ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶ್ರೀಲಂಕಾದಲ್ಲಿ ಭಾರತ ಮೂಲದ ಪತ್ರಕರ್ತನ ಬಂಧನ

|
Google Oneindia Kannada News

ಕೊಲಂಬೋ, ಮೇ 3: ಶ್ರೀಲಂಕಾದ ಕೊಲೊಂಬೋದಲ್ಲಿ ಈಸ್ಟರ್‌ ಭಾನುವಾರದಂದು ಚರ್ಚ್ ಹಾಗೂ ಹೋಟೆಲ್‌ಗಳ ಮೇಲೆ ನಡೆದ ಆತ್ಮಾಹುತಿ ಬಾಂಬ್ ದಾಳಿ ಬಳಿಕ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ.

ಶಾಲೆಯೊಂದಕ್ಕೆ ಅನಧಿಕೃತವಾಗಿ ಹೋಗಲು ಯತ್ನಿಸುತ್ತಿದ್ದ ಭಾರತ ಮೂಲದ ಪತ್ರಕರ್ತನೊಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಾಂಬ್ ದಾಳಿಯ ಬಗ್ಗೆ ಶ್ರೀಲಂಕಾ ಕ್ಕೆ ಎಚ್ಚರಿಕೆ ನೀಡಿತ್ತು ಭಾರತಬಾಂಬ್ ದಾಳಿಯ ಬಗ್ಗೆ ಶ್ರೀಲಂಕಾ ಕ್ಕೆ ಎಚ್ಚರಿಕೆ ನೀಡಿತ್ತು ಭಾರತ

ಬಂಧಿತ ಪತ್ರಕರ್ತನನ್ನು ಭಾರತದ ದೆಹಲಿ ಮೂಲದ ಸಿದ್ದಿಕ್ ಅಹ್ಮದ್ ಡ್ಯಾನಿಶ್ ಎಂದು ಗುರುತಿಸಲಾಗಿದೆ. ಇವರು ನ್ಯೂಸ್ ಏಜೆನ್ಸಿಯೊಂದರಲ್ಲಿ ಫೋಟೊ ಜರ್ನಲಿಸ್ಟ್‌ ಆಗಿ ಕೆಲಸ ನಿರ್ವಹಿಸುತ್ತಿದ್ದಾರೆ.

India-based photo journalist arrested on trespassing charges in Sri Lanka

ಶ್ರೀಲಂಕಾದಲ್ಲಿ ಈಸ್ಟರ್ ಹಬ್ಬದ ದಿನ ನಡೆದ ಸರಣಿ ಆತ್ಮಾಹುತಿ ಬಾಂಬ್ ಸ್ಫೋಟದಲ್ಲಿ ಸುಮಾರು 250 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿ, 500 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದರು.

ಸಿದ್ದಿಕ್ ಅಹ್ಮದ್ ಏಪ್ರಿಲ್ 21 ರಂದು ನಡೆದ ಸರಣಿ ಬಾಂಬ್ ಸ್ಫೋಟದ ನಂತರ ಶ್ರೀಲಂಕಾದಲ್ಲಿ ಆದ ಪರಿಣಾಮದ ಬಗ್ಗೆ ವರದಿ ಮಾಡಲು ಹೋಗಿದ್ದರು. ಸೇಂಟ್ ಸೆಬಾಸ್ಟಿಯಾನ್ ಚರ್ಚ್‍ನಲ್ಲಿ ಬಾಂಬ್ ಬ್ಲಾಸ್ಟ್ ಆದಾಗ ಅಲ್ಲಿ ಸಾವನ್ನಪ್ಪಿದ ವಿದ್ಯಾರ್ಥಿಗಳ ಬಗ್ಗೆ ಮಾಹಿತಿ ಪಡೆಯಲು ಶಾಲೆಗೆ ಹೋಗಿದ್ದಾರೆ.

ಶ್ರೀಲಂಕಾ ಸ್ಫೋಟ: 9 ದಾಳಿಕೋರರಲ್ಲಿ ಮಹಿಳೆ ಇರುವ ಕುರಿತು ಮಾಹಿತಿ ಶ್ರೀಲಂಕಾ ಸ್ಫೋಟ: 9 ದಾಳಿಕೋರರಲ್ಲಿ ಮಹಿಳೆ ಇರುವ ಕುರಿತು ಮಾಹಿತಿ

ಆ ಶಾಲೆಗೆ ಹೋಗಲು ಅನುಮತಿ ಇಲ್ಲದಿದ್ದರೂ ಅನಧಿಕೃತವಾಗಿ ಶಾಲೆಗೆ ಪ್ರವೇಶ ಬಯಸಿದ ಕಾರಣ ಶ್ರೀಲಂಕಾ ಪೊಲೀಸರು ಸಿದ್ದಿಕ್ ನನ್ನು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

English summary
An India-based photo journalist, who was in Sri Lanka to cover the aftermath of Easter Sunday bombings, was arrested by Sri Lankan police for alleged unauthorised entry into a school.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X