ಒಸಾಬಾ ಬಿನ್ ಲಾಡೆನ್ ಓರ್ವ 'ಹುತಾತ್ಮ' ಎಂದ ಪಾಕ್ ಪ್ರಧಾನಿ ಇಮ್ರಾನ್ ಖಾನ್
ಇಸ್ಲಾಮಾಬಾದ್, ಜೂನ್ 26: ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಮತ್ತೊಂದು ವಿವಾದದಲ್ಲಿ ಸಿಲುಕಿದ್ದಾರೆ.
ಭಯೋತ್ಪಾದಕ ಮತ್ತು 9/11 ಮಾಸ್ಟರ್ ಮೈಂಡ್ ಒಸಾಮಾ ಬಿನ್ ಲಾಡೆನ್ ಅವರನ್ನು ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಹುತಾತ್ಮರೆಂದು ಕರೆದಿದ್ದಾರೆ.
ಹಿಂದೊಮ್ಮೆ ಒಂದು ಘಟನೆ ನಡೆಯಿತು, ಅಮೆರಿಕನ್ನರು ಅಬ್ಬೋಟಾಬಾದ್ ಗೆ ನುಗ್ಗಿ ಒಸಾಮಾ ಬಿನ್ ಲಾಡನ್ ನ್ನು ಹತ್ಯೆ ಮಾಡಿದರು, ಹುತಾತ್ಮನನ್ನಾಗಿಸಿದರು ಎಂದು ಹೇಳಿದ್ದಾರೆ.
ಭಯೋತ್ಪಾದನೆ ವಿರುದ್ಧ ಯುಎಸ್ ನಡೆಸಿದ ಯುದ್ಧದಲ್ಲಿ 70 ಸಾವಿರ ಪಾಕಿಸ್ತಾನಿಗಳು ಸಾವನ್ನಪ್ಪಿದರು ಎಂದು ಖಾನ್ ಹೇಳಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಒಸಾಮಾ ಬಿನ್ ಲಾಡೆನ್ ಹುತಾತ್ಮನೇ ಎಂದು ಜನ ಪ್ರಶ್ನಿಸುತ್ತಿದ್ದಾರೆ.

ಬಿನ್ ಲಾಡೆನ್ ಹತ್ಯೆ ಮಾಡಿದ್ದ ಅಮೆರಿಕ
ವಿಶ್ವ ವಾಣಿಜ್ಯ ಕೇಂದ್ರದ ದಾಳಿಯ ರೂವಾರಿ, ಆಲ್ ಖೈದಾ ಮುಖ್ಯಸ್ಥ ಒಸಾಮಾ ಬಿನ್ ಲಾಡೆನ್‍ನನ್ನು 2011ರ ಮೇ 2 ರಂದು ಅಮೆರಿಕ ನೌಕಾಪಡೆ ಹತ್ಯೆ ಮಾಡಿದೆ. ಒಸಾಮಾ ತಂಗಿದ್ದ ಪಾಕಿಸ್ತಾನದ ಅಬೋಟಾಬಾದ್ ನಿವಾಸದ ಮೇಲೆ ಅಮೆರಿಕ ನೌಕಾಪಡೆಯ ಸೀಲ್ ಕಮಾಂಡೊಗಳು ದಾಳಿ ನಡೆಸಿ ಹತ್ಯೆ ಮಾಡಿತ್ತು. ನಂತರ ಈ ಕುರಿತು ಸಾಕಷ್ಟು ಚರ್ಚೆ ನಡೆದಿತ್ತು.

