ಆರೋಪ ಕೇಳಿಬರುತ್ತಿದೆ. ಆರೋಪಕ್ಕೆ ತಕ್ಕಂತೆ ಬ್ರೆಜಿಲ್ ಅಧ್ಯಕ್ಷ ಬೋಲ್ಸೊನಾರೋ ನಡೆದುಕೊಳ್ಳುತ್ತಿದ್ದಾರೆ.

      ಬೋಲ್ಸೊನಾರೋ ವಿರುದ್ಧ ಆಕ್ರೋಶ

      ಬೋಲ್ಸೊನಾರೋ ವಿರುದ್ಧ ಆಕ್ರೋಶ

      ಬ್ರೆಜಿಲ್‌ನಲ್ಲಿ ಬೋಲ್ಸೊನಾರೋ ಅಧಿಕಾರಕ್ಕೆ ಬಂದಾಗಿನಿಂದಲೂ ಒಂದಲ್ಲಾ ಒಂದು ವಿವಾದ ಸೃಷ್ಟಿಸುತ್ತಿದ್ದಾರೆ. ಕೊರೊನಾ ನಿಯಂತ್ರಣದ ವಿಚಾರದಲ್ಲಿ ಈಗಾಗಲೇ ಬ್ರೆಜಿಲ್‌ ಸಂಸತ್‌ನಲ್ಲಿ ವಿಚಾರಣೆ ನಡೆಯುತ್ತಿದೆ. ಇಂತಹ ಪರಿಸ್ಥಿತಿಯಲ್ಲೇ ಅಮೆಜಾನ್ ಮೂಲ ನಿವಾಸಿಗಳು ಜೈರ್ ಬೋಲ್ಸೊನಾರೋ ಸರ್ಕಾರದ ವಿರುದ್ಧ ರೊಚ್ಚಿಗೆದ್ದು ಹೋರಾಟ ಆರಂಭಿಸಿದ್ದಾರೆ. ಇದರ ನಡುವೆ ಪರಿಸರ ಸಂರಕ್ಷಣೆ ವಿಚಾರದಲ್ಲೂ ಬೋಲ್ಸೊನಾರೋ ಸರ್ಕಾರದ ಈ ಅಸಡ್ಡೆ ಆಕ್ರೋಶಕ್ಕೆ ಕಾರಣವಾಗಿದೆ. ಆದರೆ ಇದ್ಯಾವುದಕ್ಕೂ ಜೈರ್ ಬೋಲ್ಸೊನಾರೋ ಕೇರ್ ಮಾಡುವ ಲಕ್ಷಣಗಳೇ ಕಾಣುತ್ತಿಲ್ಲ. ಮುಂದಿನ ದಿನಗಳಲ್ಲಿ ಅಮೆಜಾನ್‌ಗೆ ಅಪಾಯ ಎದುರಾಗುವ ಸಾಧ್ಯತೆ ದಟ್ಟವಾಗಿದೆ.

       ನೂರಾರು ಕೋಟಿ ಎಕರೆ ಅರಣ್ಯ..!

      ನೂರಾರು ಕೋಟಿ ಎಕರೆ ಅರಣ್ಯ..!

