ಚೀನಾದ ವಿರುದ್ಧ "ವಾಣಿಜ್ಯ ಸಮರ" ಸಾರಿತಾ ಕೇಂದ್ರ ಸರ್ಕಾರ?
ನವದೆಹಲಿ, ಸಪ್ಟೆಂಬರ್.18: ಲಡಾಖ್ ಪೂರ್ವ ಭಾಗದಲ್ಲಿ ಕಾಲ್ಕರೆದು ನಿಂತಿರುವ ಚೀನಾಗೆ ಭಾರತವು ತಿರುಗೇಟು ನೀಡಿದೆ. ಚೀನಾದಿಂದ ಆಮದು ಮಾಡಿಕೊಳ್ಳುವ ಪ್ರಯತಿಯೊಂದು ಎಲ್ಇಡಿ ವಸ್ತುಗಳ ಗುಣಮಟ್ಟವನ್ನು ಕಠಿಣ ಪರೀಕ್ಷೆಗೊಳಪಡಿಸಲು ತೀರ್ಮಾನಿಸಲಾಗಿದೆ.
ಚೀನಾದಿಂದ ಸರಕುಗಳ ಆಮದು ಮಾಡಿಕೊಳ್ಳುವುದಕ್ಕೆ ಭಾರತೀಯ ಸರ್ಕಾರವು ನಿರುತ್ಸಾಹ ತೋರುತ್ತಿದೆ. ಈ ನಿಟ್ಟಿನಲ್ಲಿ ವಿದೇಶಿ ವ್ಯಾಪಾರದ ನಿರ್ದೇಶನಾಲಯವು ಹೆಜ್ಜೆಯಿಟ್ಟಿದ್ದು, ಹೊಸ ಅಧಿಸೂಚನೆ ಹೊರಡಿಸಿದೆ.
ಭಾರತಕ್ಕೆ ಆಮದು ಮಾಡಿಕೊಳ್ಳುವ ಪ್ರತಿಯೊಂದು ಚೀನಾ ವಸ್ತುಗಳ ಗುಣಮಟ್ಟವನ್ನು ಇಂಡಿಯನ್ ಸ್ಟ್ಯಾಂಡೆರ್ಡ್ ಬ್ಯುರೋ ಗುರುತಿಸಿರುವ ಪ್ರಯೋಗಾಲಯಗಳಲ್ಲಿ ಪರೀಕ್ಷೆಗೆ ಒಳಪಡಿಸಲಾಗುತ್ತದೆ. ಇದರ ಬಗ್ಗೆ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸರಕುಗಳ (ಕಡ್ಡಾಯ ನೋಂದಣಿಯ ಅವಶ್ಯಕತೆ) ಆದೇಶ, 2012 ರ ಅಡಿಯಲ್ಲಿ, ವಿದೇಶಿ ವ್ಯಾಪಾರ ನಿರ್ದೇಶನಾಲಯ (ಡಿಜಿಎಫ್ ಟಿ) ಅಧಿಸೂಚನೆಯಲ್ಲಿ ತಿಳಿಸಿದೆ.

ಆಮದು ಮಾಡಿಕೊಂಡ ವಸ್ತುಗಳ ಬಗ್ಗೆ ಆದೇಶ
ವಾಣಿಜ್ಯ ಸಚಿವಾಲಯದ ವ್ಯಾಪ್ತಿಗೆ ಬರುವ ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ (ಬಿಐಎಸ್) ದೇಶದ ಪ್ರಮುಖ ಬಂದರುಗಳಾದ ಕಾಂಡ್ಲಾ, ಪ್ಯಾರಡೀಪ್, ಕೊಚ್ಚಿ, ಮುಂಬೈಗಳಿಂದ ಆಮದು ಮಾಡಿಕೊಳ್ಳುವ ಎಲ್‌ಇಡಿ ಉತ್ಪನ್ನಗಳ ಬಗ್ಗೆ ತನಿಖೆ ನಡೆಸುವಂತೆ ಆದೇಶಿಸಿದೆ.

DGFT ಅಧಿಸೂಚನೆಯಲ್ಲಿರುವ ಅಂಶ
- ಆಮದು ಮಾಡಿಕೊಳ್ಳುವ ಸರಕು ಅಥವಾ ಸರಕುಗಳ ಯಾವುದೇ ಯಾದೃಚ್ಛಿಕ ಮಾದರಿಯನ್ನು ಅನಿಯಮಿತ ರೀತಿಯಲ್ಲಿ ಆಯ್ಕೆ ಮಾಡಲಾಗುತ್ತದೆ.
- ಈ ಎಲ್ಇಡಿ ಉತ್ಪನ್ನಗಳು ಸುರಕ್ಷತಾ ಮಾನದಂಡಗಳನ್ನು ಪೂರೈಸುತ್ತವೆಯೇ ಎಂದು ಪರೀಕ್ಷಿಸಲಾಗುವುದು.
- ಸರಕುಗಳ ಮಾದರಿಗಳನ್ನು ಪರೀಕ್ಷಿಸಲು ಬ್ಯೂರೋ ಆಫ್ ಇಂಡಿಯಾ ಸ್ಟ್ಯಾಂಡರ್ಡ್ಸ್ (ಬಿಐಎಸ್) ಲ್ಯಾಬ್ ಗಳಿಗೆ ಕಳುಹಿಸಲಾಗುವುದು, ತನಿಖೆ 7 ದಿನಗಳಲ್ಲಿ ಪೂರ್ಣಗೊಳ್ಳುತ್ತದೆ.
- ಮಾನದಂಡಗಳನ್ನು ಪೂರೈಸುವ ಮಾದರಿಗಳ ರವಾನೆಗೆ ಮಾತ್ರ ಕಂದಾಯ ಇಲಾಖೆಯಿಂದ ಅನುಮತಿ ನೀಡಲಾಗುತ್ತದೆ.
- ಆಯ್ಕೆ ಮಾಡಿದ ಮಾದರಿಗಳು ಮಾನದಂಡಗಳನ್ನು ಪೂರೈಸದಿದ್ದರೆ, ಅವುಗಳನ್ನು ಹಿಂದಕ್ಕೆ ಕಳುಹಿಸಲಾಗುತ್ತದೆ ಅಥವಾ ನಾಶಪಡಿಸಲಾಗುತ್ತದೆ

