ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ಮುಂಬೈನಲ್ಲಿ ಮಳೆಯಿಂದ ಮುಂದಿನ 24 ಗಂಟೆವರೆಗೂ ರೆಡ್ ಅಲರ್ಟ್

|
Google Oneindia Kannada News

ಮುಂಬೈ, ಜುಲೈ 8: ಮುಂಬೈನಲ್ಲಿ ಶುಕ್ರವಾರ ಮಧ್ಯಾಹ್ನ 1 ಗಂಟೆಯಿಂದ ಮುಂದಿನ 24 ಗಂಟೆಗಳವರೆಗೂ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ಹವಾಮಾನ ಇಲಾಖೆಯು ರೆಡ್ ಅಲರ್ಟ್ ಅನ್ನು ಘೋಷಿಸಿದೆ.

ಮುಂಬೈ ಮಹಾನಗರದಲ್ಲಿ ರೆಡ್ ಮತ್ತು ಆರೆಂಜ್ ಅಲರ್ಟ್ ಜಾರಿಯಲ್ಲಿ ಇರುವ ಹಿನ್ನೆಲೆ ಮುಂಬೈನ ಬೀಚ್‌ಗಳನ್ನು ಬೆಳಿಗ್ಗೆ 6 ರಿಂದ 10 ರವರೆಗೆ ಮಾತ್ರ ಸಾರ್ವಜನಿಕರ ಪ್ರದೇಶಕ್ಕೆ ಮುಕ್ತವಾಗಿ ಇರುತ್ತವೆ ಎಂದು ಬೃಹನ್‌ಮುಂಬೈ ಮಹಾನಗರ ಪಾಲಿಕೆಯು ಶುಕ್ರವಾರ ತಿಳಿಸಿದೆ.

ಮಳೆಯ ಆರ್ಭಟ ಜೋರು; ಆರೋಗ್ಯ ರಕ್ಷಣೆಗೆ ಸಲಹೆಗಳುಮಳೆಯ ಆರ್ಭಟ ಜೋರು; ಆರೋಗ್ಯ ರಕ್ಷಣೆಗೆ ಸಲಹೆಗಳು

ದೇಶದ ವಿವಿಧ ಕಡಲತೀರಗಳಲ್ಲಿ ಪ್ರತಿ ವರ್ಷ ಸಂಭವಿಸುವ ಮುಳುಗಡೆ ಘಟನೆಗಳನ್ನು ಪರಿಗಣಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಮುಂಬೈ ಕಡಲ ತೀರದಲ್ಲಿ ಪೊಲೀಸ್ ಇಲಾಖೆ, ಅಗ್ನಿಶಾಮಕ ಇಲಾಖೆ, ಬೀಚ್‌ಗಳಲ್ಲಿ ಜೀವರಕ್ಷಕ ಮತ್ತು ನಿರ್ವಹಣಾ ಸಿಬ್ಬಂದಿಗೂ ಎಚ್ಚರಿಕೆ ಸಂದೇಶವನ್ನು ನೀಡಲಾಗಿದೆ.

India Meteorological Department Issues Red Alert In Mumbai From 1 PM Till Next 24 Hours

ಮಹಾರಾಷ್ಟ್ರದಲ್ಲಿ ಎಡೆಬಿಡದೇ ಸುರಿಯುತ್ತಿರುವ ಮಳೆ:

ಮುಂಬೈನಲ್ಲಿ 40 ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಂಬೈ, ಥಾಣೆ, ಪಾಲ್ಘರ್, ರಾಯಗಢ, ರತ್ನಗಿರಿ ಸಿಂಧುದುರ್ಗದಲ್ಲಿ ಶುಕ್ರವಾರ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಮಹಾರಾಷ್ಟ್ರದ ಕೆಲವು ಪ್ರದೇಶಗಳಲ್ಲಿ ಕಳೆದ ಕೆಲವು ದಿನಗಳಿಂದಲೂ ಧಾರಾಕಾರ ಮಳೆಯಾಗುತ್ತಿದೆ.

ಶುಕ್ರವಾರ ಮಧ್ಯಾಹ್ನ 1 ಗಂಟೆಯಿಂದ ಮುಂದಿನ 24 ಗಂಟೆಗಳವರೆಗೆ ಭಾರತೀಯ ಹವಾಮಾನ ಇಲಾಖೆಯು ಮುಂಬೈನಲ್ಲಿ ರೆಡ್ ಅಲರ್ಟ್ ಘೋಷಿಸಿದೆ. ಹವಾಮಾನ ಕಚೇರಿಯು "ತಮ್ಮ ಪ್ರಯಾಣ ಮತ್ತು ವೇಳಾಪಟ್ಟಿಯನ್ನು ತಿದ್ದುಪಡಿ ಮಾಡಿಕೊಳ್ಳುವಂತೆ ಸಾರ್ವಜನಿಕರಿಗೆ ಸೂಚನೆ ನೀಡಿದೆ.

English summary
India Meteorological Department Issues Red Alert In Mumbai From 1 PM Till Next 24 Hours. Know More Weather Report.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X