ಚೀನಾ ನೆಲದಲ್ಲಿ ನಿಂತು ಲಡಾಖ್ ಬಗ್ಗೆ ಉಲ್ಲೇಖಿಸಿದ ಜೈಶಂಕರ್
ನವದೆಹಲಿ, ಆಗಸ್ಟ್ 19: ಲಡಾಖ್‌ನ ಗಡಿಯಲ್ಲಿ ಬೀಜಿಂಗ್‌ನ ಕ್ರಮಗಳು ಭಾರತ ಮತ್ತು ಚೀನಾ ನಡುವಿನ ಸಂಬಂಧವನ್ನು "ಅತ್ಯಂತ ಕಠಿಣ ಹಂತ"ಕ್ಕೆ ತೆಗೆದುಕೊಂಡು ಹೋಗುತ್ತಿವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ.
ರಷ್ಯಾದ ತೈಲವನ್ನು ಖರೀದಿಸುವ ಭಾರತದ ನಿರ್ಧಾರದ ಬಗ್ಗೆ ಅವರು ಉಲ್ಲೇಖಿಸಿದ್ದಾರೆ. ಕಳೆದ ವರ್ಷದ ಧಂಗೆ ನಂತರ ಮ್ಯಾನ್ಮಾರ್‌ನ ಜುಂಟಾದೊಂದಿಗಿನ ದೇಶದ ಒಪ್ಪಂದವನ್ನು ಜೈಶಂಕರ್ ಸಮರ್ಥಿಸಿಕೊಂಡರು. ಥಾಯ್ಲೆಂಡ್‌ನ ಚುಲಾಂಗ್‌ಕಾರ್ನ್ ವಿಶ್ವವಿದ್ಯಾನಿಲಯದಲ್ಲಿ ನಡೆದ ಸಂವಾದದ ಸಂದರ್ಭದಲ್ಲಿ ಅವರು ಮಾತನಾಡಿದರು.
ಚೀನಾ ಮತ್ತು ಭಾರತದ ನಡುವಿನ ಸಂಬಂಧ ಎರಡು ಕಡೆ ಹಿತಾಸಕ್ತಿಗಳನ್ನು ಹೇಗೆ ಸಮನ್ವಯಗೊಳಿಸುತ್ತವೆ ಎಂಬುದರ ಮೇಲೆ ಅವಲಂಬಿತವಾಗಿದೆ. ಭಾರತ ಮತ್ತು ಚೀನಾ ಒಟ್ಟಿಗೆ ಸೇರಿದಾಗ 'ಏಷಿಯನ್ ಸೆಂಚೂರಿ' ಆಗುತ್ತದೆ ಎಂಬ ಚೀನಾದ ನಾಯಕ ಡೆಂಗ್ ಕ್ಸಿಯೋಪಿಂಗ್ ಹೇಳಿಕೆಯನ್ನು ನೆನಪಿಸಿಕೊಂಡರು. "ಆದರೆ ಭಾರತ ಮತ್ತು ಚೀನಾ ಒಟ್ಟಿಗೆ ಬರದಿದ್ದರೆ ಏಷಿಯನ್ ಸೆಂಚೂರಿ ಏನಾಗುತ್ತದೆ ಎಂಬುದು ಕಷ್ಟಕರವಾಗಿರುತ್ತದೆ. ಭಾರತ-ಚೀನಾ ಸಂಬಂಧಗಳು ಎಲ್ಲಿಗೆ ಹೋಗುತ್ತಿವೆ ಎಂಬುದೇ ಇಂದಿನ ದೊಡ್ಡ ಪ್ರಶ್ನೆಗಳಲ್ಲಿ ಒಂದಾಗಿದೆ" ಎಂದು ಹೇಳಿದರು.

ಲಡಾಖ್ ವಿವಾದದ ಬಗ್ಗೆ ಉಲ್ಲೇಖಿಸಿದ ಜೈಶಂಕರ್:
ಕಳೆದ ಎರಡು ವರ್ಷಗಳಿಂದ ಲಡಾಖ್ ಸೆಕ್ಟರ್‌ನಲ್ಲಿ ಚೀನಾದ ನಡುವಳಿಕೆಗಳು ಬಿಕ್ಕಟ್ಟು ಸೃಷ್ಟಿಸುತ್ತಿವೆ. ನಮ್ಮ ಗಡಿ ಪ್ರದೇಶಗಳಲ್ಲಿ ಚೀನೀಯರು ಏನು ಮಾಡಿದರು ಎಂಬುದನ್ನು ಗಮನಿಸಿದಾಗ ಎರಡು ರಾಷ್ಟ್ರಗಳ ನಡುವಿನ ಸಂಬಂಧವು ಕಷ್ಟಕರ ಹಂತಕ್ಕೆ ತಲುಪಿರುವುದು ಗೊತ್ತಾಗುತ್ತದೆ ಎಂದರು.
