ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊಲಂಬೋ ಏರ್‌ಪೋರ್ಟ್‌ನಲ್ಲಿ ಮತ್ತೊಂದು ಬಾಂಬ್ ನಿಷ್ಕ್ರಿಯಗೊಳಿಸಿದ ಯೋಧರು

|
Google Oneindia Kannada News

ಕೊಲಂಬೋ, ಏ.22: ಕೊಲಂಬೋ ಏರ್‌ಪೋರ್ಟ್‌ ಸಮೀಪದ ಮತ್ತೊಂದು ಸಜೀವ ಬಾಂಬ್ ಪತ್ತೆಯಾಗಿದ್ದು ಶ್ರೀಲಂಕಾ ವಾಯುಪಡೆಯ ಯೋಧರು ಅದನ್ನು ನಿಷ್ಕ್ರಿಯಗೊಳಿಸಿದ್ದಾರೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಕೊಲಂಬೋದ ಒಟ್ಟು 8 ಕಡೆಗಳಲ್ಲಿ ಭಾನುವಾರ ಆತ್ಮಾಹುತಿ ಬಾಂಬ್ ಸ್ಫೋಟಗೊಂಡಿದ್ದು, ಇದುವರೆಗೆ 290ಮಂದಿ ಮೃತಪಟ್ಟಿದ್ದಾರೆ. ಭಾರತದ ಇಬ್ಬರು ಮೃತಪಟ್ಟಿದ್ದು 5 ಮಂದಿ ಕಾಣೆಯಾಗಿದ್ದಾರೆ.

ಈಸ್ಟರ್ ದುರಂತ: ಶ್ರೀಲಂಕಾದ ಚರ್ಚ್, ಹೋಟೆಲ್ ಗಳಲ್ಲಿ ಸ್ಫೋಟ ಈಸ್ಟರ್ ದುರಂತ: ಶ್ರೀಲಂಕಾದ ಚರ್ಚ್, ಹೋಟೆಲ್ ಗಳಲ್ಲಿ ಸ್ಫೋಟ

ಇದೊಂದು ಕಚ್ಚಾ ಬಾಂಬ್​ ಆಗಿದ್ದು, ಸ್ಥಳೀಯವಾಗಿ ಸಿದ್ಧಪಡಿಸಲಾಗಿದೆ. ರಸ್ತೆಯ ಪಕ್ಕದಲ್ಲೇ ಇರುವ ವಿಮಾನ ನಿಲ್ದಾಣದ ಮುಖ್ಯ ಟರ್ಮಿನಲ್​ನಲ್ಲಿ ದುಷ್ಕರ್ಮಿಗಳನ್ನು ಇದನ್ನು ಇರಿಸಿದ್ದರು ಎಂದು ವಾಯುಸೇನೆಯ ವಕ್ತಾರ ಗ್ರೂಪ್​ ಕ್ಯಾಪ್ಟನ್​ ಗಿಹಾನ್​ ಸೆನೆವಿರತ್ನೆ ಹೇಳಿದ್ದಾರೆ.

ಶ್ರೀಲಂಕಾದಲ್ಲಿ ಇಲ್ಲಿ ತನಕ ಸಂಭವಿಸಿದ ಭೀಕರ ಸ್ಫೋಟಗಳು ಶ್ರೀಲಂಕಾದಲ್ಲಿ ಇಲ್ಲಿ ತನಕ ಸಂಭವಿಸಿದ ಭೀಕರ ಸ್ಫೋಟಗಳು

Improvised Pipe Bomb Near Colombo Airport Defused By Sri Lanka Air Force

ಈಸ್ಟರ್ ಪ್ರಾರ್ಥನೆಯಲ್ಲಿ ತೊಡಗಿದ್ದವರು ಮತ್ತೆ ಮರಳಲಿಲ್ಲ, ಇಲ್ಲಿನ ಚರ್ಚ್ , ಹೋಟೆಲ್‌ಗಳಲ್ಲಿ ಸರಣಿ ಬಾಂಬ್ ಸ್ಫೋಟವಾಗಿದೆ. ಇದೀಗ ಬಂದ ಮಾಹಿತಿ ಪ್ರಕಾಋ ಈವರೆಗೆ ಒಟ್ಟು 290 ಮಂದಿ ಸಾವನ್ನಪ್ಪಿದ್ದು 500ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಶ್ರೀಲಂಕಾ ಬಾಂಬ್ ಸ್ಫೋಟ: 5 ಮಂದಿ ಭಾರತೀಯರು ಸೇರಿ ಮೃತರ ಸಂಖ್ಯೆ 290ಕ್ಕೆ ಏರಿಕೆ ಶ್ರೀಲಂಕಾ ಬಾಂಬ್ ಸ್ಫೋಟ: 5 ಮಂದಿ ಭಾರತೀಯರು ಸೇರಿ ಮೃತರ ಸಂಖ್ಯೆ 290ಕ್ಕೆ ಏರಿಕೆ

ಕೊಲಂಬೋ ಹಾಗೂ ನೆಗೊಂಬೋ ನಗರದಲ್ಲಿರುವ ಚರ್ಚ್‌ಗಳಲ್ಲಿ ಸ್ಫೋಟ ಸಂಭವಿಸಿದೆ. ಒಟ್ಟು 8 ಕಡೆಗಳಲ್ಲಿ ಸ್ಫೋಟ ಸಂಭವಿಸಿರುವ ಮಾಹಿತಿ ಲಭ್ಯವಾಗಿದೆ. ಶಾಂಗ್ರಿಲಾ ಹೋಟೆಲ್ ಹಾಗೂ ಕಿಂಗ್ಸ್ ಬರಿ ಹೋಟೆಲ್ ನಲ್ಲಿ ಸ್ಫೋಟವಾಗಿವೆ.ಕೊಲಂಬೋ ಕೊಚಿಕಡೆಯ ಸೈಂಟ್ ಅಂಥೋನಿ ಚರ್ಚ್ ನಲ್ಲಿ ಸ್ಫೋಟ ಸಂಭವಿಸಿದ ದೃಶ್ಯಗಳು ಸಾಮಾಜಿಕ ಜಾಲ ತಾಣಗಳಲ್ಲಿ ಹಂಚಿಕೆಯಾಗುತ್ತಿವೆ.

English summary
An improvised pipe bomb discovered close to Colombo's main airport was successfully defused by the Sri Lanka airforce, police said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X