• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ವಿಶ್ವ ಆರೋಗ್ಯ ಸಂಸ್ಥೆ ಕುರಿತು ತನಿಖೆಗೆ ಭಾರತ ಸೇರಿ 62 ರಾಷ್ಟ್ರಗಳ ಒತ್ತಾಯ

|

ಜಿನಿವಾ, ಮೇ 18: ಕೊರೊನಾ ವಿಶ್ವದ 200ಕ್ಕೂ ಹೆಚ್ಚು ರಾಷ್ಟ್ರಗಳನ್ನು ವ್ಯಾಪಿಸಿದೆ. ಕೊರೊನಾ ವೈರಸ್ ಕುರಿತಂತೆ ವಿಶ್ವ ಆರೋಗ್ಯ ಸಂಸ್ಥೆ ನಡೆದುಕೊಂಡ ರೀತಿ ಮತ್ತು ಅದರ ಕ್ರಮಗಳ ಕುರಿತಂತೆ ಸಂಶಯ ವ್ಯಕ್ತಪಡಿಸಿರುವ ವಿಶ್ವದ 62 ರಾಷ್ಟ್ರಗಳು ತನಿಖೆಗೆ ಒತ್ತಾಯಿಸಿ ಸಹಿ ಹಾಕಿವೆ.

ಕೊರೊನಾ ವೈರಸ್ ಅಥವಾ ಕೊವಿಡ್-19 ರೋಗ ಹರಡುವುದನ್ನು ತಡೆಯಲು ವಿಶ್ವ ಆರೋಗ್ಯ ಸಂಸ್ಥೆ ಕೈಗೊಂಡ ಕ್ರಮಗಳ ಬಗ್ಗೆ ತನಿಖೆ ನಡೆಯಬೇಕು ಎಂಬ ಒತ್ತಾಯಕ್ಕೆ ಭಾರತ ಸೇರಿದಂತೆ 62 ದೇಶಗಳು ಬೆಂಬಲ ಸೂಚಿಸಿವೆ.

ಬೆಂಗಳೂರು; ಪಾಸ್‌ ಪೋರ್ಟ್‌ ಸೇವಾ ಕೇಂದ್ರ ಮೇ. 15ರಿಂದ ಆರಂಭ

ಇಂದಿನಿಂದ ಆರಂಭವಾಗಲಿರುವ 73ನೇ ವಿಶ್ವ ಆರೋಗ್ಯ ಸಮಾವೇಶದ (ಡಬ್ಲ್ಯುಎಚ್‌ಎ) ಸಭೆಗೆ ಪ್ರಸ್ತಾಪಿಸಲಾದ ಕರಡು ನಿರ್ಣಯದಲ್ಲಿ ಈ ಮಾಹಿತಿ ಇದ್ದು, ಕೊವಿಡ್-19 ಸಾಂಕ್ರಾಮಿಕ ರೋಗಕ್ಕೆ ಸಂಬಂಧಿಸಿದಂತೆ ವಿಶ್ವ ಆರೋಗ್ಯ ಸಂಸ್ಥೆಯ ಕ್ರಮಗಳು ಮತ್ತು ಮಾರ್ಗಸೂಚಿಗಳ ಕುರಿತು ತನಿಖೆ ನಡೆಸಬೇಕು.

ಕೊರೊನಾ ವೈರಸ್ ಬಿಕ್ಕಟ್ಟಿನ ಬಗ್ಗೆ ನಿಷ್ಪಕ್ಷಪಾತ, ಸ್ವತಂತ್ರ ಮತ್ತು ಸಮಗ್ರ ತನಿಖೆಯಾಗಬೇಕು ಎಂದು ಕರಡಿನಲ್ಲಿ ಒತ್ತಾಯಿಸಲಾಗಿದೆ.

ಸಾವಿನ ಸಂಖ್ಯೆಯಲ್ಲಿ ಬೆಂಗಳೂರಿಗೆ ಪೈಪೋಟಿ ನೀಡುತ್ತಿದೆ ಕಲಬುರಗಿ

ದಕ್ಷಿಣ ಕೊರಿಯಾ, ಬ್ರೆಜಿಲ್ ಬೆಂಬಲ

ದಕ್ಷಿಣ ಕೊರಿಯಾ, ಬ್ರೆಜಿಲ್ ಬೆಂಬಲ

ಐರೋಪ್ಯ ಒಕ್ಕೂಟದ ದೇಶಗಳ ಹೊರತಾಗಿ ಜಪಾನ್, ಬ್ರಿಟನ್, ನ್ಯೂಜಿಲೆಂಡ್, ದಕ್ಷಿಣ ಕೊರಿಯಾ, ಬ್ರೆಜಿಲ್ ಮತ್ತು ಕೆನಡಾಗಳು ಕರಡನ್ನು ಬೆಂಬಲಿಸಿವೆ.

