ಯೆಮೆನ್ ಜೈಲಿನ ಮೇಲೆ ವೈಮಾನಿಕ ದಾಳಿ: 100 ಕೈದಿಗಳ ಸಾವು
ಯೆಮೆನ್, ಜನವರಿ 21: ಯೆಮೆನ್ ಜೈಲಿನ ಮೇಲೆ ವೈಮಾನಿಕ ದಾಳಿ ನಡೆದಿದ್ದು, ಪರಿಣಾಮ 100 ಕೈದಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ.
ಹೌತಿ ಬಂಡುಕೋರರಿಂದ ಮತ್ತೊಂದು ಭೀಕರ ದಾಳಿ ನಡೆದಿದೆ. ಯೆಮೆನ್ನ ಸಾದಾ ಜೈಲಿನ ಮೇಲೆ ಬಂಡುಕೋರರು ವೈಮಾನಿಕ ದಾಳಿ ನಡೆಸಿದ್ದು, 100ಕ್ಕೂ ಅಧಿಕ ಕೈದಿಗಳು ಮೃತಪಟ್ಟಿದ್ದಾರೆ. ಅಲ್ಲದೇ 200ಕ್ಕೂ ಅಧಿಕ ಕೈದಿಗಳು ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.
ಇದುವರೆಗೆ 100 ಅಧಿಕ ಶವಗಳನ್ನು ಹೊರ ತೆಗೆಯಲಾಗಿದೆ. ಕಟ್ಟಡದ ಅವಶೇಷಗಳಡಿ ಇನ್ನಷ್ಟು ಕೈದಿಗಳ ಶವಗಳು ಸಿಲುಕಿರುವ ಸಾಧ್ಯತೆ ಇದೆ. 200ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ಸಾಗಿಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

'ಯೆಮೆನ್ನ ಸಾದಾ ಜೈಲಿನ ಮೇಲೆ ಇರಾನ್ ಬೆಂಬಲಿತ ಹೌತಿ ಬಂಡುಕೋರರು ನಡೆಸಿದ ದಾಳಿಯಿಂದ ಜೈಲಿನ ಕಟ್ಟಡ ಧ್ವಂಸವಾಗಿದೆ. ಕಟ್ಟಡದ ಅವಶೇಷಗಳಡಿ ಸಿಲುಕಿದವರನ್ನು ರಕ್ಷಣೆ ಮಾಡಲಾಗುತ್ತಿದೆ. ಸೌದಿಯ ರಕ್ಷಣಾ ಪಡೆಗಳು ಇಲ್ಲಿಗೆ ಧಾವಿಸುತ್ತಿವೆ' ಎಂದು ಯೆಮೆನ್ ರೆಡ್ಕ್ರಾಸ್ ಸಮಿತಿಯ ಅಧಿಕಾರಿ ಬಶೀರ್ ಒಮರ್ ತಿಳಿಸಿದ್ದಾರೆ.
ಇತ್ತೀಚೆಗಷ್ಟೇ, ಸಂಯುಕ್ತ ಅರಬ್ ಸಂಸ್ಥಾನ (ಯುಎಇ)ದ ರಾಜಧಾನಿಯಲ್ಲಿರುವ ಪೆಟ್ರೋಲ್ ಬಂಕ್‌ಗಳ ಮೇಲೆ ಹೌತಿ ಬಂಡುಕೋರರು ದಾಳಿ ಮಾಡಿದ ಬೆನ್ನಲ್ಲೇ, ಸೌದಿ ಅರೆಬಿಯಾ ನೇತೃತ್ವದ ಮೈತ್ರಿ ಪಡೆಗಳು ಯೆಮೆನ್ ಮೇಲೆ ವೈಮಾನಿಕ ದಾಳಿ ನಡೆಸಿತ್ತು. ಈ ದಾಳಿಯಲ್ಲಿ 14 ಮಂದಿ ಸಾವಿಗೀಡಾಗಿದ್ದಾರೆ.
ಯೆಮೆನ್ ರಾಜಧಾನಿ ಸನಾ ಮೇಲೆ ಈ ಬಾಂಬ್ ದಾಳಿ ನಡೆದಿದ್ದು, ಆ ಮೂಲಕ ಮಧ್ಯ ಪ್ರಾಚ್ಯದಲ್ಲಿ ಮತ್ತೆ ಬಾಂಬುಗಳ ಸದ್ದು ಕೇಳತೊಡಗಿದೆ.
ಘಟನೆಯಲ್ಲಿ 14 ಮಂದಿ ಸಾವಿಗೀಡಾಗಿದ್ದಾರೆ ಎಂದು ಅಲ್ಲಿಂದ ಬಂದ ಪ್ರಾಥಮಿಕ ವರದಿಯಿಂದ ಗೊತ್ತಾಗಿದೆ. ದಾಳಿಯಲ್ಲಿ ಸೇನೆಯ ಮಾಜಿ ಅಧಿಕಾರಿಯೊಬ್ಬರ ಮನೆ ಕೂಡ ಹಾನಿಗೀಡಾಗಿದೆ. ಘಟನೆಯಲ್ಲಿ ಅಧಿಕಾರಿ, ಅವರ ಪತ್ನಿ, 25 ವರ್ಷದ ಅವರ ಮಗ ಹಾಗೂ ಕುಟುಂಬಸ್ಥರು ಸಾವಿಗೀಡಾಗಿದ್ದಾರೆ ಎಂದು ರಾಯಿಟರ್ಸ್ ವರದಿ ಮಾಡಿದೆ.
ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ)ನ ರಾಜಧಾನಿ ಅಬುಧಾಬಿಯ ಪೆಟ್ರೋಲ್ ಟ್ಯಾಂಕ್‌ಗಳ ಮೇಲೆ ಇರಾನ್ ಬೆಂಬಲಿತ ಯೆಮೆನ್ ಮೂಲದ ಹೌತಿ ಬಂಡುಕೋರರು ಸೋಮವಾರ ನಡೆಸಿರುವ ಡ್ರೋನ್ ದಾಳಿಯಲ್ಲಿ ಮೂವರು ಸಾವನ್ನಪ್ಪಿ, ಆರು ಜನರು ಗಾಯಗೊಂಡಿದ್ದರು.
Recommended Video
ಸಾವಿಗೀಡಾದವರಲ್ಲಿ ಇಬ್ಬರು ಭಾರತೀಯರು ಮತ್ತು ಓರ್ವ ಪಾಕಿಸ್ತಾನಿ ಪ್ರಜೆ ಇದ್ದರು. ಈ ದಾಳಿಗೆ ಪ್ರತೀಕಾರವಾಗಿ, ಮಂಗಳವಾರ ಯೆಮೆನ್ ರಾಜಧಾನಿ ಮೇಲೆ ದಾಳಿ ನಡೆದಿದೆ ಎಂದು ಗೊತ್ತಾಗಿದೆ.
-
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
B Khata: ಬಿ ಖಾತಾದಿಂದ ಎ ಖಾತಾ: ಹಳೆಯ ಗೈಡ್ಲೈನ್ ವ್ಯಾಲ್ಯೂ ವಿಧಿಸಲು ವಿಧಾನಸಭೆಯಲ್ಲಿ ಚರ್ಚೆ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್









Click it and Unblock the Notifications