      ಅಮೆಜಾನ್ ಅರಣ್ಯದಲ್ಲಿ ಇರುವಷ್ಟು ಕಾಡು ಜಗತ್ತಿನ ಯಾವ ಭಾಗದಲ್ಲೂ ಸಿಗೋದಕ್ಕೆ ಸಾಧ್ಯವಿಲ್ಲ. ಇದಕ್ಕೆ ಸಹಕಾರಿಯಾಗಿರೋದು ಅಲ್ಲಿನ ವಾತಾವರಣ. ಸುಮಾರು 5.5 ಮಿಲಿಯನ್ ಸ್ಕ್ವೇರ್ ಕಿಲೋಮೀಟರ್‌ನಷ್ಟು ಅರಣ್ಯ ಪ್ರದೇಶವನ್ನ ಅಮೆಜಾನ್ ಹೊಂದಿದೆ. ಎಕರೆ ಲೆಕ್ಕದಲ್ಲಿ ಹೇಳುವದಾದರೆ ಸುಮಾರು 130 ಕೋಟಿ ಎಕರೆಗೂ ಹೆಚ್ಚಿನ ಪ್ರದೇಶ. ಇಷ್ಟು ಪ್ರಮಾಣದ ಕಾಡಿನಲ್ಲಿ ಬಹುಪಾಲು ಅರಣ್ಯ ಹರಡಿರುವುದು ಬ್ರೆಜಿಲ್‌ನಲ್ಲಿ. ಎಡಬಿಡದೆ ಸುರಿಯುವ ಮಳೆ, ಸದಾ ತುಂಬಿ ಹರಿಯುವ ಅಮೆಜಾನ್ ನದಿಯ ಸುತ್ತಮುತ್ತಲೂ ದಟ್ಟವಾದ ಮರ-ಗಿಡಗಳು ಬೆಳೆದು ನಿಂತಿವೆ. ಜೌಗು ಪ್ರದೇಶವಾಗಿರುವ ಕಾಡು ಊಹೆಗೆ ನಿಲುಕದಷ್ಟು ಅರಣ್ಯ ಸಂಪತ್ತು ಹೊಂದಿದೆ. ಅಧ್ಯಯನವೊಂದರ ಪ್ರಕಾರ ಅಮೆಜಾನ್‌ನ 1 ಹೆಕ್ಟೇರ್ ಪ್ರದೇಶದಲ್ಲಿ 750 ಜಾತಿಯ ಮರಗಳು ಹಾಗೂ 1500ಕ್ಕೂ ಹೆಚ್ಚು ಜಾತಿಯ ಗಿಡಗಳನ್ನ ಕಾಣಬಹುದು. ಕೇವಲ 1 ಹೆಕ್ಟೆರ್ ಅಂದರೆ ಸುಮಾರು 2.47 ಎಕರೆ ಪ್ರದೇಶದಲ್ಲೇ ಇಷ್ಟು ಅರಣ್ಯ ಸಂಪತ್ತು ಅಡಗಿದೆ ಎಂದರೆ 5.5 ಮಿಲಿಯನ್ ಸ್ಕ್ವೇರ್ ಕಿಲೋಮೀಟರ್‌ ಜಾಗದಲ್ಲಿ ಇನ್ನೆಂತಹ ಸಂಪತ್ತು ಇರಬೇಡ ಊಹಿಸಿ.

       ಕಾಡುಗಳ್ಳರಿಗೆ ಸ್ವರ್ಗ..!

      ಕಾಡುಗಳ್ಳರಿಗೆ ಸ್ವರ್ಗ..!

      ಅಮೆಜಾನ್‌ನಲ್ಲಿ ಅದರಲ್ಲೂ ಬ್ರೆಜಿಲ್‌ನಲ್ಲಿ ಹರಡಿರುವ ಅಮೆಜಾನ್ ಅರಣ್ಯದಲ್ಲಿ ಅಡಗಿರುವ ಸಂಪತ್ತಿನ ಮೇಲೆ ಸ್ಮಗ್ಲರ್ಸ್ ಹಾಗೂ ಕಾಡುಗಳ್ಳರು ಕಣ್ಣಿಟ್ಟಿದ್ದಾರೆ. ಒಂದ್ಕಡೆ ಕೃಷಿಕರು ಕಾಡು ಕಡಿದು ವ್ಯವಸಾಯ ಮಾಡಿದರೆ, ಸ್ಮಗ್ಲರ್ಸ್ ಇದೇ ಕಾಡಲ್ಲಿ ಕೊಕೇನ್‌ ರೀತಿಯ ಮಾದಕ ವಸ್ತುಗಳನ್ನ ಬೆಳೆಯುತ್ತಿದ್ದಾರೆ. ಇಲ್ಲಿ ಸಿಗುವ ಅಪಾರ ಪ್ರಮಾಣದ ಸಂಪತ್ತು ದೋಚುತ್ತಿದ್ದಾರೆ. ಇಷ್ಟೇ ಅಲ್ಲ ಅಮೆಜಾನ್‌ನ ಎಷ್ಟೋ ಗಣಿಗಾರಿಕೆಗಳು ಸ್ಮಗ್ಲರ್ಸ್ ಹಿಡಿತದಲ್ಲೇ ಇವೆ. ಕಳ್ಳದಾರಿ ಮೂಲಕ ಇಲ್ಲಿ ದೋಚಿದ ಅರಣ್ಯ ಸಂಪತ್ತನ್ನು ಕಾಡುಗಳ್ಳರು ನೆರೆಯ ಅಮೆರಿಕ ಸೇರಿದಂತೆ ದೂರದ ಯೂರೋಪ್ ರಾಷ್ಟ್ರಗಳಿಗೂ ಕದ್ದು ಸಾಗಿಸುತ್ತಿದ್ದಾರೆ. ಹೀಗಾಗಿ ಅಮೆಜಾನ್ ಪಾತ್ರದಲ್ಲಿ ಕತ್ತಲಾದರೆ ಸಾಕು ಜೆಸಿಬಿ, ಗರಗಸ, ಟ್ರಕ್‌ ಆರ್ಭಟ ಜೋರಾಗೇ ಇರುತ್ತೆ. ಬ್ರೆಜಿಲ್‌ನ ಸ್ಥಳೀಯ ಆಡಳಿತಗಳು ಸ್ಮಗ್ಲರ್ಸ್ ಬೆನ್ನಿಗೇ ನಿಂತಿವೆ. ಅಧಿಕಾರಿಗಳ ಕಥೆ ಕೇಳೋದೆ ಬೇಡ, ಅಷ್ಟರಮಟ್ಟಿಗೆ ಕಾಡುಗಳ್ಳರ ಹಾವಳಿ ಇದೆ. ಪೆರು, ಕೊಲಂಬಿಯಾ, ಬೊಲಿವಿಯಾ, ವೆನಿಜುವೆಲಾ ದೇಶಗಳಲ್ಲೂ ಭ್ರಷ್ಟಾಚಾರ ತಾಂಡವವಾಡುತ್ತಿದೆ.

