ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತದ ಲಸಿಕೆ ಉತ್ಪಾದನಾ ಸಾಮರ್ಥ್ಯ ಜಗತ್ತಿನ ಅತಿ ದೊಡ್ಡ ಆಸ್ತಿ: ವಿಶ್ವಸಂಸ್ಥೆ ಮುಖ್ಯಸ್ಥ ಗುಟೆರಸ್

|
Google Oneindia Kannada News

ವಿಶ್ವಸಂಸ್ಥೆ, ಜನವರಿ 30: ಜಾಗತಿಕ ಲಸಿಕೆ ಆಂದೋಲನದಲ್ಲಿ ಪ್ರಮುಖ ಪಾತ್ರ ವಹಿಸುವಂತೆ ಭಾರತಕ್ಕೆ ಕರೆ ನೀಡಿರುವ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೊನಿಯೊ ಗುಟೆರಸ್, ಭಾರತದಲ್ಲಿನ ಲಸಿಕೆ ಉತ್ಪಾದನಾ ಸಾಮರ್ಥ್ಯವು ಇಂದು ಜಗತ್ತು ಹೊಂದಿರುವ ಅತ್ಯುತ್ತಮ ಆಸ್ತಿಯಾಗಿದೆ ಎಂದು ಶ್ಲಾಘಿಸಿದ್ದಾರೆ.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಗುಟೆರಸ್, 'ಭಾರತವೇ ಅಭಿವೃದ್ಧಿಪಡಿಸಿದ ಲಸಿಕೆಗಳ ಬೃಹತ್ ಪ್ರಮಾಣದ ಉತ್ಪಾದನೆ ಭಾರತದಲ್ಲಿ ನಡೆಯುತ್ತಿದೆ ಎನ್ನುವುದು ನನಗೆ ತಿಳಿದಿದೆ. ಅದಕ್ಕಾಗಿ ಭಾರತದ ಸಂಸ್ಥೆಗಳೊಂದಿಗೆ ನಾವು ಸಂಪರ್ಕದಲ್ಲಿದ್ದೇವೆ. ಜಾಗತಿಕ ಲಸಿಕೆ ಆಂದೋಲನವನ್ನು ಶುರುಮಾಡುವಲ್ಲಿ ಭಾರತವು ಪ್ರಮುಖ ಪಾತ್ರ ವಹಿಸಲು ಅಗತ್ಯವಾದ ಎಲ್ಲ ಸಾಧನಗಳನ್ನೂ ಹೊಂದಲಿದೆ ಎಂಬ ಭರವಸೆ ನಮಗಿದೆ' ಎಂದರು.

ಭಾರತ: 14 ದಿನಗಳಲ್ಲಿ 33 ಲಕ್ಷಕ್ಕೂ ಹೆಚ್ಚು ಮಂದಿಗೆ ಕೊರೊನಾ ಲಸಿಕೆ ಭಾರತ: 14 ದಿನಗಳಲ್ಲಿ 33 ಲಕ್ಷಕ್ಕೂ ಹೆಚ್ಚು ಮಂದಿಗೆ ಕೊರೊನಾ ಲಸಿಕೆ

'ಜಗತ್ತು ಇಂದು ಹೊಂದಿರುವ ಅತ್ಯುತ್ತಮ ಆಸ್ತಿ ಎಂದರೆ ಭಾರತದಲ್ಲಿನ ಲಸಿಕೆ ಉತ್ಪಾದನಾ ಸಾಮರ್ಥ್ಯ. ಜಗತ್ತು ಇದನ್ನು ಅರ್ಥ ಮಾಡಿಕೊಂಡು ಸಂಪೂರ್ಣವಾಗಿ ಬಳಸಿಕೊಳ್ಳುವ ವಿಶ್ವಾಸ ಹೊಂದಿದ್ದೇನೆ' ಎಂದು ತಿಳಿಸಿದರು.

 Indias Vaccine Production Capacity Best Asset World Has Today: UN Chief Guterres

'ಜಗತ್ತಿನಾದ್ಯಂತ ಔಷಧಗಳು ಲಭ್ಯವಾಗುವಂತೆ ಮಾಡುವುದು ಪ್ರಜಾಪ್ರಭುತ್ವೀಕರಣದ ಅತ್ಯಂತ ಮಹತ್ವದ ಅಂಶ ಎನ್ನುತ್ತೇನೆ. ಈಗಾಗಲೇ ಅಸ್ತಿತ್ವದಲ್ಲಿರುವ ಕೆಲವು ಲಸಿಕೆಗಳನ್ನು ಜಗತ್ತಿನಾದ್ಯಂತ ಉತ್ಪಾದಿಸಲು ಅನುಕೂಲವಾಗುವಂತೆ ಕಂಪೆನಿಗಳಿಗೆ ಪರವಾನಗಿ ನೀಡುವಂತೆ ಇಂದು ಮತ್ತೆ ಮನವಿ ಮಾಡುತ್ತೇನೆ' ಎಂದು ಹೇಳಿದರು.

ಐದು ರಾಜ್ಯಗಳಲ್ಲಿ 5,000 ಡೋಸ್ ಕೋವಿಡ್ ಲಸಿಕೆ ವ್ಯರ್ಥಐದು ರಾಜ್ಯಗಳಲ್ಲಿ 5,000 ಡೋಸ್ ಕೋವಿಡ್ ಲಸಿಕೆ ವ್ಯರ್ಥ

ಭಾರತವು ನೆರೆಯ ದೇಶಗಳಿಗೆ 55 ಲಕ್ಷ ಡೋಸ್‌ಗಳಿಗೂ ಅಧಿಕ ಕೊರೊನಾ ವೈರಸ್ ಲಸಿಕೆಗಳನ್ನು ಉಡುಗೊರೆಯಾಗಿ ನೀಡಿದೆ.

English summary
United Nations Secretary- Ganeral Antonio Guterres said the vaccine production capacity of India is the best asset that the world has today
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X