ಚೀನಾ ಎಲೆಕ್ಟ್ರಿಕ್ ವಸ್ತುಗಳಿಗೆ ಭಾರತವೇ ಮಾರುಕಟ್ಟೆ
ಭಾರತವು ಚೀನಾದಲ್ಲಿ ಉತ್ಪಾದಿಸಲಾಗುವ ಎಲೆಕ್ಟ್ರಾನಿಕ್ ವಸ್ತುಗಳಿಗೆ ದೊಡ್ಡ ಮಾರುಕಟ್ಟೆಯಾಗಿದೆ. ಏಷ್ಯಾ ಖಂಡದಲ್ಲೇ ಅತಿಹೆಚ್ಚು ಪ್ರಮಾಣದ ಎಲೆಕ್ಟ್ರಾನಿಕ್ ಮತ್ತು ಎಲ್ಇಡಿ ಉಪಕರಗಳು ಚೀನಾದಿಂದ ಭಾರತಕ್ಕೆ ಆಮದು ಆಗುತ್ತವೆ. ಇದೀಗ ಕೇಂದ್ರ ಕೇಂದ್ರ ಸರ್ಕಾರದ ತೀರ್ಮಾನದಿಂದ ಚೀನಾದ ಎಲೆಕ್ಟ್ರಾನಿಕ್ ವಲಯಕ್ಕೆ ಭಾರಿ ಹೊಡೆತ ಕೊಡುವ ಸಾಧ್ಯತೆಗಳಿವೆ.
Recommended Video

ಚೀನಾದ ವಿರುದ್ಧ ಕೇಂದ್ರ ಸರ್ಕಾರದ "ವಾಣಿಜ್ಯ ಸಮರ"
- ಸ್ಥಳೀಯ ಮಟ್ಟದಲ್ಲಿ ಉತ್ಪಾದನೆಗೆ ಒತ್ತು ನೀಡುವ ಉದ್ದೇಶ ಹೊಂದಲಾಗಿದೆ. ಈ ನಿಟ್ಟಿನಲ್ಲಿ ಕಳೆದ ಜುಲೈನಿಂದಲೇ ಭಾರತವು ಚೀನಾದಿಂದ ಕಲರ್ ಟಿವಿಗಳನ್ನು ಆಮದು ಮಾಡಿಕೊಳ್ಳುವದನ್ನು ನಿಷೇಧಿಸಿದೆ.
- ರಾಷ್ಟ್ರೀಯ ಭದ್ರತಾ ಕಾಳಜಿಗಳನ್ನು ಗಮನದಲ್ಲಿಟ್ಟುಕೊಂಡು ಸಕ್ಕರೆ ಕಂಪೆನಿಗಳನ್ನು ಸರ್ಕಾರಿ ಖರೀದಿಯಲ್ಲಿ ಭಾಗವಹಿಸುವುದನ್ನು ನಿಷೇಧಿಸಲಾಗಿದೆ.
- ಕಳೆದ ಏಪ್ರಿಲ್ ತಿಂಗಳಿನಲ್ಲಿ ಭಾರತವು ತನ್ನ ವಿದೇಶಿ ನೇರ ಬಂಡವಾಳ ಹೂಡಿಕೆಯ ನಿಯಮಗಳನ್ನು ಬದಲಾಯಿಸಿತು.
- ವಿದೇಶಿ ನೇರ ಬಂಡವಾಳ ಹೂಡಿಕೆಗೂ ಮೊದಲು ಕೇಂದ್ರ ಸರ್ಕಾರದಿಂದ ಅನುಮತಿ ಪಡೆದುಕೊಳ್ಳುವುದನ್ನು ಕಡ್ಡಾಯಗೊಳಿಸಲಾಯಿತು.
- Tik Tak ಮತ್ತು Pub-G ಸೇರಿದಂತೆ ವಿವಿಧ ಚೀನಾದ ಅಪ್ಲಿಕೇಷನ್ ಗಳನ್ನು ನಿಷೇಧಿಸಲಾಗಿತ್ತು.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ?












Click it and Unblock the Notifications