ಪಾಕ್ ಮಾತುಕತೆ ಬೇಡಿಕೆ ತಿರಸ್ಕರಿಸಿ, ಕಪಾಳಕ್ಕೆ ಬಾರಿಸಿದ ಭಾರತ!
ನವದೆಹಲಿ, ಸೆಪ್ಟೆಂಬರ್ 21 : ಸೌಹಾರ್ದ ಮಾತುಕತೆ ನಡೆಸಲು ಪಾಕಿಸ್ತಾನ ಇಟ್ಟಿದ್ದ ಬೇಡಿಕೆಯನ್ನು ಭಾರತ ತಿರಸ್ಕರಿಸಿದೆ. ಪಾಕಿಸ್ತಾನದ ಹೊಸ ಸರ್ಕಾರ ಮಾತುಕತೆಯ ಬೇಡಿಕೆಯನ್ನು ಮುಂದಿಟ್ಟಿತ್ತು. ಆದರೆ, ಗಡಿಯಲ್ಲಿ ಉಗ್ರರ ಚಟುವಟಿಕೆಗೆ ಕಡಿವಾಣ ಹಾಕಲು ಸರ್ಕಾರ ವಿಫಲವಾಗಿತ್ತು.
ಶುಕ್ರವಾರ ಪಾಕಿಸ್ತಾನದ ಜೊತೆ ಯಾವುದೇ ಮಾತುಕತೆ ನಡೆಸುವುದಿಲ್ಲ ಎಂದು ಭಾರತ ಸ್ಪಷ್ಟಪಡಿದೆ. ಸೆಪ್ಟೆಂಬರ್ ಅಂತ್ಯದಲ್ಲಿ ನ್ಯೂಯಾರ್ಕ್‌ನಲ್ಲಿ ಭಾರತದ ಜೊತೆ ಪಾಕಿಸ್ತಾನ ಮಾತುಕತೆ ನಡೆಸಲು ಬೇಡಿಕೆ ಇಟ್ಟಿತ್ತು.

ನ್ಯೂಯಾರ್ಕ್‌ನಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆ ನಡೆಯಲಿದೆ. ಈ ಸಭೆಯ ವೇಳೆ ಉಭಯ ದೇಶಗಳ ನಡುವೆ ಮಾತುಕತೆ ನಡೆಸಬಹುದು ಎಂದು ಪಾಕಿಸ್ತಾನ ಆಹ್ವಾನ ನೀಡಿತ್ತು. ಆದರೆ, ಭಾರತ ಈ ಆಹ್ವಾನವನ್ನು ತಳ್ಳಿಹಾಕಿದೆ.
ಇಮ್ರಾನ್ ಖಾನ್ ಅವರು ಪಾಕಿಸ್ತಾನದ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡಿದ್ದು, ದೇಶದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ನೂತನ ಪ್ರಧಾನಿಗೆ ಅಭಿನಂದನೆ ಸಲ್ಲಿಸಿ ಭಾರತದ ಪ್ರಧಾನಿ ನರೇಂದ್ರ ಮೋದಿ ಪತ್ರ ಬರೆದಿದ್ದರು.
ಈ ಪತ್ರಕ್ಕೆ ಧನ್ಯವಾದಗಳನ್ನು ತಿಳಿಸಿದ್ದ ಪಾಕಿಸ್ತಾನ ಪ್ರತ್ಯುತ್ತರ ಬರೆಯುವಾಗ ಶಾಂತಿ ಮಾತುಕತೆಯ ಪ್ರಸ್ತಾಪವನ್ನು ಮುಂದಿಟ್ಟಿತ್ತು. ಭಾರತದ ವಿದೇಶಾಂಗ ವ್ಯವಹಾರ ಸಚಿವೆ ಸುಷ್ಮಾ ಸ್ವರಾಜ್ ಮತ್ತು ಪಾಕ್ ಸಚಿವ ಶಾ ಮೆಹಮೂದ್ ಖುರೇಶಿ ನಡುವೆ ಮಾತುತಕೆ ನಡೆಯಲಿ ಎಂದು ಪಾಕಿಸ್ತಾನ ಹೇಳಿತ್ತು.
ಭಾರತ ಒಪ್ಪಿದರೆ ಎರಡೂ ದೇಶಗಳಿಗೆ ಹೊಂದಿಕೆಯಾಗುವ ದಿನಾಂಕ ನಿಗದಿ ಮಾಡುತ್ತೇವೆ. ಈ ಭೇಟಿಗೆ ಯಾವುದೇ ಕಾರ್ಯಸೂಚಿ ನಿಗದಿ ಮಾಡಿಲ್ಲ ಎಂದು ಪಾಕಿಸ್ತಾನ ಹೇಳಿತ್ತು. ಆದರೆ, ಭಾರತ ಈಗ ಮಾತುಕತೆಯ ಪ್ರಸ್ತಾಪ ತಳ್ಳಿ ಹಾಕಿದೆ.
2015ರಲ್ಲಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಇಸ್ಲಾಮಾಬಾದ್‌ಗೆ ಭೇಟಿ ನೀಡಿದ್ದರು. ಆಗ ಉಭಯ ದೇಶಗಳ ನಡುವೆ ಮಾತುಕತೆ ನಡೆದಿತ್ತು. 2016ರಲ್ಲಿ ನಡೆದ ಪಠಾಣ್ ಕೋಟ್ ವಾಯುನೆಲೆ ಮೇಲಿನ ದಾಳಿ ಬಳಿಕ ಉಭಯ ದೇಶಗಳ ನಡುವೆ ಮಾತುಕತೆ ನಡೆದಿಲ್ಲ.
ಪಾಕಿಸ್ತಾನ ಭಾರತದ ಜೊತೆ ಮಾತುಕತೆಯ ಪ್ರಸ್ತಾಪ ಇಟ್ಟಿತ್ತು. ಆದರೆ, ಜಮ್ಮು-ಕಾಶ್ಮೀರ ಗಡಿಯಲ್ಲಿ ಉಗ್ರರ ಚಟುವಟಿಕೆಗೆ ಕಡಿವಾಣ ಹಾಕಲು ದೇಶ ವಿಫಲವಾಗಿದೆ. ಶುಕ್ರವಾರ ನಾಲ್ವರು ಪೊಲೀಸರನ್ನು ಉಗ್ರರು ಅಪಹರಣ ಮಾಡಿದ್ದು, ಮೂವರನ್ನು ಹತ್ಯೆ ಮಾಡಿದ್ದಾರೆ.
-
ಎಲ್ಪಿಜಿ ಸಿಲಿಂಡರ್ ಬೆಲೆ ಏರಿಕೆ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್ಗಳಲ್ಲಿ ಆಹಾರ ದರ ಏರಿಸಲು ಚಿಂತನೆ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ












Click it and Unblock the Notifications