ನಿಷ್ಪಕ್ಷಪಾತ ತನಿಖೆಗೆ ಆಗ್ರಹ

ನಿಷ್ಪಕ್ಷಪಾತ ತನಿಖೆಗೆ ಆಗ್ರಹ

ಕೊರೊನಾ ವೈರಸ್ ಗೆ ವಿಶ್ವ ಆರೋಗ್ಯ ಸಂಸ್ಥೆಯ ಸಂಘಟಿತ ಅಂತಾರಾಷ್ಟ್ರೀಯ ಆರೋಗ್ಯ ಪ್ರತಿಕ್ರಿಯೆಯಿಂದ ಪಡೆದ ಅನುಭವ ಮತ್ತು ಪಾಠಗಳನ್ನು ಪರಿಶೀಲಿಸಲು, ಸೂಕ್ತ ಸಂದರ್ಭದಲ್ಲಿ ಸದಸ್ಯ ರಾಷ್ಟ್ರಗಳೊಂದಿಗೆ ಸಮಾಲೋಚಿಸಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನಗಳನ್ನು ಬಳಸುವುದು ಸೇರಿದಂತೆ, ನಿಷ್ಪಕ್ಷಪಾತ, ಸ್ವತಂತ್ರ ಮತ್ತು ಸಮಗ್ರ ತನಿಖೆ ಪ್ರಕ್ರಿಯೆಯನ್ನು ಪ್ರಾರಂಭಿಸಬೇಕು ಎಂದು ವಿವಿಧ ರಾಷ್ಟ್ರಗಳು ಕರಡಿನಲ್ಲಿ ಒತ್ತಾಯಿಸಿವೆ.

ಮಹಾರಾಷ್ಟ್ರ ಪೊಲೀಸ್ ಮೇಲೆ ಕೊರೊನಾ ಅಟ್ಟಹಾಸ, 1000 ಸಿಬ್ಬಂದಿಗೆ ಸೋಂಕು

ವಿಶ್ವ ಆರೋಗ್ಯ ಸಂಸ್ಥೆ ನಡೆ ಮೇಲೆ ಶಂಕೆ

ವಿಶ್ವ ಆರೋಗ್ಯ ಸಂಸ್ಥೆ ನಡೆ ಮೇಲೆ ಶಂಕೆ

ಇನ್ನು ವಿಶ್ವ ಆರೋಗ್ಯ ಸಂಸ್ಥೆಯು ಕೋವಿಡ್-19ಕ್ಕೆ ಹೇಗೆ ಪ್ರತಿಕ್ರಿಯಿಸಿತು ಎಂಬ ಬಗ್ಗೆ ಸ್ವತಂತ್ರ, ನಿಷ್ಪಕ್ಷಪಾತ ಮತ್ತು ಸಮಗ್ರ ತನಿಖೆಗೆ ನಡೆಸಲು ಒತ್ತಾಯಿಸುತ್ತಿರುವ ಐರೋಪ್ಯ ದೇಶಗಳು ಮತ್ತು ಆಸ್ಟ್ರೇಲಿಯಾ ದೇಶಗಳು ಇತರ ರಾಷ್ಟ್ರಗಳ ಬೆಂಬಲವನ್ನೂ ಯಾಚಿಸುತ್ತಿವೆ. ಆಸ್ಟ್ರೇಲಿಯಾದ ವಿದೇಶಾಂಗ ಸಚಿವರಾದ ಮರಿಸೆ ಪೇನ್ ಅವರು ಈ ಕುರಿತು ಪ್ರತಿಕ್ರಿಯಿಸಿ, ಬಿಕ್ಕಟ್ಟಿನ ಕುರಿತು ತನಿಖೆ ನಡೆಸಲು ಏಕಾಏಕಿ ಡಬ್ಲ್ಯುಎಚ್‌ಒಗೆ ಅವಕಾಶ ನೀಡುವುದು 'ನಮ್ಮನ್ನೇ ಕಳ್ಳ ಬೇಟೆಗಾರ ಮತ್ತು ಗೇಮ್‌ಕೀಪರ್ ಆಗಿ ನೋಡುವಂತೆ ಮಾಡುತ್ತದೆ. ಅಲ್ಲದೆ ಇದು ಮುಂದೆ ಎದುರಾಗಬಹುದಾದ ಸಾಂಕ್ರಾಮಿಕ ರೋಗವನ್ನು ತಡೆಗಟ್ಟಲು ಅಥವಾ ಎದುರಿಸಲು ಮತ್ತು ನಮ್ಮ ನಾಗರಿಕರನ್ನು ಸುರಕ್ಷಿತವಾಗಿಡಲು ಅಂತರರಾಷ್ಟ್ರೀಯ ಸಮುದಾಯವನ್ನು ಸಜ್ಜುಗೊಳಿಸಲು ಸಹಕಾರಿಯಾಗುತ್ತದೆ' ಎಂದು ಹೇಳಿದ್ದಾರೆ.

ಟ್ರಂಪ್ ವಾದ ಕೂಡ ಇದೇ ಆಗಿತ್ತು

ಟ್ರಂಪ್ ವಾದ ಕೂಡ ಇದೇ ಆಗಿತ್ತು

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಾದ ಕೂಡ ಇದೇ ಆಗಿತ್ತು. ವಿಶ್ವ ಆರೋಗ್ಯ ಸಂಸ್ಥೆಯು ನಮಗೆ ಸುಳ್ಳು ಹೇಳಿದೆ. ಈ ರೋಗವು ಸಾಂಕ್ರಾಮಿಕ ಎಂದು ಮೊದಲೇ ತಿಳಿದಿತ್ತು. ಅದರೂ ಯಾರಿಗೂ ಮಾಹಿತಿ ನೀಡಿರಲಿಲ್ಲ, ಚೀನಾದ ಕುರಿತು ಮೃದು ಧೋರಣೆ ಅನುಸರಿಸಿದೆ ಎಂದು ಹೇಳಿಯೇ ವಿಶ್ವ ಆರೋಗ್ಯ ಸಂಸ್ಥೆಗೆ ನೀಡಿದ್ದ ಅನುದಾನವನ್ನು ಕಡಿತಗೊಳಿಸಿದ್ದರು.

English summary
62 countries, including India, have backed a joint effort by Australia and European Union, calling for an independent inquiry into the WHO's response to the COVID-19 pandemic, according to a draft resolution proposed for 73rd World Health Assembly (WHA) meeting beginning today.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X