• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

2 ಗಂಟೆಯಲ್ಲೇ ಅಂತ್ಯವಾದ ಭಾರತ-ಚೀನಾ ವಿದೇಶಾಂಗ ಸಚಿವರ ಚರ್ಚೆ

|

ನವದೆಹಲಿ, ಸಪ್ಟೆಂಬರ್.10: ಭಾರತ-ಚೀನಾ ವಿದೇಶಾಂಗ ಸಚಿವರ ನಡುವಿನ ಸಭೆಯು ಎರಡು ಗಂಟೆಗಳಲ್ಲೇ ಅಂತ್ಯವಾಗಿದೆ. ರಷ್ಯಾದ ಮಾಸ್ಕೋದಲ್ಲಿ ನಡೆದ ಶಾಂಘೈ ಸಹಕಾರ ಸಂಸ್ಥೆಯ ಸಭೆಯಲ್ಲಿ ಉಭಯ ರಾಷ್ಟ್ರಗಳ ವಿದೇಶಾಂಗ ಸಚಿವರು ಭಾಗವಹಿಸಿದ್ದರು.

ಭಾರತ ಮತ್ತು ಚೀನಾದ ಪೂರ್ವ ಭಾಗದ ಲಡಾಖ್ ಗಡಿ ಸಂಘರ್ಷದ ನಡೆಯುತ್ತಿರುವ ಗಡಿ ಉಲ್ಲಂಘನೆ ಮತ್ತು ಉದ್ವಿಗ್ನ ಪರಿಸ್ಥಿತಿಯ ಬಗ್ಗೆ ಭಾರತದ ವಿದೇಶಾಂಗ ಸಚಿವ ಎಸ್.ಜೈಶಂಕರ್ ಪ್ರಸ್ತಾಪಿಸಿದ್ದಾರೆ. ರಾತ್ರಿ 9 ಗಂಟೆಗೆ ಆರಂಭವಾದ ಸಭೆಯಲ್ಲಿ ಚೀನಾದ ವಿದೇಶಾಂಗ ಸಚಿವ ವಾಂಗ್ ಯೀ ಜೊತೆಗೆ ಈ ಬಗ್ಗೆ ಚರ್ಚಿಸಿದ್ದಾರೆ.

ಭಾರತ-ರಷ್ಯಾ-ಚೀನಾ ಮಾತುಕತೆ: ಸಹಕಾರದ ಮಂತ್ರ

ಲಡಾಖ್ ಗಡಿಯಲ್ಲಿ ಪರಿಸ್ಥಿತಿ ತಿಳಿಗೊಳಿಸುವುದರ ಜೊತೆಗೆ ಶಾಂತಿ ಸ್ಥಾಪನೆಗೆ ಒತ್ತು ನೀಡುವ ನಿಟ್ಟಿನಲ್ಲಿ ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಸೇನಾ ನಿಷ್ಕ್ರಿಯಗೊಳಿಸುವ ಬಗ್ಗೆ ಉಭಯ ನಾಯಕರು ಚರ್ಚೆ ನಡೆಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಪ್ಯಾಂಗಾಂಗ್ ತ್ಸೋ ಸರೋವರದ ಬಳಿ ಚೀನಾ ಅಸ್ತಿತ್ವ:

   Indo China Clash : ಇದು ಅಪ್ಪಟ ಸುಳ್ಳು, ಇಲ್ಲಿದೆ ಸತ್ಯವಾದ ಕಥೆ | Oneindia Kannada

   ಭಾರತ-ಚೀನಾ ಗಡಿಯಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಳ್ಳುತ್ತಿದೆ. ಪ್ಯಾಂಗಾಂಗ್ ತ್ಸೋ ಸರೋವರದ ದಕ್ಷಿಣ ಪ್ರದೇಶದಲ್ಲಿ ಚೀನಾದ ಪೀಪಲ್ಸ್ ಲಿಬರೇಷನ್ ಆರ್ಮಿಯು ತನ್ನ ಅಸ್ತಿತ್ವವನ್ನು ಸಾಧಿಸಿಕೊಳ್ಳುವುದಕ್ಕೆ ಸೇನಾ ಸಾಮರ್ಥ್ಯವನ್ನು ಹೆಚ್ಚಿಕೊಳ್ಳುತ್ತಿದೆ. ನಿಗದಿತ ಗಡಿ ರೇಖೆಯಲ್ಲಿ ಸೇನಾ ಪ್ರಮಾಣ, ಶಸ್ತ್ರಾಸ್ತ್ರಗಳು, ಯುದ್ಧ ಟ್ಯಾಂಕರ್, ಹೆಚ್ಚುವರಿ ಸೇನೆಯನ್ನು ನಿಯೋಜನೆ ಮಾಡುತ್ತಿರುವುದು ಮತ್ತಷ್ಟು ಪರಿಸ್ಥಿತಿ ಉದ್ವಿಗ್ನಗೊಳ್ಳುವಂತೆ ಮಾಡುತ್ತಿದೆ.

   English summary
   India China Foriegn Ministers Meeting End After Two Hours Discussion On Border Issue.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X