ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ತಾಲಿಬಾನ್ ನಾಯಕರ ಜತೆ ಭಾರತ ರಾಯಭಾರಿ ಮಾತುಕತೆ

|
Google Oneindia Kannada News

ನವದೆಹಲಿ, ಆಗಸ್ಟ್ 31: ನಮ್ಮ ವಿರುದ್ಧ ಭಯೋತ್ಪಾದನೆಗೆ ಅವಕಾಶ ಕೊಡಬೇಡಿ ಎಂದು ತಾಲಿಬಾನ್‌ಗೆ ಭಾರತ ತಾಕೀತು ಮಾಡಿದೆ.

ಕತಾರ್‌ನಲ್ಲಿರುವ ಭಾರತದ ರಾಯಭಾರಿ ಮಂಗಳವಾರ ತಾಲಿಬಾನ್‌ನ ಉನ್ನತ ನಾಯಕರೊಂದಿಗೆ ಮಾತುಕತೆ ನಡೆಸಿದ್ದಾರೆ. ತಾಲಿಬಾನ್ ಉಗ್ರ ಸಂಘಟನೆಯು ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡ ಬಳಿಕ ನಡೆದ ಮೊದಲ ಔಪಚಾರಿಕ ಮಾತುಕತೆ ಇದಾಗಿದೆ.

ಭಾರತ ವಿರೋಧಿ ಉಗ್ರಗಾಮಿಗಳು ಅಫ್ಘಾನಿಸ್ತಾನದ ನೆಲವನ್ನು ಬಳಸಿ ದಾಳಿ ನಡೆಸಬಹುದು ಎಂಬ ಆತಂಕವನ್ನು ಮಿತ್ತಲ್ ವ್ಯಕ್ತಪಡಿಸಿದ್ದಾರೆ. ಅಫ್ಘಾನಿಸ್ತಾನ ನೆಲದ ಮೂಲಕ ಭಾರತೀಯ ವಿರೋಧಿ ಚಟುವಟಿಕೆಗಳು ಮತ್ತು ಭಯೋತ್ಪಾದನೆಗೆ ಯಾವುದೇ ರೀತಿಯಲ್ಲೂ ಬಳಸಲು ಅವಕಾಶ ನೀಡಬಾರದು ಎಂದು ಮಿತ್ತಲ್ ಹೇಳಿದ್ದಾರೆ.

Taliban

ಭಾರತದ ರಾಯಭಾರಿ ದೀಪಕ್ ಮಿತ್ತಲ್ ಅವರು, ತಾಲಿಬಾನ್‌ನ ಕೋರಿಕೆಯ ಮೇರೆಗೆ ದೋಹಾದಲ್ಲಿರುವ ತಾಲಿಬಾನ್‌ನ ರಾಜಕೀಯ ಕಚೇರಿಯ ಮುಖ್ಯಸ್ಥ ಶೇರ್ ಮೊಹಮ್ಮದ್ ಅಬ್ಬಾಸ್ ಸ್ಟಾನೆಕ್‌ಜಾಯ್ ಅವರನ್ನು ಭೇಟಿಯಾಗಿದ್ದಾರೆ.

ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದೊಂದಿಗೆ ನಿಕಟ ಸಂಬಂಧ ಹೊಂದಿರುವ ಕಾರಣ ಭಾರತವು ತಾಲಿಬಾನ್ ಬಗ್ಗೆ ಬಹಳ ಹಿಂದಿನಿಂದಲೂ ಆತಂಕ ಹೊಂದಿದೆ. ದೋಹಾದಲ್ಲಿರುವ ಭಾರತೀಯ ರಾಯಭಾರ ಕಚೇರಿಯಲ್ಲಿ ಮಾತುಕತೆ ನಡೆದಿದ್ದು, ಅಫ್ಘಾನಿಸ್ತಾನದಲ್ಲಿ ಸಿಲುಕಿರುತ ಭಾರತೀಯರ ಸುರಕ್ಷತೆ ಮತ್ತು ಆದಷ್ಟು ಬೇಗ ವಾಪಸಾತಿ ಬಗ್ಗೆ ಚರ್ಚಿಸಲಾಗಿದೆ. ಜತೆಗೆ ಅಲ್ಪಸಂಖ್ಯಾತರು ಸೇರಿದಂತೆ ಭಾರತಕ್ಕೆ ತೆರಳಲು ಇಚ್ಛಿಸುವವರ ಬಗ್ಗೆಯೂ ಚರ್ಚೆ ನಡೆದಿದೆ.

