ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking; ಪದಚ್ಯುತಿ ಷಡ್ಯಂತ್ರ, ಇಮ್ರಾನ್ ಖಾನ್ ಯೂ-ಟರ್ನ್

|
Google Oneindia Kannada News

ಇಸ್ಲಾಮಾಬಾದ್, ಏಪ್ರಿಲ್ 19; ಅವಿಶ್ವಾಸ ನಿರ್ಣಯದಲ್ಲಿ ಸೋಲು ಕಂಡು ಪ್ರಧಾನಿ ಪಟ್ಟ ಕಳೆದುಕೊಂಡಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ತಮ್ಮ ಹೇಳಿಕೆಯಲ್ಲಿ ಯೂ-ಟರ್ನ್ ತೆಗೆದುಕೊಂಡಿದ್ದಾರೆ.

"ನಾನು ಯಾವುದೇ ದೇಶದ ವಿರುದ್ಧವಾಗಿಲ್ಲ. ಭಾರತ, ಯುರೋಪ್ ಮತ್ತು ಅಮೆರಿಕದ ವಿರೋಧಿಯಲ್ಲ"ಎಂದು ಇಮ್ರಾನ್ ಖಾನ್ ಯೂ-ಟರ್ನ್ ತೆಗೆದುಕೊಂಡಿದ್ದಾರೆ. ಇಮ್ರಾನ್ ಖಾನ್ ಈ ನಡೆ ಕುತೂಹಲಕ್ಕೆ ಕಾರಣವಾಗಿದೆ.

 ಪಾಕಿಸ್ತಾನ ಇತಿಹಾಸದಲ್ಲಿ ಯಾವ ಪ್ರಧಾನಿಗೂ ಪೂರ್ಣಾವಧಿ ಅಧಿಕಾರ ಪೂರೈಸಲು ಸಾಧ್ಯವಾಗಿಲ್ಲವೇಕೆ? ಪಾಕಿಸ್ತಾನ ಇತಿಹಾಸದಲ್ಲಿ ಯಾವ ಪ್ರಧಾನಿಗೂ ಪೂರ್ಣಾವಧಿ ಅಧಿಕಾರ ಪೂರೈಸಲು ಸಾಧ್ಯವಾಗಿಲ್ಲವೇಕೆ?

ಪಾಕಿಸ್ತಾನದ ಪ್ರಧಾನಿ ಪಟ್ಟ ಕಳೆದುಕೊಂಡಿದ್ದ ಇಮ್ರಾನ್ ಖಾನ್ ವಿದೇಶಗಳ ವಿರುದ್ಧ ಆರೋಪ ಮಾಡಿದ್ದರು. ಅದರಲ್ಲೂ ಪ್ರಧಾನಿ ಹುದ್ದೆಯಿಂದ ತಮ್ಮನ್ನು ಪದಚ್ಯುತಿಗೊಳಿಸುವಲ್ಲಿ ಅಮೆರಿಕ ಪಾತ್ರವಿದೆ ಎಂದು ಆರೋಪಿಸಿದ್ದರು.

ಭಾರತವನ್ನು ಹಾಡಿ ಹೊಗಳಿದ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್! ಭಾರತವನ್ನು ಹಾಡಿ ಹೊಗಳಿದ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್!

Imran Khan U Turn Over His Foreign Conspiracy Comment

ಪಾಕಿಸ್ತಾನದ ರಾಜಕೀಯ ಬೆಳವಣಿಗೆಗಳ ಬಳಿಕ ಇಮ್ರಾನ್ ಖಾನ್ ಅಭಿಮಾನಿಗಳು ಸಹ ಅಮೆರಿಕ ಷಡ್ಯಂತ್ರವಿದೆ ಎಂದು ಆರೋಪಿಸಿದ್ದರು. ಇಮ್ರಾನ್ ಖಾನ್ ಹೇಳಿಕೆಯನ್ನು ಅಮೆರಿಕ ಖಂಡಿಸಿತ್ತು.

ಮೊದಲ ಭಾಷಣದಲ್ಲೇ ಕಾಶ್ಮೀರ ವಿಷಯ ಪ್ರಸ್ತಾಪಿಸಿದ ಪಾಕ್ ಪ್ರಧಾನಿ ಮೊದಲ ಭಾಷಣದಲ್ಲೇ ಕಾಶ್ಮೀರ ವಿಷಯ ಪ್ರಸ್ತಾಪಿಸಿದ ಪಾಕ್ ಪ್ರಧಾನಿ

ಪಾಕಿಸ್ತಾನದ ನೂತನ ಪ್ರಧಾನಿ ಶಾಹಬಾಜ್ ಷರೀಫ್‌ ಅಭಿನಂದಿಸಿದ್ದ ಅಮೆರಿಕ ಇಮ್ರಾನ್ ಖಾನ್ ಹೇಳಿಕೆ ಖಂಡಿಸಿತ್ತು. ಹೊಸ ಸರ್ಕಾರದ ಜೊತೆ ಕೆಲಸ ಮಾಡಲು ಉತ್ಸುಕರಾಗಿದ್ದೇವೆ ಎಂದು ಅಮೆರಿಕ ವಕ್ತಾರ ನೆಡ್ ಪ್ರೈಸ್ ಹೇಳಿದ್ದರು.

ಇಮ್ರಾನ್ ಖಾನ್ ಪದಚ್ಯುತಿಯಲ್ಲಿ ಅಮೆರಿಕ ಕೈವಾಡವಿದೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದ ನೆಡ್ ಪ್ರೈಸ್, ಈ ವಿಚಾರದಲ್ಲಿ ನಾವು ಸ್ಪಷ್ಟ ಸಂದೇಶ ನೀಡಲು ಬಯಸುತ್ತೇವೆ. ಇಂತಹ ಆರೋಪದಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಸ್ಪಷ್ಟಪಡಿಸಿದ್ದರು.

ವಿರೋಧ ಪಕ್ಷಗಳು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಸಂಸತ್ತಿನಲ್ಲಿ ಅವಿಶ್ವಾಸ ನಿರ್ಣಯ ಮಂಡನೆ ಮಾಡಿದ್ದವು. ನಿರ್ಣಯದಲ್ಲಿ ಸೋಲು ಕಂಡು ಇಮ್ರಾನ್ ಖಾನ್ ಪ್ರಧಾನಿ ಪಟ್ಟ ಕಳೆದುಕೊಂಡಿದ್ದಾರೆ.

ಪಾಕಿಸ್ತಾನದ ನೂತನ ಪ್ರಧಾನಿಯಾಗಿ ಶಾಹಬಾಜ್ ಷರೀಫ್‌ ಆಯ್ಕೆಯಾಗಿದ್ದಾರೆ. ಸೋಮವಾರ ನೂತನ ಸಚಿವ ಸಂಪುಟದ ಪ್ರಮಾಣ ವಚನ ನಡೆಯಬೇಕಿತ್ತು. ಆದರೆ ಸಮಾರಂಭ ಕೊನೆ ಕ್ಷಣದಲ್ಲಿ ಮುಂದೂಡಲ್ಟಟ್ಟಿತು.

English summary
Pakistan former prime minister Imran Khan u-turn over his foreign conspiracy comment he said that he is not against any country including India.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X