ಅಮೆರಿಕ ವಿಷಯದಲ್ಲಿ ಇಮ್ರಾನ್ ಖಾನ್ ತರಾಟೆ
ಪತ್ರಕರ್ತರಾದ ನೈಲಾ ಇನ್ಯಾತ್ ಇದನ್ನ ಟ್ವಿಟರ್ ನಲ್ಲಿ ಹಂಚಿಕೊಂಡಿದ್ದು, ಇಮ್ರಾನ್ ಖಾನ್ ಒಸಾಮಾ ವಿಷಯದಲ್ಲಿ ಅಮೆರಿಕಾವನ್ನು ತರಾಟೆಗೆ ತೆಗೆದುಕೊಂಡಿರುವುದು ವಿಡಿಯೋದಲ್ಲಿ ಕಾಣಬಹುದಾಗಿದೆ.
ಬಿನ್ ಲ್ಯಾಡನ್ ಭಯೋತ್ಪಾದನೆಯನ್ನು ನಮ್ಮ ನೆಲಕ್ಕೆ ತಂದ, ಲಾಡನ್ ಓರ್ವ ಭಯೋತ್ಪಾದಕ ಆದರೂ ಪ್ರಧಾನಿ ಆತನನ್ನು ಹುತಾತ್ಮನೆಂದು ಕರೆಯುತ್ತಾರೆ? ಎಂದು ಪ್ರಶ್ನಿಸಿದ್ದಾರೆ.
ಒಸಾಮಾ ಬಿನ್ ಲಾಡೆನ್ ಓರ್ವ ಹುತಾತ್ಮ
ಇಮ್ರಾನ್ ಖಾನ್ ಹೇಳಿಕೆಗೆ ಪಾಕಿಸ್ತಾನದ ರಾಜಕೀಯ ಪಕ್ಷಗಳಿಂದ ತೀವ್ರ ವಿರೋಧ ವ್ಯಕ್ತವಾಗತೊಡಗಿದೆ. ಪಿಎಂಎಲ್ ನ ನಾಯಕ ಖಾವಾಜ ಅಸೀಫ್ " ಇಮ್ರಾನ್ ಖಾನ್ ಒಸಾಮನನ್ನು ಹುತಾತ್ಮನೆಂದು ಕರೆದಿದ್ದಾರೆ.
ಇದೇ ವೇಳೆ ಪಾಕಿಸ್ತಾನ್ ಪೀಪಲ್ಸ್ ಪಕ್ಷದ ವಕ್ತಾರ ಮುಸ್ತಾಫ ನವಾಜ್ ಖೋಖರ್ ಸಹ ಇಮ್ರಾನ್ ಖಾನ್ ಅವರ ಹೇಳಿಕೆಯನ್ನು ಖಂಡಿಸಿದ್ದು, ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ರಾಷ್ಟ್ರೀಯ ಭದ್ರತೆಗೆ ಅಪಾಯಕಾರಿ" ಎಂದು ಹೇಳಿದ್ದಾರೆ.

ದಾಳಿಯಲ್ಲಿ ಮೃತಪಟ್ಟಿ ಸೇನಾ ಸಿಬ್ಬಂದಿಯನ್ನು ಏನೆನ್ನಬೇಕು?
ಒಸಾಮಾ ನೆಬಿನ್ ಲಾಡೆನ್ ನ್ನು ಹುತಾತ್ಮ ಎಂದು ಹೇಳುವ ಮೂಲಕ ಖಾನ್ ದೇಶದ ಭದ್ರತೆಗೆ ಅಪಾಯಕಾರಿಯಾಗಿ ಮಾರ್ಪಾಡಾಗಿದ್ದಾರೆ. ಒಸಾಮಾ ಬಿನ್ ಲಾಡೆನ್ ಹುತಾತ್ಮನಾದರೆ, ಅಲ್-ಖೈದಾ ದಾಳಿಯಲ್ಲಿ ಮೃತಪಟ್ಟ ಸೇನಾ ಸಿಬ್ಬಂದಿಗಳು, ನಾಗರಿಕರೆಲ್ಲರನ್ನೂ ಏನೆನ್ನಬೇಕು? ಎಂದು ಮುಸ್ತಾಫ್ ನವಾಜ್ ಪ್ರಶ್ನಿಸಿದ್ದಾರೆ.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications