ಇಂದಿನಿಂದ ಸ್ವಿಸ್ ಖಾತೆ ರಹಸ್ಯ ಬಯಲು, ಭಾರತೀಯರ ಠೇವಣಿ ಎಷ್ಟಿದೆ?
ನವದೆಹಲಿ, ಸೆಪ್ಟೆಂಬರ್ 1: ಭಾರತ ಹಾಗೂ ಸ್ವಿಸ್ ಬ್ಯಾಂಕ್‌ನ ರಹಸ್ಯಗಳು ದಶಕಗಳ ಹಳೆಯ ಸುದ್ದಿಯಾಗಿದೆ.
ಆದರೆ ಇಂದಿನಿಂದ ಸ್ವಿಸ್ ಬ್ಯಾಂಕಿನ ಕತೆಗಳು ರಹಸ್ಯವಾಗಿರಲು ಸಾಧ್ಯವಿಲ್ಲ, ಸ್ವಿಸ್ ಖಾತೆಯಲ್ಲಿನ ಎಲ್ಲಾ ಮಾಹಿತಿಗಳು ಇನ್ನು ನೇರವಾಗಿ ಭಾರತ ಸರ್ಕಾರಕ್ಕೆ ಇಂದಿನಿಂದ ರವಾನೆಯಾಗಲಿದೆ.
2018 ಕ್ಯಾಲೆಂಡರ್ ವರ್ಷದಿಂದ ಹಿಡಿದು ಸ್ವಿಸ್ ಬ್ಯಾಂಕ್‌ನಲ್ಲಿನ ಎಲ್ಲಾ ಭಾರತೀಯರ ಖಾತೆಗಳ ಮಾಹಿತಿ ಇಂದಿನಿಂದ ಭಾರತಕ್ಕೆ ವರ್ಗಾವಣೆಯಾಗಲಿದೆ.

ಖಾತೆದಾರರ ವಿವರ, ಹಣ, ವರ್ಗಾವಣೆ ಖಾತೆ ರದ್ದತಿ ಸೇರಿ ಪ್ರತಿ ವಿವರಗಳು ಕೂಡ ತನ್ನಿಂತಾನೆ ವರ್ಗಾವಣೆಯಾಗಲಿದೆ.
ಕಪ್ಪು ಹಣ ನಿಯಂತ್ರಣ ಸಲುವಾಗಿ ಭಾರತ ಸರ್ಕಾರ ಈ ಐತಿಹಾಸಿಕ ಒಪ್ಪಂದಕ್ಕೆ ಸಹಿ ಹಾಕಿತ್ತು. ಭಾರತದ ಸಿಬಿಟಿಡಿ ಹಾಗೂ ಸ್ವಿಸ್ ಬ್ಯಾಂಕ್ ನಡುವೆ ಎಲ್ಲಾ ನೀತಿ-ನಿಯಮಗಳು ಅಂತಿಮಗೊಂಡ ಬಳಿಕ ನೇರ ಮಾಹಿತಿ ರವಾನೆ ವ್ಯವಸ್ಥೆ ಅಂತಿಮಗೊಂಡಿದೆ.
ಒಂದು ಕಾಲದಲ್ಲಿ ಸಾವಿರಾರು ಕೋಟಿ ಹಣವನ್ನು ಸ್ವಿಸ್ ಬ್ಯಾಂಕ್‌ನಲ್ಲಿ ಭಾರತೀಯರು ಇರಿಸಿದ್ದರು. ಆದರೆ ಈ ಒಪ್ಪಂದ ಆಗುತ್ತಿದ್ದಂತೆ ಅಲ್ಲಿಂದ ಹಣವನ್ನು ಬೇರೆಡೆ ವರ್ಗಾಯಿಸಲಾಗಿದೆ ಎಂಬ ಆರೋಪವಿದೆ. ಹೀಗಾಗಿ ವರ್ಷದಿಂದ ವರ್ಷಕ್ಕೆ ಸ್ವಿಸ್ ಬ್ಯಾಂಕ್ ಖಾತೆಯಲ್ಲಿನ ಹಣ ಕಡಿಮೆಯಾಗುತ್ತಿದೆ.
ಸಧ್ಯಕ್ಕೆ ಸ್ವಿಸ್‌ಬ್ಯಾಂಕ್‌ನಲ್ಲಿ ಭಾರತೀಯರು ಕೇಲ 2,500 ಕೋಟಿ ರೂ ಠೇವಣಿ ಹೊಂದಿದ್ದಾರೆ ಎನ್ನಲಾಗುತ್ತಿದೆ.
ಅಷ್ಟಕ್ಕೂ ಸ್ವಿಸ್ ಬ್ಯಾಂಕ್‌ನಲ್ಲಿ ಖಾತೆ ಹೊಂದಿದ್ದರೆಲ್ಲರೂ ಅಕ್ರಮ ಖಾತೆ ಎಂದೇನಲ್ಲ, ತೆರಿಗೆ ಪಾವತಿಸಿ ಕಾನೂನು ಬದ್ಧವಾಗಿಯೂ ಖಾತೆ ಹೊಂದಲು ಅವಕಾಶವಿದೆ. ಹೀಗಾಗಿ ಕಪ್ಪು ಹಣ ಹೊಂದಿರುವವರೂ ಈ ಬ್ಯಾಂಕ್‌ನಿಂದ ಹಣ ವರ್ಗಾಯಿಸಿದ್ದಾರೆ ಎನ್ನುವ ಆರೋಪಗಳೂ ಇವೆ.
ಈ ರೀತಿ ಕಪ್ಪು ಹಣವನ್ನು ಪೋಷಿಸುವ ಅಥವಾ ತೆರಿಗೆ ಸ್ವರ್ಗ ಬ್ಯಾಂಕ್‌ಗಳ ಜೊತೆಗೂ ಒಪ್ಪಂದ ಮಾಡಿಕೊಳ್ಳುವವರೆಗೂ ಕಪ್ಪು ಹಣ ನಿಯಂತ್ರಣ ಅಸಾಧ್ಯ.
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications