ಮೋದಿ ಜೊತೆ ಮಾತುಕತೆಗಾಗಿ ಗೋಗರೆದರೆ ಇಮ್ರಾನ್ ಖಾನ್?

Recommended Video

      ಸಂದರ್ಶನದಲ್ಲಿ ಇಮ್ರಾನ್ ಖಾನ್ ನಿಜಕ್ಕೂ ಹೇಳಿದ್ದೇನು? | Oneindia Kannada

      ಬಿಷೆಕ್, ಜೂನ್ 14: ಕಿರ್ಗಿಸ್ತಾನದಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಘದ (ಎಸ್‌ಸಿಒ) ಶೃಂಗ ಸಭೆಯಲ್ಲಿ ಭಾಗವಹಿಸಿರುವ ನರೇಂದ್ರ ಮೋದಿ ಅವರು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರೊಂದಿಗೆ ಯಾವುದೇ ಸಭೆ ನಡೆಸುತ್ತಿಲ್ಲ ಎಂದು ಈಗಾಗಲೇ ಪ್ರಧಾನಿ ಕಚೇರಿ ಮೂಲಗಳು ಸ್ಪಷ್ಟಪಡಿಸಿವೆ.

      ಆದರೆ ಇಮ್ರಾನ್ ಖಾನ್ ಅವರು ರಷ್ಯನ್ ನ್ಯೂಸ್ ಏಜೆನ್ಸಿಯೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಭಾರತದೊಂದಿಗೆ ಮಾತುಕತೆ ನಡೆಸುವ ಇಂಗಿತ ವ್ಯಕ್ತಪಡಿಸಿದ್ದಾರೆ. "ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಬಂಧ ತೀರಾ ಬಿಗುಡಾಯಿಸಿದ್ದು, ಎಂದೂ ಇಲ್ಲದಷ್ಟು ಕೆಳಸ್ಥಾನಕ್ಕೆ ತಲುಪಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಸಿಕ್ಕ ಜನಾದೇಶವನ್ನು ಭಾರತ-ಪಾಕಿಸ್ತಾನದ ನಡುವೆ ಸೌಹಾರ್ದಯುತ ಸಂಬಂಧ ಏರ್ಪಡಲು ಬಳಸುತ್ತಾರೆ ಎಂದು ಭಾವಿಸಿದ್ದೇನೆ" ಎಂದು ಸಂದರ್ಶನದಲ್ಲಿ ಇಮ್ರಾನ್ ಖಾನ್ ಹೇಳಿದರು.

      Imran Khan trying to patch up Indo-Pak relationship through SCO

      "ಭಾರತದೊಂದಿಗೆ ಯಾವುದೇ ರೀತಿಯ ಮಾತುಕತೆ ಮತ್ತು ಮಧ್ಯಸ್ಥಿಕೆಗೆ ನಾನು ಸಿದ್ಧ. ನಮಗೆ ನಮ್ಮ ಎಲ್ಲಾ ನೆರೆ ರಾಷ್ಟ್ರಗಳೊಂದಿಗೆ ಶಾಂತಿ ಸ್ಥಾಪಿಸುವುದು ಮುಖ್ಯ. ಈಗಾಗಲೇ ಉಭಯ ದೇಶಗಳ ನಡುವೆ ನಡೆದ ಮೂರು ಯುದ್ಧಗಳು ಎರಡೂ ದೇಶಗಳನ್ನೂ ಬಡತನಕ್ಕೆ ತಳ್ಳಿವೆ" ಎಂದು ಇಮ್ರಾನ್ ಖಾನ್ ಹೇಳಿದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+