India-Pakistan Tensions: ಭಾರತ-ಪಾಕಿಸ್ತಾನದ ನಡುವೆ ಉದ್ವಿಗ್ನತೆ; ಅಮೆರಿಕ ಮಧ್ಯಸ್ಥಿಕೆ ತಿರಸ್ಕಾರ
India-Pakistan Tensions: ಇದೀಗ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಇದಕ್ಕೆ ಪ್ರಮುಖ ಕಾರಣವೇ ನರಿ ಬುದ್ಧಿ ಪಾಕಿಸ್ತಾನ. ಇನ್ನು ಈ ಉದ್ವಿಗ್ನತೆಯನ್ನು ಶಮನಗೊಳಿಸಲು ಮಧ್ಯಸ್ಥಿಕೆ ವಹಿಸುವುದಾಗಿ ಹೇಳಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರಸ್ತಾವವನ್ನು ಭಾರತ ತಿರಸ್ಕರಿಸಿದೆ.
ಟ್ರಂಪ್ ಪ್ರಸ್ತಾವಕ್ಕೆ ಧನ್ಯವಾದ ತಿಳಿಸಿದ ಭಾರತ, ಒಂದು ವೇಳೆ ಸಾಧ್ಯ ಆದರೆ ಭಯೋತ್ಪಾದಕ ಸಂಘಟನೆಗಳಿಗೆ ನೆರವಾಗುವುದನ್ನು ನಿಲ್ಲಿಸುವಂತೆ ಇಸ್ಲಾಮಾಬಾದ್‌ಗೆ ಹೇಳಿ ಎಂದು ಹೇಳಿದೆ. ಈ ಬಗ್ಗೆ ವಾಷಿಂಗ್ಟನ್‌ನಲ್ಲಿರುವ ಭಾರತ ರಾಯಭಾರಿ ವಿನಯ್ ಮೋಹನ್ ಕ್ವಾಟ್ರಾ ಅಮೆರಿಕಕ್ಕೆ ಪತ್ರ ಬರೆದಿದ್ದಾರೆ.

ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಅವರ ಮೊದಲ ಅವಧಿಯಲ್ಲಿ 2020ರ ಜೂನ್ 15ರಂದು ಗ್ಯಾಲ್ವನ್ ಕಣಿವೆಯಲ್ಲಿ ಭಾರತ ಮತ್ತು ಚೀನಾ ಸೈನಿಕರು ಮುಖಾಮುಖಿಯಾದ ಸಂದರ್ಭದಲ್ಲೂ ಮಧ್ಯಸ್ಥಿಕೆ ವಹಿಸುವ ಅಮೆರಿಕದ ಪ್ರಸ್ತಾವವನ್ನು ಭಾರತ ತಿರಸ್ಕರಿಸಿತ್ತು. ಇದೀಗ ಮತ್ತೆ ತಿರಸ್ಕರಿಸಿದೆ.
ಏಪ್ರಿಲ್ 22ರಂದು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪಾಕಿಸ್ತಾನದ ಉಗ್ರರು ದಾಳಿ ನಡೆಸಿದ್ದು, ಈ ದಾಳಿಯಲ್ಲಿ 26 ಅಮಾಯಕ ಜನರು ಪ್ರಾಣ ಕಳೆದುಕೊಂಡಿದ್ದರು. ಇದಕ್ಕೆ ಪ್ರತ್ಯುತ್ತರವಾಗಿ ಭಾರತ ಕೂಡ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿಇರುವ ಉಗ್ರರ 9 ನೆಲೆಗಳ ಮೇಲೆ ದಾಳಿ ನಡೆಸಿ ಅವುಗಳನ್ನು ಧ್ವಂಸ ಮಾಡಿತ್ತು. ಆದರೂ ಬುದ್ಧಿ ಕಲಿಯದ ಪಾಕ್ ತನ್ನ ನರಿ ಬುದ್ಧಿ ತೋರಿಸಿದೆ.
'ಆಪರೇಷನ್ ಸಿಂಧೂರ' ಕಾರ್ಯಾಚರಣೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಪ್ರತಿಕ್ರಿಯಿಸಿದ ಟ್ರಂಪ್, ಇದು ಇನ್ನೂ ಬೇರೆ ಸ್ವರೂಪ ಪಡೆಯುವುದನ್ನು ತಡೆಯಬೇಕು. ಇದು ಗಂಭೀರ, ನಾನು ಎರಡೂ ದೇಶಗಳ ನಾಯಕರನ್ನು ಬಗ್ಗೆ ಚೆನ್ನಾಗಿ ತಿಳಿದುಕೊಂಡಿದ್ದೇನೆ. ಆದ್ದರಿಂದ ಇದನ್ನು ಪರಿಹರಿಸುವ ನಿಟ್ಟಿನಲ್ಲಿ ಉಭಯ ನಾಯಕರು ಪ್ರಯತ್ನಿಸುತ್ತಾರೆ ಎಂಬ ಭರವಸೆ ಇದೆ. ಇದನ್ನು ಇಲ್ಲಿಗೆ ನಿಲ್ಲಿಸಬೇಕು ಎಂದು ಹೇಳಿದ್ದರು. ಇನ್ನು ಅಮೆರಿಕ ಅಷ್ಟೇ ಅಲ್ಲದೆ, ಭಾರತ ಮತ್ತು ಪಾಕಿಸ್ತಾನ ಮಧ್ಯಸ್ಥಿಕೆ ವಹಿಸುವ ಯಾವುದೇ ರಾಷ್ಟ್ರದ ಪ್ರಸ್ತಾವವನ್ನು ಭಾರತ ನಯವಾಗಿ ತಿರಸ್ಕರಿಸಿದೆ.












Click it and Unblock the Notifications