• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಭಾರತಕ್ಕೆ ಮಾತ್ರವಲ್ಲ, ವಿಶ್ವಕ್ಕೇ ಬೆದರಿಕೆ ಒಡ್ಡಿದ ಇಮ್ರಾನ್ ಖಾನ್ !

|
   ಇಡೀ ಪ್ರಪಂಚದಲ್ಲಿರುವ ಮುಸ್ಲೀಮರು ದಂಗೆ ಏಳ್ತಾರಂತೆ..! | Oneindia Kananda

   ಇಸ್ಲಾಮಾಬಾದ್, ಆಗಸ್ಟ್ 15: ಜಮ್ಮು ಮತ್ತು ಕಾಶ್ಮೀರದ ವಿಷಯದಲ್ಲಿ ಭಾರತ ತೆಗೆದುಕೊಂದ ನಿರ್ಧಾರವನ್ನು ಅಂತಾರಾಷ್ಟ್ರೀಯ ಸಮುದಾಯ ಬೆಂಬಲಿಸಿದರೆ, ಮುಸ್ಲಿಮರು ದಂಗೆ ಏಳಬೇಕಾಗುತ್ತದೆ ಎಂದು ಪಾಕ್ ಪ್ರಧಾನಿ ಇಮ್ರಾನ್ ಖಾನ್ ನೇರವಾಗಿಯೇ ಬೆದರಿಕೆ ಒಡ್ಡಿದ್ದಾರೆ.

   ಜಮ್ಮು ಮತ್ತು ಕಾಶೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ 370 ನೇ ವಿಧಿಯನ್ನು ಭಾರತ ಸರ್ಕಾರ ರದ್ದುಗೊಳಿಸಿದ ನಡೆಗೆ ಸಂಬಂಧಿಸಿದಂತೆ ಯಾವುದೇ ದೇಶ ಭಾರತವನ್ನು ಬೆಂಬಲಿಸಿದ್ದೇ ಆದರೆ, ಆ ದೇಶದಲ್ಲಿರುವ ಮುಸ್ಲಿಮರು ದಂಗೆ ಏಳುತ್ತಾರೆ ಎಂದು ಖಾನ್ ಹೇಳಿದರು.

   ಆರ್ಟಿಕಲ್ 370 ರದ್ದು: ಜಾಗತಿಕ ಮಟ್ಟದಲ್ಲಿ ಪಾಕಿಸ್ತಾನ 'ಏಕಾಂಗಿ'

   "ಭಾರತದ ವಿರುದ್ಧ ವಿಶ್ವ ಒಂದಾಗಬೇಕು. ಅದು ತನ್ನ ನಡೆಯಿಂದ ಹಿಂದೆ ಸರಿಯುವಂತೆ ಒತ್ತಡ ಹೇರಬೇಕು. ಇಲ್ಲವೆಂದರೆ ಮುಸ್ಲಿಮರಿಂದ ಭಾರೀ ಗಲಭೆ ಎದುರಿಸಬೇಕಾಗುತ್ತದೆ" ಎಂದು ಇಮ್ರಾನ್ ಖಾನ್ ಎಚ್ಚರಿಸಿದರು.

   ಭಾರತ ಬಾಲಕೋಟ್ ಏರ್ ಸ್ಟ್ರೈಕ್ ನಡೆಸಿದ್ದು ಸತ್ಯ: ಒಪ್ಪಿಕೊಂಡ ಇಮ್ರಾನ್ ಖಾನ್

   "ಭಾರತ ಆಕ್ರಮಿತ ಕಾಶ್ಮೀರ(ಐಒಕೆ)ಯಲ್ಲಿ ಕಳೆದ 12 ದಿನಗಳಿಂದ ಕರ್ಫ್ಯೂ ಜಾರಿಯಲ್ಲಿದೆ. ಜೊತೆಗೆ ಹೆಚ್ಚುವರಿ ಸೇನೆಯನ್ನು ನಿಯೋಜನೆ ಮಾಡಲಾಗಿದೆ. ಆರೆಸ್ಸೆಸ್ 'ಗೂಂಡಾ'ಗಳನ್ನು ಸ್ಥಳಕ್ಕೆ ಕಳಿಸಲಾಗುತ್ತಿದೆ. ಸಂವಹನದ ಎಲ್ಲಾ ಹಾದಿಗಳನ್ನೂ ಮುಚ್ಚಲಾಗಿದೆ. ಈ ಜಗತ್ತು ಇನ್ನೊಂದು ಹತ್ಯಾಕಾಂಡವನ್ನು ಮೌನವಾಗಿಯೇ ವೀಕ್ಷಿಸಲು ಕಾದು ಕುಳಿತಿದೆಯೇ? ಹಾಗೊಮ್ಮೆ ಆದರೆ ಮುಸ್ಲಿಮರ ಪ್ರತಿಕ್ರಿಯೆಯನ್ನು ಎದುರಿಸಬೇಕಾಗುತ್ತದೆ. ಹಿಂಸೆಗೆ ಸಾಕ್ಷಿಯಾಗಬೇಕಾಗುತ್ತದೆ ಎಂದು ನಾನು ಈಗಲೇ ಎಚ್ಚರಿಕೆ ನೀಡುತ್ತೇನೆ" ಎಂದು ಇಮ್ರಾನ್ ಖಾನ್ ಹೇಳಿದ್ದಾರೆ.

   English summary
   Pakistan PM Imran Khan warns of Muslim radicalization if the international community supports India for it's JK move.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X