ಅಫ್ಘಾನಿಸ್ತಾನ ಇದೀಗ ಸಂಪೂರ್ಣ ತಾಲಿಬಾನ್ ಕೈವಶವಾಗಿದೆ. ಅಮೆರಿಕ ಮಿಲಿಟರಿ ಸೈನ್ಯ ಕಾಲ್ಕಿತ್ತ ಬೆನ್ನಲ್ಲೇ ಕಾಬೂಲ್ ವಿಮಾನ ನಿಲ್ದಾಣ ಕೂಡ ತಾಲಿಬಾನ್ ಹಿಡಿತದಲ್ಲಿದೆ. ಈ ಘಟನೆ ಬೆನ್ನಲ್ಲೇ ತಾಲಿಬಾನ್ ಮನವಿ ಮೇರೆಗೆ ಭಾರತ ತಾಲಿಬಾನ್ ಪ್ರತಿನಿಧಿಗಳನ್ನು ಭೇಟಿ ಮಾಡಿ ಮಹತ್ವದ ಸಭೆ ನಡೆಸಿದ್ದಾರೆ. ಈ ವೇಳೆ ತಾಲಿಬಾನ್ ಉಗ್ರವಾದ, ಭಾರತ ವಿರೋಧಿ ಚಟುವಟಿಕೆ ನಡೆಸುವುದಿಲ್ಲ ಎಂದು ಭರವಸೆ ನೀಡಿದೆ.

ಭಾರತದ ರಾಯಭಾರಿ ದೀಪಕ್ ಮಿತ್ತಲ್ ಎತ್ತಿದ ಹಲವು ಕಾಳಜಿ ಹಾಗೂ ಸೂಚನೆಗಳನ್ನು ಸೂಕ್ತವಾಗಿ ಪರಿಹರಿಸುವುದಾಗಿ ತಾಲಿಬಾನ್‌ ಪ್ರತಿನಿಧಿಗಳು ಭರವಸೆ ನೀಡಿದ್ದಾರೆ. ಭಾರತದ ಜೊತೆ ಸೌಹಾರ್ಧಯುತ ವಾತಾವರಣ ನಿರ್ಮಿಸುವುದಾಗಿ ಭರವಸೆ ನೀಡಿದ್ದಾರೆ.

ಖತಾರ್‌ನ ದೋಹಾದಲ್ಲಿರುವ ತಾಲಿಬಾನ್ ರಾಜಕೀಯ ಕಚೇರಿಯ ಮನವಿ ಮೇರೆಗೆ ಭಾರತದ ಖತಾರ್ ರಾಯಭಾರಿ ದೀಪಕ್ ಮಿತ್ತಲ್ ತಾಲಿಬಾನ್ ಪ್ರತಿನಿಧಿಗಳನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ. ದೀಪಕ್ ಮಿತ್ತಲ್ ಹಲವು ಪ್ರಶ್ನೆಗಳನ್ನು ಎತ್ತಿ ಚರ್ಚೆ ನಡೆಸಿದ್ದಾರೆ. ಭಾರತದ ಎಲ್ಲಾ ಕಾಳಜಿಯನ್ನು ಸೂಕ್ತವಾಗಿ ಪರಿಹರಿಸುವ ಭರವಸೆಯನ್ನು ತಾಲಿಬಾನ್ ಪ್ರತಿನಿಧಿಗಳು ನೀಡಿದ್ದಾರೆ.

ತಾಲಿಬಾನ್‌ನಲ್ಲಿ ಸಿಲುಕಿರುವ ಭಾರತೀಯರ ಸುರಕ್ಷತೆ, ಭದ್ರತೆ ಹಾಗೂ ಭಾರತಕ್ಕೆ ಆಗಮಿಸಲು ಇಚ್ಚಿಸುವ ಅಲ್ಪಸಂಖ್ಯಾತ ಸಮುದಾಯಗಳ ಸ್ಥಳಾಂತರ ಕುರಿತು ದೋಹಾ ಕಚೇರಿಯಲ್ಲಿ ಚರ್ಚಿಸಲಾಯಿತು.

ಈ ಮಾತುಕತೆಯಲ್ಲಿ ಅಫ್ಘಾನಿಸ್ತಾನ ನೆಲವನ್ನು ಯಾವುದೇ ಕಾರಣಕ್ಕೂ ಭಾರತ ವಿರೋಧಿ ಚಟುವಟಿಕೆ, ಭಾರತ ವಿರುದ್ದ ಭಯೋತ್ಪಾದನೆಗೆ ಬಳಸಿಕೊಳ್ಳಬಾರದು ಎಂದು ದೀಪಕ್ ಮಿತ್ತಲ್ ತಾಲಿಬಾನ್‌ಗಳಿಗೆ ಸೂಚನೆ ನೀಡಿದ್ದಾರೆ.

English summary
India on Tuesday held a meeting with a Taliban leader in Doha on latter’s request. Ambassador of India to Qatar, Deepak Mittal, met Sher Mohammad Abbas Stanekzai, the Head of Taliban’s Political Office. The meeting took place at the Embassy of India, Doha, on the request of the Taliban side.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X