ಪ್ರಧಾನಿ ಪಟ್ಟ ಕಳೆದುಕೊಂಡ ಇಮ್ರಾನ್, ವಿಶ್ವಾಸಮತದಲ್ಲಿ ಪಿಟಿಐಗೆ ಸೋಲು

ಇಸ್ಲಾಮಾಬಾದ್, ಏಪ್ರಿಲ್ 10: ಬಹುಮತ ಕಳೆದುಕೊಂಡಿರುವ ಇಮ್ರಾನ್ ಖಾನ್ ವಿರುದ್ಧ ಇಂದು ಅವಿಶ್ವಾಸ ನಿರ್ಣಯದ ಮೇಲೆ ಮತದಾನ ನಡೆಯಲಿದೆ. ಇಮ್ರಾನ್ ಖಾನ್ ಸರಕಾರದ ವಿರುದ್ಧ ತಿರುಗಿಬಿದ್ದ ವಿಪಕ್ಷಗಳು ಒಂದಾಗಿ ಮತ ಚಲಾಯಿಸಿದ್ದು ವಿಶೇಷವಾಗಿತು.

ಸಮಾಜವಾದಿ, ಉದಾರವಾದಿ ಮತ್ತು ಧಾರ್ಮಿಕ ಪಕ್ಷಗಳ ಒಕ್ಕೂಟ ಒಂದಾಗಿ ಇಮ್ರಾನ್ ವಿರುದ್ದ ನಿಂತು, ಸರ್ಕಾರದ ಪತನಕ್ಕೆ ಕಾರಣದಾವರು. 342 ಸದಸ್ಯರ ರಾಷ್ಟ್ರೀಯ ಅಸೆಂಬ್ಲಿಯಲ್ಲಿ 174 ಸದಸ್ಯರು ಸರ್ಕಾರದ ವಿರುದ್ಧ ಮತ ಹಾಕಿದ್ದು, ಪ್ರಧಾನ ಮಂತ್ರಿಯನ್ನು ಪದಚ್ಯುತಗೊಳಿಸಲು ಅಗತ್ಯವಿದ್ದ 172 ಮತಗಳನ್ನು ಪಿಟಿಐ ಪಡೆಯುವುದಿಲ್ಲ ಎಂಬುದನ್ನು ಖಾತ್ರಿ ಪಡಿಸಿದವು. ಶನಿವಾರ ತಡರಾತ್ರಿ ಹೈಡ್ರಾಮಾ ನಂತರ ಇಮ್ರಾನ್ ಖಾನ್ ಪ್ರಧಾನಿ ಪಟ್ಟ ಕಳೆದುಕೊಂಡರು.

ಏಪ್ರಿಲ್ 3ರಂದೇ ಪಾಕಿಸ್ತಾನದ ವಿಪಕ್ಷಗಳು ಅವಿಶ್ವಾಸ ನಿರ್ಣಯ ಮಂಡಿಸಿದ್ದವು. ಆದರೆ, ಡೆಪ್ಯುಟಿ ಸ್ಪೀಕರ್ ಖಾಸಿಂ ಸುರಿ ಅವರು ಈ ಅವಿಶ್ವಾಸಮತವನ್ನು ಅಸಾಂವಿಧಾನಿಕ ಎಂದು ತೀರ್ಮಾನಿಸಿ ತಿರಸ್ಕರಿಸಿದರು. ಅದಾದ ಬಳಿಕ ಇಮ್ರಾನ್ ಖಾನ್ ಅವರು ಅಲ್ಲಿನ ಲೋಕಸಭೆಯನ್ನೇ ವಿಸರ್ಜಿಸಿ ಚುನಾವಣೆಗೆ ಹೋಗುವ ಪ್ರಯತ್ನ ಮಾಡಿದರು.