ವಾಸ್ತವಿಕ ಗಡಿಯಲ್ಲಿನ ಪರಿಸ್ಥಿತಿಯನ್ನು ತಿಳಿಗೊಳಿಸುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಬೇಕಿದೆ ಎಂದು ಹೇಳಿದ್ದಾರೆ. ಗಡಿ ಪ್ರದೇಶಗಳಲ್ಲಿ ಶಾಂತಿ ಮತ್ತು ನೆಮ್ಮದಿ ಇಲ್ಲದೆ ಒಟ್ಟಾರೆ ಸಂಬಂಧವನ್ನು ಸಾಮಾನ್ಯೀಕರಿಸಲು ಸಾಧ್ಯವಿಲ್ಲ ಎಂದು ಜೈಶಂಕರ್ ಇತ್ತೀಚಿನ ತಿಂಗಳುಗಳಲ್ಲಿ ಪದೇ ಪದೇ ಹೇಳುತ್ತಿದ್ದಾರೆ.
ಇತರ ದೇಶಗಳ ಟೀಕೆಗಳ ಹೊರತಾಗಿಯೂ ರಷ್ಯಾದ ತೈಲವನ್ನು ಖರೀದಿಸುವ ಭಾರತದ ನಿರ್ಧಾರದ ಕುರಿತಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಜೈಶಂಕರ್, ಈ ವಿಷಯದಲ್ಲಿ ವಿಭಿನ್ನ "ತೀರ್ಪಿನ ಮಾನದಂಡಗಳು" ಮತ್ತು "ಕೆಲವೊಮ್ಮೆ ಎರಡು ರೀತಿಯ ಮಾನದಂಡಗಳು" ಇರುತ್ತವೆ ಎಂದು ಹೇಳಿದರು. "ನಾವು ಕೇವಲ ತೈಲ ಆಮದುದಾರರಲ್ಲ ಮತ್ತು ತೈಲದ ಮೇಲೆ ಯಾವುದೇ ನಿರ್ಬಂಧಗಳಿಲ್ಲ. ಇತರ ದೇಶಗಳು ಮತ್ತು ಪ್ರದೇಶಗಳು ಈ ವಿಷಯದ ಬಗ್ಗೆ ಬಹಳ ಸ್ಪಷ್ಟವಾಗಿದೆ. ಆದರೆ ಕೆಲವು ರಾಷ್ಟ್ರಗಳು ತಮ್ಮ ಸ್ವಂತ ಹಿತಾಸಕ್ತಿಗಳನ್ನು ನೋಡಿಕೊಂಡಿವೆ ಎಂದರು.
"ನಮ್ಮ ಹಿತಾಸಕ್ತಿಗಳನ್ನು ನೋಡಿಕೊಳ್ಳಲು ನಮಗೆ ಅವಕಾಶ ನೀಡುವುದು ಸಮಂಜಸವಾಗಿದೆ ಎಂದು ನಾನು ಭಾವಿಸುತ್ತೇನೆ. ವಿಶೇಷವಾಗಿ ನಾವು ಕಡಿಮೆ ಆದಾಯದ ಸಮಾಜವನ್ನು ಹೊಂದಿರುವುದರಿಂದ ನಮಗೆ ಇಂಧನ ಬೆಲೆಗಳ ಹೆಚ್ಚಳವು ನಿಜವಾಗಿಯೂ ಆತಂಕವನ್ನು ಉಂಟು ಮಾಡುತ್ತದೆ," ಎಂದು ಜೈಶಂಕರ್ ಹೇಳಿದರು.
-
ಮುದ್ದೇನಹಳ್ಳಿ ಸತ್ಯಸಾಯಿ ಗ್ರಾಮದಲ್ಲಿ CSR ರಾಷ್ಟ್ರೀಯ ಸಮಾವೇಶ: ವಿಕಸಿತ ಭಾರತ ಚರ್ಚೆ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಎಲ್ಪಿಜಿ ಸಿಲಿಂಡರ್ ಬೆಲೆ ಏರಿಕೆ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್ಗಳಲ್ಲಿ ಆಹಾರ ದರ ಏರಿಸಲು ಚಿಂತನೆ -
ಐಪಿಎಲ್ 2026ಕ್ಕೆ ಮುಹೂರ್ತ ಫಿಕ್ಸ್: ಇಲ್ಲಿದೆ ಮಾಹಿತಿ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ












Click it and Unblock the Notifications