      ಮೂಲ ನಿವಾಸಿಗಳ ಜೀವಕ್ಕೆ ಕುತ್ತು

      ಮೂಲ ನಿವಾಸಿಗಳ ಜೀವಕ್ಕೆ ಕುತ್ತು

      ಅಮೆಜಾನ್ ಅರಣ್ಯ ಸಸ್ಯ ಸಂಕುಲ ಹಾಗೂ ಪ್ರಾಣಿಗಳಿಗೆ ಮಾತ್ರ ಜಾಗ ನೀಡಿಲ್ಲ. ಇಲ್ಲಿ ಸಾವಿರಾರು ಕಾಡು ಜನಾಂಗಗಳು ವಾಸ ಇವೆ. ಇವರೆಲ್ಲಾ ಇಲ್ಲಿನ ಮೂಲ ನಿವಾಸಿಗಳು. ಆದರೆ ಆಧುನಿಕ ಜಗತ್ತಿನಲ್ಲಿ ಇವರಿಗೂ ಇಲ್ಲಿ ಸ್ಥಾನವೇ ಇಲ್ಲದಂತಾಗಿದೆ. ಸ್ಮಗ್ಲರ್ಸ್ ಹಾಗೂ ಕಾಡುಗಳ್ಳರ ಕೈಯಲ್ಲಿ ಸಿಲುಕಿ ಸಾವಿರಾರು ಕಾಡು ಜನರು ಪ್ರಾಣಬಿಟ್ಟಿದ್ದಾರೆ. ಹಲವರು ಕಾಡನ್ನೇ ತೊರೆದು ನಾಡು ಸೇರಿದ್ದಾರೆ. ಇನ್ನೂ ಆಧುನಿಕ ಜಗತ್ತಿನ ಜೊತೆಗೆ ಸಂಪರ್ಕವನ್ನೇ ಹೊಂದದ ಕೆಲವು ಜನಾಂಗಗಳು ಅಲ್ಲೇ ನರಳಿ ನರಳಿ ಪ್ರಾಣಬಿಡುವ ಸ್ಥಿತಿ ಇದೆ. ಆದರೆ ಇದ್ಯಾವುದೂ ಬ್ರೆಜಿಲ್ ಸರ್ಕಾರಕ್ಕೆ ಕಾಣುತ್ತಿಲ್ಲ. ಇದೇ ರೀತಿ ಅಮೆಜಾನ್ ಹರಡಿರುವ ಪೆರು, ಕೊಲಂಬಿಯಾ, ಬೊಲಿವಿಯಾ, ವೆನಿಜುವೆಲಾ ದೇಶಗಳಲ್ಲೂ ಮುಗ್ಧ ಕಾಡುಜನರ ಮಾರಣಹೋಮ ನಡೆಯುತ್ತಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+