mran Khan Removed As Pakistan Prime Minister, PTI Loses No-Trust Vote

ಐದು ಸದಸ್ಯರ ನ್ಯಾಯಪೀಠವು ಮಹತ್ವದ ತೀರ್ಪು ನೀಡಿ, ಅವಿಶ್ವಾಸಮತ ತಿರಸ್ಕರಿಸಿದ್ದು ಮತ್ತು ಲೋಕಸಭೆ ವಿಸರ್ಜನೆ ಮಾಡಿದ್ದು ಅಸಿಂಧು ಎಂದು ತೀರ್ಮಾನಿಸಿತು. ಈಗ ನ್ಯಾಯಾಲಯದ ನಿರ್ದೇಶನದ ಮೇರೆಗೆ ಇಮ್ರಾನ್ ಖಾನ್ ಅವರು ಅವಿಶ್ವಾಸ ಮತ ಎದುರಿಸಬೇಕಾಗಿತ್ತು.

ಇಮ್ರಾನ್ ಖಾನ್ ಅವರು ತಮ್ಮ ಸರಕಾರವನ್ನು ಪತನಗೊಳಿಸಲು ವಿದೇಶೀ ಶಕ್ತಿಗಳ ಹುನ್ನಾರ ನಡೆದಿದೆ ಎಂದು ಆರೋಪಿಸಿದ್ದರು. ಪತ್ರಿಕಾಗೋಷ್ಠಿಯೊಂದರಲ್ಲಿ ಅವರು ಅಮೆರಿಕದ ಹೆಸರನ್ನೂ ಹೇಳಿರುವುದು ಕುತೂಹಲ ಮೂಡಿಸಿದ್ದರು ತಮ್ಮ ಸರಕಾರವನ್ನು ಬೆದರಿಸಿ ತನಗೆ ಪತ್ರ ಬಂದಿದೆ ಎಂಬ ಸಂಗತಿಯನ್ನ ತಿಳಿಸಿರುವ ಅವರು ಆ ಪತ್ರದ ವಿವರವನ್ನು ಇನ್ನೂ ಬಹಿರಂಗಪಡಿಸಿರಲಿಲ್ಲ.

ಕೊನೆ ಅಸ್ತ್ರವಾಗಿ ಈ ಪತ್ರವನ್ನು ಸ್ಪೀಕರ್ ಅಥವಾ ಸುಪ್ರೀಂಕೋರ್ಟ್ ವಶಕ್ಕೆ ನೀಡಿ, ಪತ್ರದಲ್ಲಿರುವ ವಿಷಯ ಬಹಿರಂಗಪಡಿಸುತ್ತಾರೆ ಎಂದು ವರದಿಯಾಗಿತ್ತು. ಆದರೆ, ಇದರಿಂದ ವಿಶ್ವಾಸಮತಯಾಚನೆ ಪ್ರಕ್ರಿಯೆಯೆ ಯಾವುದೇ ಅಡ್ಡಿಯಾಗುತ್ತಿರಲಿಲ್ಲ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದರು.

ಈ ಬಗ್ಗೆ ಪ್ರತಿಕ್ರಿಯಿಸಿದ ಯುಎಸ್ ಅಧಿಕಾರಿಗಳು ವಿದೇಶಿ ಸಂಚು ಎಂಬುದು ಕಲ್ಪಿತವಾಗಿದ್ದು, ಯಾವುದೇ ರೀತಿ ಪ್ರಯತ್ನವನ್ನು ಅಮೆರಿಕ ಮಾಡಿಲ್ಲ ಎಂದಿದ್ದಾರೆ.

ಮಾಜಿ ಪ್ರಧಾನಿ ನವಾಜ್ ಷರೀಫ್ ಅವರ ಕಿರಿಯ ಸಹೋದರ. ಪಂಜಾಬ್ ಪ್ರಾಂತ್ಯದಲ್ಲಿ ಮೂರು ಬಾರಿ ಮುಖ್ಯಮಂತ್ರಿ ಆಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿರುವ ಶಹಬಾಜ್ ಷರೀಫ್ ಅವರು ಮುಂದಿನ ಪ್ರಧಾನಿಯಾಗುವ ಸಾಧ್ಯತೆ ಕಂಡು ಬಂದಿದೆ. ಏಪ್ರಿಲ್ 11ರಂದು ಹೊಸ ಪ್ರಧಾನಿ ಆಯ್ಕೆಯಾಗಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+