ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಪ್ಪು ಪಟ್ಟಿ ಭೀತಿಯಲ್ಲಿ ಪಾಕಿಸ್ತಾನ: ಇಮ್ರಾನ್ ಖಾನ್ ಹೇಳಿದ್ದೇನು?

|
Google Oneindia Kannada News

ಇಸ್ಲಾಮಾಬಾದ್, ಆಗಸ್ಟ್ 28: ಪಾಕಿಸ್ತಾನದ ಪ್ರಧಾನಿ ಇಮ್ರಾನ್‌ ಖಾನ್‌ಗೆ ಕಪ್ಪು ಪಟ್ಟಿ ಭೀತಿ ಎದುರಾಗಿದೆ. ಒಂದೊಮ್ಮೆ ಪಾಕಿಸ್ತಾನ ಕಪ್ಪು ಪಟ್ಟಿಗೆ ಸೇರಿದರೆ ಆರ್ಥಿಕತೆ ಮೇಲೆ ದುಷ್ಪರಿಣಾಮ ಬೀರಲಿದೆ ಎಂದು ಹೇಳಿದ್ದಾರೆ.

Recommended Video

China ತನ್ನ ವಾಯು , ನೌಕಾ ಪಡೆಯನ್ನು ದ್ವಿಗುಣಗೊಳಿಸುತ್ತಿರುವುದೇಕೆ | Oneindia Kannada

ಪಾಕಿಸ್ತಾನದ ಸರ್ಕಾರದ ಅಂದಾಜಿನ ಪ್ರಕಾರ, ಪಾಕಿಸ್ತಾನದ ಎಫ್‌ಎಟಿಎಫ್ ಬೂದು ಪಟ್ಟಿಯು ದೇಶಕ್ಕೆ ವಾರ್ಷಿಕವಾಗಿ ಸುಮಾರು 10 ಶತಕೋಟಿ ಡಾಲರ್‌ಗಳಷ್ಟು ಹಾನಿಯನ್ನುಂಟುಮಾಡುತ್ತಿದೆ ಎಂದರು.

ಜಮ್ಮು-ಕಾಶ್ಮೀರ ತನ್ನದು ಎಂದ ಪಾಕಿಸ್ತಾನಕ್ಕೆ ಭಾರತದ ಉತ್ತರವೇನು? ಜಮ್ಮು-ಕಾಶ್ಮೀರ ತನ್ನದು ಎಂದ ಪಾಕಿಸ್ತಾನಕ್ಕೆ ಭಾರತದ ಉತ್ತರವೇನು?

ಅಂತಾರಾಷ್ಟ್ರೀಯ ಭಯೋತ್ಪಾದಕ ಹಣಕಾಸು ವಾಚ್‌ಡಾಗ್‌ 'ಫೈನಾನ್ಷಿಯಲ್ ಆ್ಯಕ್ಷನ್ ಟಾಸ್ಕ್ ಫೋರ್ಸ್‌' (ಎಫ್ಎಟಿಎಫ್) ಎದುರು ಕೆಂಗಣ್ಣಿಗೆ ಗುರಿಯಾಗಿರುವ ಪಾಕಿಸ್ತಾನವು, ಭಯೋತ್ಪಾದನೆಯನ್ನು ಮಟ್ಟ ಹಾಕಲು ಇದಾಗಲೇ ಈ ದೇಶವನ್ನು ಗ್ರೇ ಪಟ್ಟಿಗೆ ಸೇರಿಸಿ ಎರಡು ವರ್ಷಗಳಾಗಿವೆ.

Imran Khan Says India Lobbying Hard To Get Pak Black-Listed At FATF

ಭಯೋತ್ಪಾದನಾ ಚಟುವಟಿಕೆ ಇನ್ನೂ ಮುಂದುವರೆಸಿರುವ ಹಿನ್ನೆಲೆಯಲ್ಲಿ, ಪಾಕಿಸ್ತಾನವನ್ನು ಆರ್ಥಿಕ ಕಪ್ಪು ಪಟ್ಟಿಗೆ ಸೇರಿಸಲು ಚಿಂತನೆ ನಡೆಸಿರುವ ಬೆನ್ನಲ್ಲೇ ಪಾಕ್‌ ಪ್ರಧಾನಿ ಇಮ್ರಾನ್‌ ಖಾನ್‌ ಅಳಲು ತೋಡಿಕೊಳ್ಳುತ್ತಿದ್ದಾರೆ.

ಒಂದು ವೇಳೆ ನಾವು ಕಪ್ಪುಪಟ್ಟಿಗೆ ಸೇರಲ್ಪಟ್ಟರೆ, ಪಾಕಿಸ್ತಾನದ ರೂಪಾಯಿ ಮೌಲ್ಯ ಪಾತಾಳಕ್ಕೆ ಇಳಿಯುತ್ತದೆ. ಹೀಗಾದರೆ ಅದರ ಪ್ರಮಾಣ ಎಷ್ಟು ಕೆಳಕ್ಕೆ ಹೋಗುತ್ತದೆ ಎನ್ನುವುದನ್ನು ಊಹಿಸುವುದೂ ಕಷ್ಟವಾಗುತ್ತದೆ. ಪರಿಸ್ಥಿತಿ ಮಿತಿ ಮೀರಿದರೆ, ವಿದ್ಯುತ್, ಅನಿಲ, ತೈಲ ಸೇರಿದಂತೆ ಎಲ್ಲದರ ದರವೂ ಹೆಚ್ಚಾಗಿ ನಮ್ಮ ಇಡೀ ಆರ್ಥಿಕತೆಯೇ ನಾಶವಾಗುತ್ತದೆ ಎಂದು ಇಮ್ರಾನ್‌ ಖಾನ್‌ ಗೋಳು ತೋಡಿಕೊಂಡಿದ್ದಾರೆ.

ಪಾಕಿಸ್ತಾನದ ಚಾನೆಲ್‌ ಒಂದಕ್ಕೆ ಸಂದರ್ಶನ ನೀಡಿರುವ ಇಮ್ರಾನ್‌ ಖಾನ್‌, 'ಒಂದು ವೇಳೆ ಪಾಕಿಸ್ತಾನವನ್ನು ಕಪ್ಪುಪಟ್ಟಿಗೆ ಸೇರಿಸಿಬಿಟ್ಟರೆ, ಯಾವುದೇ ದೇಶ ನಮ್ಮ ಜತೆ ಹಣಕಾಸು ವ್ಯವಹಾರ ಇಟ್ಟುಕೊಳ್ಳುವುದಿಲ್ಲ.

ಹೀಗೆ ಆದರೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ನಮ್ಮನ್ನು ಕೇಳುವವರೇ ಇರುವುದಿಲ್ಲ. ಯಾವುದೇ ಹಣಕಾಸು ಸಂಸ್ಥೆಗಳು ನಮ್ಮೊಂದಿಗೆ ವ್ಯವಹರಿಸುವುದಿಲ್ಲ. ಇದು ಅತ್ಯಂತ ಕಠಿಣವಾಗಿರುವ ಪರಿಸ್ಥಿತಿ' ಎಂದಿದ್ದಾರೆ.

ಭಾರತವು ತನ್ನ ದೇಶವನ್ನು ಕಪ್ಪುಪಟ್ಟಿಗೆ ತಳ್ಳಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿರುವ ಇಮ್ರಾನ್‌ ಖಾನ್‌,ಎರಡು ವರ್ಷಗಳಿಂದ ಭಾರತವು ಅಂತಾರಾಷ್ಟ್ರೀಯ ಸಮುದಾಯದೊಂದಿಗೆ ಲಾಬಿ ಮಾಡುವ ಮೂಲಕ ಪಾಕಿಸ್ತಾನವನ್ನು ಕಪ್ಪುಪಟ್ಟಿಗೆ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ದೂರಿದರು.

English summary
India has been lobbying hard from the past two years to put Pakistan on the blacklist at FATF, said Prime Minister Imran Khan adding that the country’s economy would be destroyed if this happens.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X